India vs Australia: ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ತಂಡದ ಮಾಸ್ಟರ್ ಪ್ಲ್ಯಾನ್..!
India vs Australia: ಟೀಮ್ ಇಂಡಿಯಾದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಅವರ ಭೀತಿ ಕೂಡ ಆಸ್ಟ್ರೇಲಿಯಾ ತಂಡವನ್ನು ಕಾಡುತ್ತಿದೆ. ಇದಕ್ಕಾಗಿ ಜಮ್ಮು-ಕಾಶ್ಮೀರದ ಅಬೀದ್ ಮುಷ್ತಾಕ್ರನ್ನು ಕರೆಸಿಕೊಳ್ಳಲಾಗಿದೆ.

India vs Australia: ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ (Border – Gavaskar Trophy) ಟೆಸ್ಟ್ ಸರಣಿಯು ಫೆಬ್ರವರಿ 9 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಈಗಾಗಲೇ ಆಸ್ಟ್ರೇಲಿಯಾ ತಂಡ ಬೆಂಗಳೂರಿಗೆ ಆಗಮಿಸಿದೆ. ಅಷ್ಟೇ ಅಲ್ಲದೆ ಆಲೂರಿನ ಕೆಎಸ್‌ಸಿಎ ಮೈದಾನದಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಆಸೀಸ್ ಬ್ಯಾಟ್ಸ್ಮನ್ಗಳು ಅಭ್ಯಾಸ ನಡೆಸುತ್ತಿರುವುದು ಭಾರತೀಯ ಸ್ಪಿನ್ನರ್ಗಳ ಜೊತೆ ಎಂಬುದೇ ವಿಶೇಷ. ಅಂದರೆ ಭಾರತ ತಂಡದಲ್ಲಿರುವ ಸ್ಪಿನ್ನರ್ಗಳ ಶೈಲಿಯಲ್ಲಿ ಚೆಂಡೆಸೆಯು ಸಾಮರ್ಥ್ಯ ಹೊಂದಿರುವ ಆಟಗಾರರನ್ನು ನೆಟ್ ಪ್ರಾಕ್ಟೀಸ್ಗಾಗಿ ಬಳಸಿಕೊಳ್ಳುತ್ತಿದೆ.
ಅದರಂತೆ ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಬೌಲಿಂಗ್ ಶೈಲಿ ಹೊಂದಿರುವ ಮಹೀಶ್ ಪಿಥಿಯಾ ಅವರನ್ನು ಕರೆಸಿಕೊಳ್ಳಲಾಗಿದೆ. ದೇಶೀಯ ಕ್ರಿಕೆಟ್ನಲ್ಲಿ ಬರೋಡಾ ಪರ ಆಡುವ ಮಹೀಶ್ ಥೇಟ್ ಅಶ್ವಿನ್ ರೀತಿಯಲ್ಲಿ ಸ್ಪಿನ್ ಮೋಡಿ ಮಾಡುತ್ತಾರೆ. ಇದೇ ಕಾರಣದಿಂದಾಗಿ ಆಸ್ಟ್ರೇಲಿಯಾ ಟೀಮ್ ಮ್ಯಾನೇಜ್ಮೆಂಟ್ ನೆಟ್ ಪ್ರಾಕ್ಟೀಸ್ಗಾಗಿ ಮಹೀಶ್ ಪಿಥಿಯಾ ಅವರನ್ನು ಕರೆಸಿಕೊಂಡಿದೆ. ಈ ಮೂಲಕ ಅಶ್ವಿನ್ ಅವರನ್ನು ಎದುರಿಸಲು ಭಾರತೀಯ ಸ್ಪಿನ್ನರ್ನೊಂದಿಗೆ ಆಸ್ಟ್ರೇಲಿಯಾ ಬ್ಯಾಟರ್ಗಳು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ.
ಇನ್ನು ಟೀಮ್ ಇಂಡಿಯಾದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಅವರ ಭೀತಿ ಕೂಡ ಆಸ್ಟ್ರೇಲಿಯಾ ತಂಡವನ್ನು ಕಾಡುತ್ತಿದೆ. ಇದಕ್ಕಾಗಿ ಜಮ್ಮು-ಕಾಶ್ಮೀರದ ಅಬೀದ್ ಮುಷ್ತಾಕ್ರನ್ನು ಕರೆಸಿಕೊಳ್ಳಲಾಗಿದೆ. ಅಬೀದ್ ಕೂಡ ಅಕ್ಷರ್ ರೀತಿಯಲ್ಲೇ ಸ್ಪಿನ್ ಮೋಡಿ ಮಾಡುತ್ತಾರೆ. ಹೀಗಾಗಿ ಆಸ್ಟ್ರೇಲಿಯಾ ಬ್ಯಾಟ್ಸ್ಮನ್ಗಳು ಜಮ್ಮು-ಕಾಶ್ಮೀರದ ಸ್ಪಿನ್ನರ್ ಎಸೆತಗಳಲ್ಲಿ ಹೆಚ್ಚಿನ ಅಭ್ಯಾಸ ನಡೆಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಸ್ಪಿನ್ನರ್ಗಳಿಗಾಗಿ ಆಸೀಸ್ ಪಡೆ ಭರ್ಜರಿ ಪ್ಲ್ಯಾನ್ ರೂಪಿಸಿದೆ.
ಹಾಗೆಯೇ ಹೈದರಾಬಾದ್ ಪರ ಪ್ರಥಮ ದರ್ಜೆ ಕ್ರಿಕೆಟ್ ಆಡಿದ ಎಡಗೈ ಸ್ಪಿನ್ನರ್ ಮೆಹ್ರೋತ್ರಾ ಶಶಾಂಕ್ ಅವರು ಕೂಡ ಆಸ್ಟ್ರೇಲಿಯಾ ತಂಡದ ಅಭ್ಯಾಸ ಶಿಬಿರದಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಇಲ್ಲಿ ಆಸ್ಟ್ರೇಲಿಯಾ ತಂಡದ ಭಯ ಸ್ಪಿನ್ನರ್ಗಳು ಎಂಬುದು ಸ್ಪಷ್ಟ. ಹೀಗಾಗಿಯೇ ಪ್ರಸ್ತುತ ಟೀಮ್ ಇಂಡಿಯಾದಲ್ಲಿರುವ ಸ್ಪಿನ್ ಬೌಲರ್ಗಳ ಶೈಲಿಯಲ್ಲಿ ಚೆಂಡೆಸೆಯಬಲ್ಲ ಸಾಮರ್ಥ್ಯ ಹೊಂದಿರುವ ಆಟಗಾರರನ್ನು ಆಯ್ಕೆ ಮಾಡಿ ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ.
ಮೊದಲೆರಡು ಟೆಸ್ಟ್‌ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.
ಆಸ್ಟ್ರೇಲಿಯಾ ಟೆಸ್ಟ್ ತಂಡ ಹೀಗಿದೆ:
ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ , ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.
ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:
- ಫೆಬ್ರವರಿ 9 ರಿಂದ 13- ಮೊದಲ ಟೆಸ್ಟ್ ಪಂದ್ಯ (ವಿದರ್ಭ ಕ್ರಿಕೆಟ್ ಸ್ಟೇಡಿಯಂ)
- ಫೆಬ್ರವರಿ 17 ರಿಂದ 21- ಎರಡನೇ ಟೆಸ್ಟ್ ಪಂದ್ಯ (ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂ, ದೆಹಲಿ)
- ಮಾರ್ಚ್ 1 ರಿಂದ 5- ಮೂರನೇ ಟೆಸ್ಟ್ ಪಂದ್ಯ (ಧರ್ಮಶಾಲ ಕ್ರಿಕೆಟ್ ಸ್ಟೇಡಿಯಂ, ಹಿಮಾಚಲ್ ಪ್ರದೇಶ್)
- ಮಾರ್ಚ್ 9 ರಿಂದ 13- ನಾಲ್ಕನೇ ಟೆಸ್ಟ್ ಪಂದ್ಯ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್)




