AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ಮುಡಿಗೆ ‘ಸಪ್ತ’ಮ ಕಿರೀಟ

ICC Women's T20 World Cup 2026: ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡವು ಜಾಗತಿಕ ಕ್ರಿಕೆಟ್‌ನಲ್ಲಿ ತನ್ನ ಅಪ್ರತಿಮ ಪ್ರಾಬಲ್ಯವನ್ನು ಮುಂದುವರಿಸಿದೆ. ಈ ಪ್ರಾಬಲ್ಯದೊಂದಿಗೆ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಬರೋಬ್ಬರಿ 7ನೇ ಬಾರಿಗೆ ವಿಶ್ವಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಆಸೀಸ್ ಪಡೆ ಒಂದೇ ಒಂದು ಮ್ಯಾಚ್​ನಲ್ಲಿ ಸೋಲದೇ ವಿಶ್ವ ಕಿರೀಟವನ್ನು ಮುಡಿಗೇರಿಸಿಕೊಂಡಿರುವುದು ವಿಶೇಷ.

ಆಸ್ಟ್ರೇಲಿಯಾ ಮುಡಿಗೆ 'ಸಪ್ತ'ಮ ಕಿರೀಟ
Australia Image Credit source: ICC
ಝಾಹಿರ್ ಯೂಸುಫ್
|

Updated on:Jul 06, 2026 | 7:13 AM

Share

ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ರಲ್ಲಿ ಆಸ್ಟ್ರೇಲಿಯಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಲಾರ್ಡ್ಸ್​ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕಿ ಸೋಫಿ ಮೊಲಿನ್ಯೂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಆರಂಭಿಕರಾಗಿ ಕಣಕ್ಕಿಳಿದ ಆ್ಯಮಿ ಜೋನ್ಸ್ 6 ರನ್​ಗಳಿಸಿ ಔಟಾದರೆ, ಡ್ಯಾನಿ ವ್ಯಾಟ್ 8 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ಇಂಗ್ಲೆಂಡ್ ತಂಡದ ನಾಯಕಿ ನ್ಯಾಟ್ ಸೀವರ್ ಬ್ರಂಟ್ 53 ಎಸೆತಗಳಲ್ಲಿ 58 ರನ್ ಬಾರಿಸಿದರು. ಇನ್ನು ಅಂತಿಮ ಓವರ್​ಗಳ ವೇಳೆ ಅಬ್ಬರಿಸಿದ ಫ್ರೇಯ ಕೆಂಪ್ 28 ಎಸೆತಗಳಲ್ಲಿ 44 ರನ್​ ಚಚ್ಚಿದರು. ಈ ಮೂಲಕ ಇಂಗ್ಲೆಂಡ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 150 ರನ್ ಕಲೆಹಾಕಿತು.

151 ರನ್​ಗಳ ಗುರಿ ಪಡೆದ ಆಸ್ಟ್ರೇಲಿಯಾ ತಂಡಕ್ಕೆ ಬೆತ್ ಮೂನಿ ಸ್ಫೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮೂನಿ 49 ಎಸೆತಗಳಲ್ಲಿ 10 ಫೋರ್​ಗಳೊಂದಿಗೆ 69 ರನ್ ಬಾರಿಸಿದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಫೀಬಿ ಲಿಚ್​ಫೀಲ್ಡ್ 35 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 48 ರನ್ ಚಚ್ಚಿದರು. ಈ ಮೂಲಕ ಆಸ್ಟ್ರೇಲಿಯಾ ತಂಡ 17.1 ಓವರ್​ಗಳಲ್ಲಿ 153 ರನ್​ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

 ಆಸೀಸ್ ಮುಡಿಗೆ ‘ಸಪ್ತ’ಮ ಕಿರೀಟ:

ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಮಹಿಳಾ ತಂಡವು 7ನೇ ಬಾರಿ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಆಸೀಸ್ ಪಡೆ ವಿಶ್ವಕಪ್ ಗೆದ್ದ ವರ್ಷಗಳ ಪಟ್ಟಿ ಈ ಕೆಳಗಿನಂತಿದೆ…

  • 2010 — ಮೊದಲ ಪ್ರಶಸ್ತಿ (ನ್ಯೂಝಿಲೆಂಡ್ ವಿರುದ್ಧ ಗೆಲುವು)
  • 2012 — ಎರಡನೇ ಪ್ರಶಸ್ತಿ (ಇಂಗ್ಲೆಂಡ್ ವಿರುದ್ಧ ಗೆಲುವು)
  • 2014 — ಮೂರನೇ ಪ್ರಶಸ್ತಿ (ಇಂಗ್ಲೆಂಡ್ ವಿರುದ್ಧ ಗೆಲುವು)
  • 2018 — ನಾಲ್ಕನೇ ಪ್ರಶಸ್ತಿ (ಇಂಗ್ಲೆಂಡ್ ವಿರುದ್ಧ ಗೆಲುವು)
  • 2020 — ಐದನೇ ಪ್ರಶಸ್ತಿ (ಭಾರತದ ವಿರುದ್ಧ ಗೆಲುವು)
  • 2023 — ಆರನೇ ಪ್ರಶಸ್ತಿ (ಸೌತ್ ಆಫ್ರಿಕಾ ವಿರುದ್ಧ ಗೆಲುವು)
  • 2026 — ಏಳನೇ ಪ್ರಶಸ್ತಿ (ಇಂಗ್ಲೆಂಡ್ ವಿರುದ್ಧ ಗೆಲುವು)

ಇದನ್ನೂ ಓದಿ: ಅವನು ನನ್ನ ಆತ್ಮೀಯ ಗೆಳೆಯ: ದಿನೇಶ್ ಕಾರ್ತಿಕ್ ಬಗ್ಗೆ ಮುರಳಿ ವಿಜಯ್ ಭಾವುಕ!

ಈ ಮೂಲಕ ಆಸ್ಟ್ರೇಲಿಯಾ ತಂಡವು ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ತಂಡವಾಗಿ ಹೊರಹೊಮ್ಮಿದೆ.

Published On - 7:09 am, Mon, 6 July 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್
ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್