T20 World Cup 2024: ಟಿ20 ವಿಶ್ವಕಪ್ನ 51ನೇ ಪಂದ್ಯದಲ್ಲಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಕಣಕ್ಕಿಳಿಯಲಿದೆ. ಡಾರೆನ್ ಸ್ಯಾಮಿ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಗ್ರೂಪ್-1 ರಲ್ಲಿ ನಾಲ್ಕು ತಂಡಗಳು ಸೆಮಿಫೈನಲ್ ರೇಸ್ನಲ್ಲಿದೆ. ಈ ತಂಡಗಳ ಸೆಮಿಫೈನಲ್ ಸ್ಥಾನ ನಿರ್ಧಾರವಾಗುವುದು ನೆಟ್ ರನ್ ರೇಟ್ ಮೂಲಕ ಎಂಬುದು ವಿಶೇಷ.
ಇಲ್ಲಿ ಟೀಮ್ ಇಂಡಿಯಾ ಗೆದ್ದರೆ ನೇರವಾಗಿ ಸೆಮಿಫೈನಲ್ ಹಂತಕ್ಕೇರಲಿದೆ. ಆದರೆ ಸೋತರೆ ಎಲ್ಲಾ ಲೆಕ್ಕಾಚಾರಗಳು ತಲೆ ಕೆಳಗಾಗಬಹುದು. ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ತಂಡವನ್ನು ದ್ವಿತೀಯ ಸ್ಥಾನಕ್ಕೆ ಇಳಿಸಲು ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದರೆ ಸಾಕು. ಒಂದು ವೇಳೆ ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಅಮೋಘ ಗೆಲುವು ದಾಖಲಿಸಿದರೆ, ಅಗ್ರಸ್ಥಾನದೊಂದಿಗೆ ಆಸೀಸ್ ಪಡೆ ಸೆಮಿಫೈನಲ್ಗೇರಲಿದೆ. ಇತ್ತ ಭಾರತ ಮತ್ತು ಅಫ್ಘಾನಿಸ್ತಾನ್ ನಡುವೆ ನೆಟ್ ರನ್ ರೇಟ್ ಲೆಕ್ಕಾಚಾರ ಮುನ್ನಲೆಗೆ ಬರಲಿದೆ.
ಹೀಗಾಗಿಯೇ ಇಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 41 ರನ್ಗಳು ಮತ್ತು 32 ಎಸೆತಗಳ ಲೆಕ್ಕಾಚಾರದೊಂದಿಗೆ ಕಣಕ್ಕಿಳಿಯಲಿದೆ. ಈ ಮೂಲಕ ಟಿ20 ವಿಶ್ವಕಪ್ನಿಂದ ಟೀಮ್ ಇಂಡಿಯಾವನ್ನು ಹೊರದಬ್ಬಲು ಆಸ್ಟ್ರೇಲಿಯಾ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.
ಇದನ್ನೂ ಓದಿ: T20 World Cup 2024: ಹಳೆಯ ದಾಖಲೆ ಅಳಿಸಿ ಹಾಕಿದ ಟೀಮ್ ಇಂಡಿಯಾ
ಹೀಗಾಗಿಯೇ ಇಂದಿನ ಪಂದ್ಯದ ಫಲಿತಾಂಶವು ನಾಲ್ಕು ತಂಡಗಳ ಟಿ20 ವಿಶ್ವಕಪ್ ಭವಿಷ್ಯವನ್ನು ನಿರ್ಧರಿಸಲಿದೆ ಎಂದರೆ ತಪ್ಪಾಗಲಾರದು.
Published On - 7:59 am, Mon, 24 June 24