ಆಸ್ಟ್ರೇಲಿಯಾ ಏಕದಿನ ತಂಡ ಪ್ರಕಟ: ಸ್ಪೋಟಕ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ ಆಟಗಾರ ಆಯ್ಕೆ..!

Australia ODI Squad: ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿಗಳಾದ ಜೋಶ್ ಹ್ಯಾಝಲ್​ವುಡ್ ಹಾಗೂ ಮಿಚೆಲ್ ಸ್ಟಾರ್ಕ್ ಸಹ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹಾಗೆಯೇ ಗ್ಲೆನ್ ಮ್ಯಾಕ್ಸ್​ವೆಲ್ ವಿಂಡೀಸ್ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ಲಭಿಸಿದೆ.

ಆಸ್ಟ್ರೇಲಿಯಾ ಏಕದಿನ ತಂಡ ಪ್ರಕಟ: ಸ್ಪೋಟಕ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ ಆಟಗಾರ ಆಯ್ಕೆ..!
Australia-Jake Fraser
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jan 22, 2024 | 10:57 AM

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡವನ್ನು (Australia Squad) ಪ್ರಕಟಿಸಲಾಗಿದೆ. 13 ಸದಸ್ಯರ ಈ ತಂಡವನ್ನು ಸ್ಟೀವ್ ಸ್ಮಿತ್ (Steve Smith) ಮುನ್ನಡೆಸಲಿದ್ದಾರೆ. ಆಸೀಸ್ ಪಡೆಯ ನಾಯಕ ಪ್ಯಾಟ್ ಕಮಿನ್ಸ್ ವಿಶ್ರಾಂತಿ ತೆಗೆದುಕೊಂಡಿದ್ದು, ಹೀಗಾಗಿ ಸ್ಮಿತ್​ಗೆ ನಾಯಕತ್ವ ನೀಡಲಾಗಿದೆ.

ಇನ್ನು ತಂಡದ ಪ್ರಮುಖ ವೇಗಿಗಳಾದ ಜೋಶ್ ಹ್ಯಾಝಲ್​ವುಡ್ ಹಾಗೂ ಮಿಚೆಲ್ ಸ್ಟಾರ್ಕ್ ಸಹ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹಾಗೆಯೇ ಗ್ಲೆನ್ ಮ್ಯಾಕ್ಸ್​ವೆಲ್ ವಿಂಡೀಸ್ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ಲಭಿಸಿದೆ.

ವಿಶ್ವ ದಾಖಲೆ ವೀರ ಆಯ್ಕೆ:

ಆಸ್ಟ್ರೇಲಿಯಾದ 13 ಸದಸ್ಯರ ಈ ಬಳಗದಲ್ಲಿ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಸ್ಥಾನ ಪಡೆದಿದ್ದಾರೆ. 21 ವರ್ಷದ ಜೇಕ್ ಫ್ರೇಸರ್ ಕಳೆದ ವರ್ಷ ಲೀಸ್ಟ್ ಎ ಕ್ರಿಕೆಟ್​ನಲ್ಲಿ  ವಿಶ್ವ ದಾಖಲೆ ನಿರ್ಮಿಸಿದ್ದರು.

ಆಸ್ಟ್ರೇಲಿಯಾದಲ್ಲಿ ನಡೆದ ಮಾರ್ಷ್​ ಕಪ್​ನಲ್ಲಿ ವೆಸ್ಟ್ ಎಂಡ್ ರೆಡ್‌ಬ್ಯಾಕ್ಸ್ ಪರ ಕಣಕ್ಕಿಳಿದ ಜೇಕ್​ ಫ್ರೇಸರ್ ಟಾಸ್ಮೇನಿಯಾ ವಿರುದ್ಧ ಕೇವಲ 29 ಎಸೆತಗಳಲ್ಲಿ ಶತಕ ಪೂರೈಸಿದ್ದರು.

ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗದ ಶತಕ ಬಾರಿಸಿದ ವಿಶ್ವ ದಾಖಲೆಯನ್ನು ಜೇಕ್​ ಫ್ರೇಸರ್ ಬರೆದಿದ್ದರು. ಇದೀಗ ಬಿಗ್ ಬ್ಯಾಷ್​ ಲೀಗ್​ನಲ್ಲೂ ಭರ್ಜರಿ ಪ್ರದರ್ಶನ ನೀಡಿರುವ ಯುವ ಆಟಗಾರನಿಗೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಆಸ್ಟ್ರೇಲಿಯಾ ಏಕದಿನ ತಂಡ: ಸ್ಟೀವನ್ ಸ್ಮಿತ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಾಬುಶೇನ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಲ್ಯಾನ್ಸ್ ಮೋರಿಸ್, ಮ್ಯಾಟ್ ಶಾರ್ಟ್, ಆ್ಯಡಂ ಝಂಪಾ.

ವೆಸ್ಟ್ ಇಂಡೀಸ್ ಏಕದಿನ ತಂಡ: ಶಾಯ್ ಹೋಪ್ (ನಾಯಕ), ಅಲ್ಝಾರಿ ಜೋಸೆಫ್, ಅಲಿಕ್ ಅಥಾನಾಝ್, ಟೆಡ್ಡಿ ಬಿಷಪ್, ಕೀಸಿ ಕಾರ್ಟಿ, ರೋಸ್ಟನ್ ಚೇಸ್, ಮ್ಯಾಥ್ಯೂ ಫೋರ್ಡ್, ಜಸ್ಟಿನ್ ಗ್ರೀವ್ಸ್, ಕವೆಮ್ ಹಾಡ್ಜ್, ಟೆವಿನ್ ಇಮ್ಲಾಚ್, ಗುಡಕೇಶ್ ಮೋಟಿ, ಕ್ಜಾರ್ನ್ ಓಟ್ಲಿ, ಒಶಾನ್ ಥಾಮಸ್, ಒಶನ್ ಶೆಫರ್ಡ್, ಹೇಡನ್ ವಾಲ್ಷ್ ಜೂನಿಯರ್.

ಇದನ್ನೂ ಓದಿ: Team India: ಭಾರತದಲ್ಲಿ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

ಆಸ್ಟ್ರೇಲಿಯಾ-ವೆಸ್ಟ್ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ:-

  1. ಫೆಬ್ರವರಿ 2- ಮೊದಲ ಏಕದಿನ ಪಂದ್ಯ (ಮೆಲ್ಬೋರ್ನ್​)
  2. ಫೆಬ್ರವರಿ 4- ಎರಡನೇ ಏಕದಿನ ಪಂದ್ಯ (ಸಿಡ್ನಿ)
  3. ಫೆಬ್ರವರಿ 6- ಮೂರನೇ ಏಕದಿನ ಪಂದ್ಯ (ಕ್ಯಾನ್​ಬೆರ)

Published On - 10:57 am, Mon, 22 January 24

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು