ಆಸ್ಟ್ರೇಲಿಯಾ-ಪಾಕಿಸ್ತಾನ್ (Australia vs Pakistan) ನಡುವಣ 2ನೇ ಟೆಸ್ಟ್ ಪಂದ್ಯವು ನಾಳೆಯಿಂದ (ಡಿ.26) ಶುರುವಾಗಲಿದೆ. ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಉಭಯ ತಂಡಗಳು ಆಡುವ ಬಳಗವನ್ನು ಘೋಷಿಸಿದೆ. ಆದರೆ ಅತ್ತ ಪಾಕಿಸ್ತಾನ್ ತಂಡವು ಒಟ್ಟು 12 ಆಟಗಾರರ ಹೆಸರುಗಳನ್ನು ಹೆಸರಿಸಿದ್ದು, ಈ ಮೂಲಕ ಕೊನೆಯ ಕ್ಷಣದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವ ಸೂಚನೆ ನೀಡಿದೆ.
ಪಾಕಿಸ್ತಾನ್ ಘೋಷಿಸಿರುವ ಪ್ಲೇಯಿಂಗ್ ಇಲೆವೆನ್ನಲ್ಲಿ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ಸರ್ಫರಾಝ್ ಅಹ್ಮದ್ ಕಾಣಿಸಿಕೊಳ್ಳುವುದಿಲ್ಲ. ಅವರ ಬದಲಿಗೆ ಮೊಹಮ್ಮದ್ ರಿಝ್ವಾನ್ಗೆ ಅವಕಾಶ ನೀಡಲಾಗಿದೆ. ಹಾಗೆಯೇ ಫಹೀಮ್ ಅಶ್ರಫ್ ಅವರನ್ನು ಕೈ ಬಿಡಲಾಗಿದ್ದು, ಹಸನ್ ಅಲಿ, ಮಿರ್ ಹಂಝ ಹಾಗೂ ಸಾಜಿದ್ ಖಾನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಮತ್ತೊಂದೆಡೆ ಆಸ್ಟ್ರೇಲಿಯಾ ತಂಡವು ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ ಬಳಗವನ್ನೇ ಈ ಪಂದ್ಯದಲ್ಲೂ ಕಣಕ್ಕಿಳಿಸಲಿದೆ. ಇಲ್ಲಿ ಆರಂಭಿಕರಾಗಿ ಉಸ್ಮಾನ್ ಖ್ವಾಜಾ ಹಾಗೂ ಡೇವಿಡ್ ವಾರ್ನರ್ ಕಣಕ್ಕಿಳಿಯಲಿದ್ದಾರೆ.
ಹಾಗೆಯೇ ಮೂರನೇ ಕ್ರಮಾಂಕದಲ್ಲಿ ಮಾರ್ನಸ್ ಲಾಬುಶೇನ್ ಬ್ಯಾಟ್ ಬೀಸಿದರೆ. ನಾಲ್ಕನೇ ಕ್ರಮಾಂಕದಲ್ಲಿ ಸ್ಟೀವ್ ಸ್ಮಿತ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬೌಲರ್ಗಳಾಗಿ ಪ್ಯಾಟ್ ಕಮಿನ್ಸ್, ಜೋಶ್ ಹ್ಯಾಝಲ್ವುಡ್, ಮಿಚೆಲ್ ಸ್ಟಾರ್ಕ್ ಹಾಗೂ ನಾಥನ್ ಲಿಯಾನ್ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್ , ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್ , ಜೋಶ್ ಹ್ಯಾಝಲ್ವುಡ್.
ಪಾಕಿಸ್ತಾನ್ ಪ್ಲೇಯಿಂಗ್ 11: ಇಮಾಮ್-ಉಲ್-ಹಕ್ , ಅಬ್ದುಲ್ಲಾ ಶಫೀಕ್, ಶಾನ್ ಮಸೂದ್ (ನಾಯಕ), ಬಾಬರ್ ಆಝಂ , ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸಲ್ಮಾನ್ ಅಲಿ ಅಘಾ, ಶಾಹೀನ್ ಅಫ್ರಿದಿ, ಹಸನ್ ಅಲಿ , ಮೀರ್ ಹಂಝ, ಅಮೀರ್ ಜಮಾಲ್, ಸಾಜಿದ್ ಖಾನ್.
ಈ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಪಾಕಿಸ್ತಾನ್ ತಂಡವನ್ನು 360 ರನ್ಗಳಿಂದ ಸೋಲಿಸಿತ್ತು. ಇದೀಗ ಮೂರು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವು 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಅಲ್ಲದೆ 2ನೇ ಟೆಸ್ಟ್ ಪಂದ್ಯದಲ್ಲಿ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ.
ಇದನ್ನೂ ಓದಿ: Virat Kohli: ಸ್ಟೀವ್ ಸ್ಮಿತ್ ಸೆಂಚುರಿ ದಾಖಲೆ ಸರಿಗಟ್ಟುವ ಸನಿಹದಲ್ಲಿ ಕಿಂಗ್ ಕೊಹ್ಲಿ