ಏಕದಿನ ವಿಶ್ವಕಪ್​ಗೆ ನೂತನ​ ಜೆರ್ಸಿ ಅನಾವರಣಗೊಳಿಸಿದ ಕ್ರಿಕೆಟ್ ಆಸ್ಟ್ರೇಲಿಯಾ

ODI World Cup 2023: ಐದು ಬಾರಿ ವಿಶ್ವ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ, ಐಸಿಸಿ ಪುರುಷರ ಏಕದಿನ ವಿಶ್ವಕಪ್‌ಗೆ ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಹೊಸ ಜೆರ್ಸಿ ತೊಟ್ಟು ಪೋಸ್ ನೀಡಿದ್ದು, ಆಂಟಿ ಫಿಯೋನಾ ಕ್ಲಾರ್ಕ್ ಅವರು ರಚಿಸಿರುವ ಫಸ್ಟ್ ನೇಷನ್ಸ್ ಕಲಾಕೃತಿಯ ವಿನ್ಯಾಸವನ್ನು ಈ ಜೆರ್ಸಿ ಒಳಗೊಂಡಿರುವುದು ಗಮನಾರ್ಹವಾಗಿದೆ.

ಏಕದಿನ ವಿಶ್ವಕಪ್​ಗೆ ನೂತನ​ ಜೆರ್ಸಿ ಅನಾವರಣಗೊಳಿಸಿದ ಕ್ರಿಕೆಟ್ ಆಸ್ಟ್ರೇಲಿಯಾ
ಆಸ್ಟ್ರೇಲಿಯಾ ಹೊಸ ಜೆರ್ಸಿ
Follow us
|

Updated on: Sep 23, 2023 | 9:08 AM

ಐದು ಬಾರಿ ವಿಶ್ವ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ, ಐಸಿಸಿ ಪುರುಷರ ಏಕದಿನ ವಿಶ್ವಕಪ್‌ಗೆ (ICC ODI World Cup 2023) ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಹೊಸ ಜೆರ್ಸಿ ತೊಟ್ಟು ಪೋಸ್ ನೀಡಿದ್ದು, ಆಂಟಿ ಫಿಯೋನಾ ಕ್ಲಾರ್ಕ್ ಅವರು ರಚಿಸಿರುವ ಫಸ್ಟ್ ನೇಷನ್ಸ್ ಕಲಾಕೃತಿಯ ವಿನ್ಯಾಸವನ್ನು ಈ ಜೆರ್ಸಿ ಒಳಗೊಂಡಿರುವುದು ಗಮನಾರ್ಹವಾಗಿದೆ. ಆಸ್ಟ್ರೇಲಿಯಾ ತನ್ನ ವಿಶ್ವಕಪ್ ಪ್ರಯಾಣವನ್ನು ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಭಾರತದ (India vs Australia) ವಿರುದ್ಧ ಕಣಕ್ಕಿಳಿಯುವ ಮೂಲಕ ಪ್ರಾರಂಭಿಸಲಿದೆ. ಅಲ್ಲದೆ ಈ ಮೆಗಾ ಈವೆಂಟ್​ಗೆ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಅನುಭವಿ 15 ಆಟಗಾರರ ತಂಡವನ್ನು ಸಹ ಪ್ರಕಟಿಸಲಾಗಿದೆ.

ಹೊಸ ಜೆರ್ಸಿ ತೊಟ್ಟ ಮ್ಯಾಕ್ಸ್‌ವೆಲ್

ಕ್ರಿಕೆಟ್.ಕಾಮ್.ಎಯು ಶುಕ್ರವಾರದಂದು ಮ್ಯಾಕ್ಸ್‌ವೆಲ್ ಏಕದಿನ ವಿಶ್ವಕಪ್ ಜರ್ಸಿಯನ್ನು ಧರಿಸಿರುವ ವೀಡಿಯೊವನ್ನು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಈ ಹೊಸ ಜೆರ್ಸಿಯ ಬಗ್ಗೆ ಮಾತನಾಡಿದ ಮ್ಯಾಕ್ಸ್‌ವೆಲ್, ‘ಇದು ನಮ್ಮ ಹಿಂದಿನ ವಿಶ್ವಕಪ್ ಕಿಟ್‌ಗಳಿಗಿಂತ ಬಹಳ ವಿಶಿಷ್ಟವಾಗಿದೆ’ ಎಂದಿದ್ದಾರೆ.

IND vs AUS: ಭಾರತ- ಆಸ್ಟ್ರೇಲಿಯಾ ಕಾಳಗದಲ್ಲಿ ಯಾವ ತಂಡ ಮೇಲುಗೈ ಸಾಧಿಸಿದೆ ಗೊತ್ತಾ?

ಅನುಭವಿಗಳ ಪುನರಾಗಮನ

ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಮ್ಯಾಕ್ಸ್‌ವೆಲ್ ಭಾರತ ವಿರುದ್ಧದ ಮೂರು ಪಂದ್ಯಗಳ ಏಕದನ ಸರಣಿಗೆ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಆದರೆ ಸರಣಿಯ ಮೊದಲ ಪಂದ್ಯದಲ್ಲಿ ಈ ಆಲ್​ರೌಂಡರ್​ಗೆ ವಿಶ್ರಾಂತಿ ನೀಡಲಾಗಿತ್ತು. ಇವರಲ್ಲದೆ ನಾಯಕ ಪ್ಯಾಟ್ ಕಮಿನ್ಸ್, ಸ್ಟೀವ್ ಸ್ಮಿತ್ ಮತ್ತು ಮಿಚೆಲ್ ಸ್ಟಾರ್ಕ್ ಕೂಡ ದಕ್ಷಿಣ ಆಫ್ರಿಕಾ ಸರಣಿಯನ್ನು ಮಿಸ್ ಮಾಡಿಕೊಂಡಿದ್ದರು. ಆದರೆ ಪ್ಯಾಟ್ ಕಮಿನ್ಸ್ ಮತ್ತು ಸ್ಟೀವ್ ಸ್ಮಿತ್ ಭಾರತದ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದರೆ, ಮಿಚೆಲ್ ಸ್ಟಾರ್ಕ್ ಹಾಗೂ ಮ್ಯಾಕ್ಸ್‌ವೆಲ್ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಈ ಇಬ್ಬರ ಅಲಭ್ಯತೆಯ ಭಾರವನ್ನು ಆಸ್ಟ್ರೇಲಿಯಾ ಹೊರಬೇಕಾಯಿತು.

ಭಾರತ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸೀನ್ ಅಬಾಟ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ , ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ.

ಆಸ್ಟ್ರೇಲಿಯಾ ವಿಶ್ವಕಪ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಆಷ್ಟನ್ ಅಗರ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ