ಐದು ಬಾರಿ ವಿಶ್ವ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ, ಐಸಿಸಿ ಪುರುಷರ ಏಕದಿನ ವಿಶ್ವಕಪ್‌ಗೆ (ICC ODI World Cup 2023) ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಆಸ್ಟ್ರೇಲಿಯಾ ತಂಡದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಹೊಸ ಜೆರ್ಸಿ ತೊಟ್ಟು ಪೋಸ್ ನೀಡಿದ್ದು, ಆಂಟಿ ಫಿಯೋನಾ ಕ್ಲಾರ್ಕ್ ಅವರು ರಚಿಸಿರುವ ಫಸ್ಟ್ ನೇಷನ್ಸ್ ಕಲಾಕೃತಿಯ ವಿನ್ಯಾಸವನ್ನು ಈ ಜೆರ್ಸಿ ಒಳಗೊಂಡಿರುವುದು ಗಮನಾರ್ಹವಾಗಿದೆ. ಆಸ್ಟ್ರೇಲಿಯಾ ತನ್ನ ವಿಶ್ವಕಪ್ ಪ್ರಯಾಣವನ್ನು ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಭಾರತದ (India vs Australia) ವಿರುದ್ಧ ಕಣಕ್ಕಿಳಿಯುವ ಮೂಲಕ ಪ್ರಾರಂಭಿಸಲಿದೆ. ಅಲ್ಲದೆ ಈ ಮೆಗಾ ಈವೆಂಟ್ಗೆ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಅನುಭವಿ 15 ಆಟಗಾರರ ತಂಡವನ್ನು ಸಹ ಪ್ರಕಟಿಸಲಾಗಿದೆ.
ಕ್ರಿಕೆಟ್.ಕಾಮ್.ಎಯು ಶುಕ್ರವಾರದಂದು ಮ್ಯಾಕ್ಸ್‌ವೆಲ್ ಏಕದಿನ ವಿಶ್ವಕಪ್ ಜರ್ಸಿಯನ್ನು ಧರಿಸಿರುವ ವೀಡಿಯೊವನ್ನು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಈ ಹೊಸ ಜೆರ್ಸಿಯ ಬಗ್ಗೆ ಮಾತನಾಡಿದ ಮ್ಯಾಕ್ಸ್‌ವೆಲ್, ‘ಇದು ನಮ್ಮ ಹಿಂದಿನ ವಿಶ್ವಕಪ್ ಕಿಟ್‌ಗಳಿಗಿಂತ ಬಹಳ ವಿಶಿಷ್ಟವಾಗಿದೆ’ ಎಂದಿದ್ದಾರೆ.
Come for the first look at the Aussie kit for the upcoming ODI World Cup, stay for a chat with Glenn Maxwell on the turf of the MCG 💪🏟️#KitWeek #CWC23 pic.twitter.com/OE6lTP0FWT
— cricket.com.au (@cricketcomau) September 22, 2023
Here it is! Our 2023 Men’s World Cup kit ready for action in India 🔥 #CWC23 #KitWeek pic.twitter.com/uOLgPAYvT5
— Cricket Australia (@CricketAus) September 22, 2023
IND vs AUS: ಭಾರತ- ಆಸ್ಟ್ರೇಲಿಯಾ ಕಾಳಗದಲ್ಲಿ ಯಾವ ತಂಡ ಮೇಲುಗೈ ಸಾಧಿಸಿದೆ ಗೊತ್ತಾ?
ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಮ್ಯಾಕ್ಸ್‌ವೆಲ್ ಭಾರತ ವಿರುದ್ಧದ ಮೂರು ಪಂದ್ಯಗಳ ಏಕದನ ಸರಣಿಗೆ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಆದರೆ ಸರಣಿಯ ಮೊದಲ ಪಂದ್ಯದಲ್ಲಿ ಈ ಆಲ್ರೌಂಡರ್ಗೆ ವಿಶ್ರಾಂತಿ ನೀಡಲಾಗಿತ್ತು. ಇವರಲ್ಲದೆ ನಾಯಕ ಪ್ಯಾಟ್ ಕಮಿನ್ಸ್, ಸ್ಟೀವ್ ಸ್ಮಿತ್ ಮತ್ತು ಮಿಚೆಲ್ ಸ್ಟಾರ್ಕ್ ಕೂಡ ದಕ್ಷಿಣ ಆಫ್ರಿಕಾ ಸರಣಿಯನ್ನು ಮಿಸ್ ಮಾಡಿಕೊಂಡಿದ್ದರು. ಆದರೆ ಪ್ಯಾಟ್ ಕಮಿನ್ಸ್ ಮತ್ತು ಸ್ಟೀವ್ ಸ್ಮಿತ್ ಭಾರತದ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದರೆ, ಮಿಚೆಲ್ ಸ್ಟಾರ್ಕ್ ಹಾಗೂ ಮ್ಯಾಕ್ಸ್‌ವೆಲ್ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಈ ಇಬ್ಬರ ಅಲಭ್ಯತೆಯ ಭಾರವನ್ನು ಆಸ್ಟ್ರೇಲಿಯಾ ಹೊರಬೇಕಾಯಿತು.
ಭಾರತ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸೀನ್ ಅಬಾಟ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ , ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ.
ಆಸ್ಟ್ರೇಲಿಯಾ ವಿಶ್ವಕಪ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಆಷ್ಟನ್ ಅಗರ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ