IND vs AUS: ಪಿಂಕ್ ಬಾಲ್​​ ಟೆಸ್ಟ್​​ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ: ವೆಬ್​​ಸ್ಟರ್ ಎಂಟ್ರಿ

Australia vs India: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಅಡಿಲೇಡ್​ನಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಈ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ.

IND vs AUS: ಪಿಂಕ್ ಬಾಲ್​​ ಟೆಸ್ಟ್​​ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ: ವೆಬ್​​ಸ್ಟರ್ ಎಂಟ್ರಿ
Australia
Follow us
ಝಾಹಿರ್ ಯೂಸುಫ್
|

Updated on:Nov 30, 2024 | 10:04 AM

ಬಾರ್ಡರ್​ – ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಈ ಪಂದ್ಯದಲ್ಲೂ ನಾಯಕರಾಗಿ ಪ್ಯಾಟ್ ಕಮಿನ್ಸ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಲ್​​ರೌಂಡರ್ ಮಿಚೆಲ್ ಮಾರ್ಷ್ ಪಿಂಕ್ ಬಾಲ್ ಟೆಸ್ಟ್​​ಗೆ ಅಲಭ್ಯರಾಗಿದ್ದಾರೆ.

ಫಿಟ್​​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಮಾರ್ಷ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಅನುಭವಿ ಆಲ್​ರೌಂಡರ್ ಬ್ಯೂ ವೆಬ್‌ಸ್ಟರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

30 ವರ್ಷದ ಬ್ಯೂ ವೆಬ್‌ಸ್ಟರ್ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​​ನಲ್ಲಿ 159 ಇನಿಂಗ್ಸ್ ಆಡಿರುವ ವೆಬ್​​ಸ್ಟರ್ 12 ಶತಕ ಹಾಗೂ 24 ಅರ್ಧಶತಕಗಳೊಂದಿಗೆ 5297 ರನ್ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್​​ನಲ್ಲಿ 148 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದೀಗ ರಾಷ್ಟ್ರೀಯ ತಂಡಕ್ಕೆ ಎಂಟ್ರಿ ಕೊಟ್ಟಿರುವ ಹಿರಿಯ ಆಟಗಾರನಿಗೆ ಅಡಿಲೇಡ್​​ ಟೆಸ್ಟ್​​ನಲ್ಲಿ ಅವಕಾಶ ಸಿಗಲಿದೆಯಾ ಕಾದು ನೋಡಬೇಕಿದೆ.

ಪಿಂಕ್ ಬಾಲ್ ಟೆಸ್ಟ್ ಯಾವಾಗ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಿಂಕ್ ಬಾಲ್ ಟೆಸ್ಟ್ ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಡೇ-ನೈಟ್ ನಲ್ಲಿ ನಡೆಯಲಿದ್ದು, ಈ ಪಂದ್ಯವನ್ನು ಪಿಂಕ್ ಬಾಲ್​​ನಲ್ಲಿ ಆಡಲಾಗುತ್ತದೆ. ಇದೇ ಕಾರಣದಿಂದಾಗಿ ಇದನ್ನು ಪಿಂಕ್ ಬಾಲ್ ಟೆಸ್ಟ್ ಎಂದು ಕರೆಯಲಾಗುತ್ತದೆ. ಈ ಟೆಸ್ಟ್ ಪಂದ್ಯಕ್ಕಾಗಿ ಉಭಯ ತಂಡಗಳು ಈ ಕೆಳಗಿನಂತಿದೆ…

ಆಸ್ಟ್ರೇಲಿಯಾ ಟೆಸ್ಟ್​ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ , ಬ್ಯೂ ವೆಬ್‌ಸ್ಟರ್, ಶಾನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್.

ಇದನ್ನೂ ಓದಿ: IPL 2025: ವಿರಾಟ್ ಕೊಹ್ಲಿ ಜೊತೆಗಿನ ಕಿರಿಕ್​​ಗೆ ಭಾರೀ ಬೆಲೆ ತೆತ್ತ ‘ಮ್ಯಾಂಗೊ’ ನವೀನ

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್.

ಟೀಮ್ ಇಂಡಿಯಾ ಮುನ್ನಡೆ:

ಐದು ಪಂದ್ಯದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಮುನ್ನಡೆ ಸಾಧಿಸಿದೆ. ಪರ್ತ್​​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 295 ರನ್​​ಗಳಿಂದ ಆಸೀಸ್ ಪಡೆಯನ್ನು ಬಗ್ಗು ಬಡಿದು ಭಾರತ ತಂಡ ಶುಭಾರಂಭ ಮಾಡಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ 1-0 ಅಂತರದಿಂದ ಮುನ್ನಡೆ ಸಾಧಿಸಿದ್ದು, ಈ ಗೆಲುವಿನ ಲಯವನ್ನು ಅಡಿಲೇಡ್​ನಲ್ಲೂ ಮುಂದುವರೆಸುವ ವಿಶ್ವಾಸದಲ್ಲಿದೆ.

Published On - 11:36 am, Thu, 28 November 24