BGT 2024: ಭಾರತದ ವಿರುದ್ಧದ ಸರಣಿಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ

|

Updated on: Nov 10, 2024 | 11:21 AM

Border Gavaskar Trophy 2024: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಪರ್ತ್​ನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡವನ್ನು ಘೋಷಿಸಲಾಗಿದೆ.

BGT 2024: ಭಾರತದ ವಿರುದ್ಧದ ಸರಣಿಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ
Australia
Follow us on

ಭಾರತದ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 13 ಸದಸ್ಯರ ಈ ತಂಡದಲ್ಲಿ ಇಬ್ಬರು ಹೊಸಮುಖಗಳಿಗೆ ಚಾನ್ಸ್ ನೀಡಿರುವುದು ವಿಶೇಷ. ಅದರಂತೆ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ಟೆಸ್ಟ್ ತಂಡದಲ್ಲಿ ನಾಥನ್ ಮೆಕ್‌ಸ್ವೀನಿ ಹಾಗೂ ಜೋಶ್ ಇಂಗ್ಲಿಸ್ ಕಾಣಿಸಿಕೊಂಡಿದ್ದಾರೆ.

ಇಲ್ಲಿ ನಾಥನ್ ಮೆಕ್‌ಸ್ವೀನಿ ಅವರನ್ನು ಆರಂಭಿಕನ ಸ್ಥಾನಕ್ಕೆ ಆಯ್ಕೆ ಮಾಡಲಾಗಿದ್ದು, ಹೀಗಾಗಿ ಉಸ್ಮಾನ್ ಖ್ವಾಜಾ ಜೊತೆ ಅವರು ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಆರಂಭಿಕನಾಗಿ ಕಾಣಿಸಿಕೊಳ್ಳುತ್ತಿದ್ದ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದು, ಹೀಗಾಗಿ ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಹಾಗಾಗಿ ಪರ್ತ್ ಟೆಸ್ಟ್​ನಲ್ಲಿ ಉಸ್ಮಾನ್ ಖ್ವಾಜಾ ಜೊತೆ ನಾಥನ್ ಮೆಕ್‌ಸ್ವೀನಿ ಅಥವಾ ಟ್ರಾವಿಸ್ ಹೆಡ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚಿದೆ. ಮತ್ತೊಂದೆಡೆ ಬ್ಯಾಕ್ ಅಪ್ ವಿಕೆಟ್ ಕೀಪರ್ ಆಗಿ ಜೋಶ್ ಇಂಗ್ಲಿಸ್ ಇದೇ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನುಳಿದಂತೆ ನಾಯಕನಾಗಿ ಪ್ಯಾಟ್ ಕಮಿನ್ಸ್ ಕಾಣಿಸಿಕೊಳ್ಳಲಿದ್ದು, ಅನುಭವಿ ಆಟಗಾರರಾಗಿ ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್ ತಂಡದಲ್ಲಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಸ್ಥಾನದಲ್ಲಿ ಅಲೆಕ್ಸ್ ಕ್ಯಾರಿ ಆಯ್ಕೆಯಾಗಿದ್ದರೆ, ವೇಗಿಗಳಾಗಿ ಮಿಚೆಲ್ ಸ್ಟಾರ್ಕ್​, ಜೋಶ್ ಹ್ಯಾಝಲ್​ವುಡ್, ಸ್ಕಾಟ್ ಬೋಲ್ಯಾಂಡ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನು ಆಲ್​ರೌಂಡರ್​ಗಳಾಗಿ ಮಿಚೆಲ್ ಮಾರ್ಷ್ ಕೂಡ 15 ಸದಸ್ಯರ ಬಳಗದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಪಿನ್ನರ್​ ಆಗಿ ನಾಥನ್ ಲಿಯಾನ್ ಮಾತ್ರ ಆಯ್ಕೆಯಾಗಿದ್ದಾರೆ. ಅದರಂತೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಆಸ್ಟ್ರೇಲಿಯಾ ತಂಡ ಈ ಕೆಳಗಿನಂತಿದೆ…

ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಝಲ್‌ವುಡ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.

ಇದನ್ನೂ ಓದಿ: IPL 2025: 3 ವರ್ಷಗಳಲ್ಲಿ ಕಪ್: ನಿವೃತ್ತಿ ಸುಳಿವು ನೀಡಿದ ವಿರಾಟ್ ಕೊಹ್ಲಿ

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶುಕ್ರವಾರ, 22 ನವೆಂಬರ್ 2024 7:50 AM ಪರ್ತ್
2ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ (D/N) ಶುಕ್ರವಾರ, 6 ಡಿಸೆಂಬರ್ 2024 9:30 AM ಅಡಿಲೇಡ್
3ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶನಿವಾರ, 14 ಡಿಸೆಂಬರ್ 2024 5:50 AM ಬ್ರಿಸ್ಬೇನ್
4ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಗುರುವಾರ, 26 ಡಿಸೆಂಬರ್ 2024 5 AM ಮೆಲ್ಬೋರ್ನ್
5ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶುಕ್ರವಾರ, 3 ಜನವರಿ 2025 5 AM ಸಿಡ್ನಿ

 

Published On - 8:54 am, Sun, 10 November 24