Australia T20 Squad: ಆಸ್ಟ್ರೇಲಿಯಾ ಟಿ20 ತಂಡ ಪ್ರಕಟ: ಡೇವಿಡ್ ವಾರ್ನರ್​ ಆಯ್ಕೆ

Australia T20 squad: ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗಾಗಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಈ ಸರಣಿಯಿಂದ ನಾಯಕ ಪ್ಯಾಟ್ ಕಮಿನ್ಸ್ ಹೊರಗುಳಿದಿದ್ದು, ಅವರ ಬದಲಿಗೆ ಆಲ್​ರೌಂಡರ್ ಆಟಗಾರ ಮಿಚೆಲ್ ಮಾರ್ಷ್ ತಂಡವನ್ನು ಮುನ್ನಡೆಸಲಿದ್ದಾರೆ.

Australia T20 Squad: ಆಸ್ಟ್ರೇಲಿಯಾ ಟಿ20 ತಂಡ ಪ್ರಕಟ: ಡೇವಿಡ್ ವಾರ್ನರ್​ ಆಯ್ಕೆ
David Warner
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jan 24, 2024 | 12:56 PM

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 14 ಸದಸ್ಯರ ಈ ತಂಡವನ್ನು ಮಿಚೆಲ್ ಮಾರ್ಷ್ (Mitchell Marsh) ಮುನ್ನಡೆಸಲಿದ್ದಾರೆ. ತಂಡದ ನಾಯಕ ಪ್ಯಾಟ್ ಕಮಿನ್ಸ್ ಈ ಸರಣಿಯ ವೇಳೆ ವಿಶ್ರಾಂತಿ ಪಡೆದಿದ್ದು, ಹೀಗಾಗಿ ಮಾರ್ಷ್​ಗೆ ನಾಯಕತ್ವ ನೀಡಲಾಗಿದೆ. ಇದರ ಬೆನ್ನಲ್ಲೇ ಮುಂಬರುವ ಟಿ20 ವಿಶ್ವಕಪ್​ನಲ್ಲೂ ಆಸ್ಟ್ರೇಲಿಯಾ ತಂಡವನ್ನು ಮಾರ್ಷ್ ಮುನ್ನಡೆಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಡೇವಿಡ್ ವಾರ್ನರ್​ಗೆ ಸ್ಥಾನ:

14 ಸದಸ್ಯರ ಈ ಬಳಗದಲ್ಲಿ ಡೇವಿಡ್ ವಾರ್ನರ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿರುವ 37 ವರ್ಷದ ವಾರ್ನರ್ ಟಿ20 ತಂಡದಲ್ಲಿ ಸ್ಥಾನ ಪಡೆದಿರುವುದು ವಿಶೇಷ. ಒಂದು ವೇಳೆ ವೆಸ್ಟ್ ಇಂಡೀಸ್ ಸರಣಿಯಲ್ಲಿ ಹಾಗೂ ಐಪಿಎಲ್​ನಲ್ಲಿ ಮಿಂಚಿದರೆ ಟಿ20 ವಿಶ್ವಕಪ್​ ತಂಡದಲ್ಲೂ ಡೇವಿಡ್ ವಾರ್ನರ್ ಕಾಣಿಸಿಕೊಳ್ಳಲಿದ್ದಾರೆ.

ಸ್ಟಾರ್ಕ್​-ಸ್ಮಿತ್ ಅಲಭ್ಯ:

ಆಸ್ಟ್ರೇಲಿಯಾ ತಂಡದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್​ ಈ ಸರಣಿಯಿಂದ ಹೊರಗುಳಿದಿದ್ದಾರೆ. ಸಣ್ಣ ಫಿಟ್​ನೆಸ್ ಸಮಸ್ಯೆಯ ಕಾರಣ ಸ್ಟಾರ್ಕ್​ ವಿಂಡೀಸ್ ವಿರುದ್ಧದ ಪಂದ್ಯಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಮತ್ತೊಂದೆಡೆ ಸ್ಟೀವ್ ಸ್ಮಿತ್ ಕೂಡ ಈ ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ಈ ಇಬ್ಬರು ಆಟಗಾರರು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

ತಂಡದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್:

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಆದರೆ ಅವರು ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಏಕೆಂದರೆ ಇತ್ತೀಚೆಗೆ ನಡೆದ ಪಾರ್ಟಿ ವೇಳೆ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಮ್ಯಾಕ್ಸಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಡಿಸ್ಚಾರ್ಚ್​ ಆಗಿರುವ ಮ್ಯಾಕ್ಸ್​ವೆಲ್ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿ ಆಡಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಆಸ್ಟ್ರೇಲಿಯಾ-ವೆಸ್ಟ್ ಇಂಡೀಸ್ ಸೀಮಿತ ಓವರ್​ಗಳ ಸರಣಿ:

ಆಸ್ಟ್ರೇಲಿಯಾ – ವೆಸ್ಟ್ ಇಂಡೀಸ್ ನಡುವಣ ಫೆಬ್ರವರಿ 2 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲು 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಇದಾದ ಬಳಿಕ ಟಿ20 ಸರಣಿ ಶುರುವಾಗಲಿದೆ. ಇಲ್ಲಿ ಏಕದಿನ ತಂಡವನ್ನು ಸ್ಟೀವ್ ಸ್ಮಿತ್ ಮುನ್ನಡೆಸಲಿರುವುದು ವಿಶೇಷ.

ಏಕದಿನ ಸರಣಿ ವೇಳಾಪಟ್ಟಿ:-

  1. ಫೆಬ್ರವರಿ 2- ಮೊದಲ ಏಕದಿನ ಪಂದ್ಯ (ಮೆಲ್ಬೋರ್ನ್​)
  2. ಫೆಬ್ರವರಿ 4- ಎರಡನೇ ಏಕದಿನ ಪಂದ್ಯ (ಸಿಡ್ನಿ)
  3. ಫೆಬ್ರವರಿ 6- ಮೂರನೇ ಏಕದಿನ ಪಂದ್ಯ (ಕ್ಯಾನ್​ಬೆರ)

ಟಿ20 ಸರಣಿ ವೇಳಾಪಟ್ಟಿ:-

  1. ಫೆಬ್ರವರಿ 9- ಮೊದಲ ಟಿ20 ಪಂದ್ಯ (ಹೊಬರ್ಟ್​​)
  2. ಫೆಬ್ರವರಿ 11- ಎರಡನೇ ಟಿ20 ಪಂದ್ಯ (ಅಡಿಲೇಡ್)
  3. ಫೆಬ್ರವರಿ 13- ಮೂರನೇ ಟಿ20 ಪಂದ್ಯ (ಪರ್ತ್​)

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಜೇಸನ್ ಬೆಹ್ರೆಂಡಾರ್ಫ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ, ವೇಡ್, ಆ್ಯಡಂ ಝಂಪಾ.

ಇದನ್ನೂ ಓದಿ: VIDEO: ಅಯೋಧ್ಯೆಯಲ್ಲಿ ಡುಪ್ಲಿಕೇಟ್ ವಿರಾಟ್ ಕೊಹ್ಲಿ: ಮುಗಿಬಿದ್ದ ಫ್ಯಾನ್ಸ್​..!

ಆಸ್ಟ್ರೇಲಿಯಾ ಏಕದಿನ ತಂಡ: ಸ್ಟೀವನ್ ಸ್ಮಿತ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಾಬುಶೇನ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಲ್ಯಾನ್ಸ್ ಮೋರಿಸ್, ಮ್ಯಾಟ್ ಶಾರ್ಟ್, ಆ್ಯಡಂ ಝಂಪಾ.

Published On - 12:56 pm, Wed, 24 January 24

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ