ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 14 ಸದಸ್ಯರ ಈ ತಂಡವನ್ನು ಮಿಚೆಲ್ ಮಾರ್ಷ್ (Mitchell Marsh) ಮುನ್ನಡೆಸಲಿದ್ದಾರೆ. ತಂಡದ ನಾಯಕ ಪ್ಯಾಟ್ ಕಮಿನ್ಸ್ ಈ ಸರಣಿಯ ವೇಳೆ ವಿಶ್ರಾಂತಿ ಪಡೆದಿದ್ದು, ಹೀಗಾಗಿ ಮಾರ್ಷ್ಗೆ ನಾಯಕತ್ವ ನೀಡಲಾಗಿದೆ. ಇದರ ಬೆನ್ನಲ್ಲೇ ಮುಂಬರುವ ಟಿ20 ವಿಶ್ವಕಪ್ನಲ್ಲೂ ಆಸ್ಟ್ರೇಲಿಯಾ ತಂಡವನ್ನು ಮಾರ್ಷ್ ಮುನ್ನಡೆಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.
14 ಸದಸ್ಯರ ಈ ಬಳಗದಲ್ಲಿ ಡೇವಿಡ್ ವಾರ್ನರ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿರುವ 37 ವರ್ಷದ ವಾರ್ನರ್ ಟಿ20 ತಂಡದಲ್ಲಿ ಸ್ಥಾನ ಪಡೆದಿರುವುದು ವಿಶೇಷ. ಒಂದು ವೇಳೆ ವೆಸ್ಟ್ ಇಂಡೀಸ್ ಸರಣಿಯಲ್ಲಿ ಹಾಗೂ ಐಪಿಎಲ್ನಲ್ಲಿ ಮಿಂಚಿದರೆ ಟಿ20 ವಿಶ್ವಕಪ್ ತಂಡದಲ್ಲೂ ಡೇವಿಡ್ ವಾರ್ನರ್ ಕಾಣಿಸಿಕೊಳ್ಳಲಿದ್ದಾರೆ.
ಆಸ್ಟ್ರೇಲಿಯಾ ತಂಡದ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಈ ಸರಣಿಯಿಂದ ಹೊರಗುಳಿದಿದ್ದಾರೆ. ಸಣ್ಣ ಫಿಟ್ನೆಸ್ ಸಮಸ್ಯೆಯ ಕಾರಣ ಸ್ಟಾರ್ಕ್ ವಿಂಡೀಸ್ ವಿರುದ್ಧದ ಪಂದ್ಯಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಮತ್ತೊಂದೆಡೆ ಸ್ಟೀವ್ ಸ್ಮಿತ್ ಕೂಡ ಈ ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ. ಹೀಗಾಗಿ ಈ ಇಬ್ಬರು ಆಟಗಾರರು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಆದರೆ ಅವರು ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಏಕೆಂದರೆ ಇತ್ತೀಚೆಗೆ ನಡೆದ ಪಾರ್ಟಿ ವೇಳೆ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಮ್ಯಾಕ್ಸಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಡಿಸ್ಚಾರ್ಚ್ ಆಗಿರುವ ಮ್ಯಾಕ್ಸ್‌ವೆಲ್ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿ ಆಡಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.
ಆಸ್ಟ್ರೇಲಿಯಾ – ವೆಸ್ಟ್ ಇಂಡೀಸ್ ನಡುವಣ ಫೆಬ್ರವರಿ 2 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲು 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಇದಾದ ಬಳಿಕ ಟಿ20 ಸರಣಿ ಶುರುವಾಗಲಿದೆ. ಇಲ್ಲಿ ಏಕದಿನ ತಂಡವನ್ನು ಸ್ಟೀವ್ ಸ್ಮಿತ್ ಮುನ್ನಡೆಸಲಿರುವುದು ವಿಶೇಷ.
ಏಕದಿನ ಸರಣಿ ವೇಳಾಪಟ್ಟಿ:-
ಟಿ20 ಸರಣಿ ವೇಳಾಪಟ್ಟಿ:-
ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಜೇಸನ್ ಬೆಹ್ರೆಂಡಾರ್ಫ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ, ವೇಡ್, ಆ್ಯಡಂ ಝಂಪಾ.
ಇದನ್ನೂ ಓದಿ: VIDEO: ಅಯೋಧ್ಯೆಯಲ್ಲಿ ಡುಪ್ಲಿಕೇಟ್ ವಿರಾಟ್ ಕೊಹ್ಲಿ: ಮುಗಿಬಿದ್ದ ಫ್ಯಾನ್ಸ್..!
ಆಸ್ಟ್ರೇಲಿಯಾ ಏಕದಿನ ತಂಡ: ಸ್ಟೀವನ್ ಸ್ಮಿತ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಾಬುಶೇನ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಲ್ಯಾನ್ಸ್ ಮೋರಿಸ್, ಮ್ಯಾಟ್ ಶಾರ್ಟ್, ಆ್ಯಡಂ ಝಂಪಾ.
Published On - 12:56 pm, Wed, 24 January 24