T20 World Cup 2026: ಟಿ20 ವಿಶ್ವಕಪ್ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ
Australia T20 World Cup 2026 squad: 2026ರ ಟಿ20 ವಿಶ್ವಕಪ್‌ಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ತಂಡವನ್ನು ಪ್ರಕಟಿಸಿದೆ. ಮಿಚೆಲ್ ಮಾರ್ಷ್ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದ್ದು, ಮಿಚೆಲ್ ಓವನ್ ಅವರನ್ನು ಕೈಬಿಟ್ಟಿರುವುದು ಅಚ್ಚರಿ ಮೂಡಿಸಿದೆ. ಕೂಪರ್ ಕೊನೊಲಿ ಹಾಗೂ ಹಲವು ಹೊಸ ಮುಖಗಳಿಗೆ ಅವಕಾಶ ದೊರೆತಿದೆ. ಅನುಭವಿ ಆಟಗಾರರಾದ ಕಮ್ಮಿನ್ಸ್, ಮ್ಯಾಕ್ಸ್‌ವೆಲ್ ಮತ್ತು ಜಂಪಾ ತಂಡದ ಭಾಗವಾಗಿದ್ದಾರೆ.

ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್‌ಗಾಗಿ (T20 World Cup 2026) ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ತಂಡವನ್ನು ಪ್ರಕಟಿಸಿದೆ. ನಾಯಕ ಮಿಚೆಲ್ ಮಾರ್ಷ್ (Mitchell Marsh) ನಾಯಕತ್ವದ 15 ಸದಸ್ಯರ ತಂಡವನ್ನು ಮಿನಿ ವಿಶ್ವಸಮರಕ್ಕೆ ಆಯ್ಕೆ ಮಾಡಲಾಗಿದೆ. ಆಶ್ಚರ್ಯಕರ ಸಂಗತಿಯೆಂದರೆ, 2025 ರಲ್ಲಿ ಟಿ20 ಮಾದರಿಯಲ್ಲಿ ಸಾಕಷ್ಟು ಸದ್ದು ಮಾಡಿದ್ದ ಆಟಗಾರನನ್ನು ಆಯ್ಕೆ ಮಂಡಳಿ ಕೈಬಿಟ್ಟಿದ್ದರೆ, ಇತ್ತ ಕಳೆದ 12 ಟಿ20 ಅಂತರರಾಷ್ಟ್ರೀಯ ಪಂದ್ಯಗಳಿಂದ ಹೊರಗುಳಿದ ಆಟಗಾರನನ್ನು ಆಯ್ಕೆ ಮಾಡುವ ಮೂಲಕ ಕ್ರಿಕೆಟ್ ಆಸ್ಟ್ರೇಲಿಯಾ ಮತ್ತೊಂದು ಅಚ್ಚರಿಯ ನಿರ್ಧಾರ ತೆಗೆದುಕೊಂಡಿದೆ.
ಮಿಚೆಲ್ ಓವನ್ ಔಟ್
2026 ರ ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾ ತಂಡದ ಆಯ್ಕೆಯಲ್ಲಿ ಎರಡು ಅಚ್ಚರಿಯ ವಿಚಾರಗಳೆಂದರೆ ಮಿಚೆಲ್ ಓವನ್ ಅವರನ್ನು ಕೈಬಿಟ್ಟಿರುವುದು ಮತ್ತು ಕೂಪರ್ ಕಾನೊಲಿ ಅವರನ್ನು ತಂಡಕ್ಕೆ ಆಯ್ಕೆ ಮಾಡಿರುವುದು. ಕಳೆದ ವರ್ಷ ಬಿಬಿಎಲ್‌ನಲ್ಲಿ ಸಿಡ್ನಿ ಥಂಡರ್ ವಿರುದ್ಧ ಹೋಬಾರ್ಟ್ ಹರಿಕೇನ್ಸ್ ಪರ ಬಿರುಗಾಳಿಯ ಶತಕ ಗಳಿಸುವ ಮೂಲಕ ಮಿಚೆಲ್ ಓವನ್ ಎಲ್ಲರ ಗಮನ ಸೆಳೆದಿದ್ದರು. ಅವರು ಕೇವಲ 42 ಎಸೆತಗಳಲ್ಲಿ 11 ಸಿಕ್ಸರ್‌ಗಳ ಸಹಿತ 108 ರನ್ ಕಲೆಹಾಕಿದ್ದರು. ಆದಾಗ್ಯೂ ಅವರನ್ನು ಆಯ್ಕೆ ಮಾಡಲಾಗಿಲ್ಲ.
Australia has gone spin-heavy for the ICC Men’s T20 World Cup.
Break down the squad: https://t.co/3o6P5YgvHz pic.twitter.com/DtSdgZ0VWV
— cricket.com.au (@cricketcomau) January 1, 2026
ಕೂಪರ್ ಕೊನೊಲಿಗೆ ಜಾಕ್ಪಾಟ್
ಕಳೆದ 12 ಟಿ20 ಅಂತರರಾಷ್ಟ್ರೀಯ ಪಂದ್ಯಗಳಿಂದ ಆಸ್ಟ್ರೇಲಿಯಾ ತಂಡದ ಭಾಗವಾಗಿರದ ಕೂಪರ್ ಕೊನೊಲಿ ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಕೂಪರ್ ಕೊನೊಲಿ ಜೊತೆಗೆ, ಮ್ಯಾಥ್ಯೂ ಶಾರ್ಟ್, ಮ್ಯಾಟ್ ಕುನ್ಹೆಮನ್ ಮತ್ತು ಕ್ಸೇವಿಯರ್ ಬಾರ್ಟ್ಲೆಟ್ ಅವರನ್ನು 2026 ರ ಟಿ20 ವಿಶ್ವಕಪ್ ತಂಡದಲ್ಲಿ ಸೇರಿಸಲಾಗಿದೆ. ಈ ಎಲ್ಲಾ ಆಟಗಾರರಿಗೆ ಇದು ಮೊದಲ ಟಿ20 ವಿಶ್ವಕಪ್ ಆಗಲಿದೆ.
ತಂಡವು ಪ್ಯಾಟ್ ಕಮ್ಮಿನ್ಸ್, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಜೋಶ್ ಹ್ಯಾಜಲ್‌ವುಡ್‌ರಂತಹ ಆಟಗಾರರ ಅನುಭವವನ್ನು ಹೊಂದಿದೆ. ಹಾಗೆಯೇ ಆಡಮ್ ಜಂಪಾ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದ ಸ್ಪಿನ್ ದಾಳಿಯನ್ನು ಮುನ್ನಡೆಸಲಿದ್ದಾರೆ.
U19 World Cup: ಅಂಡರ್-19 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡ ಪ್ರಕಟ
2026 ರ ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಪ್ಯಾಟ್ ಕಮ್ಮಿನ್ಸ್, ಮಾರ್ಕಸ್ ಸ್ಟೊಯಿನಿಸ್, ಜೋಶ್ ಹೇಜಲ್‌ವುಡ್, ನಾಥನ್ ಎಲ್ಲಿಸ್, ಕ್ಸೇವಿಯರ್ ಬಾರ್ಟ್ಲೆಟ್, ಮ್ಯಾಥ್ಯೂ ವೇಡ್, ಕೂಪರ್ ಕಾನೊಲಿ, ಆಡಮ್ ಜಂಪಾ, ಮ್ಯಾಟ್ ಕುನ್ಹೆಮನ್, ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ಜೋಶ್ ಇಂಗ್ಲಿಸ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:06 pm, Thu, 1 January 26
