AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: 3ನೇ ಏಕದಿನ ಪಂದ್ಯದಿಂದ ಶಮಿ- ಸಿರಾಜ್​ಗೆ ಕೋಕ್; ಸುಳಿವು ನೀಡಿದ ರೋಹಿತ್ ಶರ್ಮಾ

IND vs NZ: ಇಬ್ಬರೂ ಬೌಲರ್‌ಗಳು ಅದ್ಭುತ ಫಾರ್ಮ್​ನಲ್ಲಿದ್ದರೂ ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಈ ಇಬ್ಬರಿಂದ ಕೇವಲ 12 ಓವರ್‌ ಮಾತ್ರ ಬೌಲ್ ಮಾಡಿಸಿದರು.

IND vs NZ: 3ನೇ ಏಕದಿನ ಪಂದ್ಯದಿಂದ ಶಮಿ- ಸಿರಾಜ್​ಗೆ ಕೋಕ್; ಸುಳಿವು ನೀಡಿದ ರೋಹಿತ್ ಶರ್ಮಾ
ರೋಹಿತ್- ದ್ರಾವಿಡ್
TV9 Web
| Updated By: ಪೃಥ್ವಿಶಂಕರ|

Updated on: Jan 22, 2023 | 11:22 AM

Share

ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಗೆದ್ದು ಬೀಗಿರುವ ಟೀಂ ಇಂಡಿಯಾ (India Vs New Zealand) ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ. ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ (Team India) ಎರಡನೇ ಏಕದಿನ ಪಂದ್ಯವನ್ನು ಸುಲಭವಾಗಿ ಗೆದ್ದು ಸರಣಿ ಕೈವಶ ಮಾಡಿಕೊಂಡಿದೆ. ಏಕದಿನ ಸರಣಿಯ ನಂತರ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ನಂತರ ಟೀಂ ಇಂಡಿಯಾಗೆ ಪ್ರಮುಖ ಸವಾಲು ಎದುರಾಗಲಿದ್ದು, ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಬೇಕಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿ ಫೆಬ್ರವರಿಯಿಂದ ಆರಂಭವಾಗಲಿದೆ. ರೋಹಿತ್ ಶರ್ಮಾ (Rohit Sharma) ಈಗಾಗಲೇ ಈ ಸರಣಿಗೆ ತಯಾರಿ ಆರಂಭಿಸಿದ್ದು, ಸದ್ಯ ಅದ್ಭುತ ಫಾರ್ಮ್​ನಲ್ಲಿರುವ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್​ಗೆ (Mohammad Shami and Mohammad Siraj) ನ್ಯೂಜಿಲೆಂಡ್ ವಿರುದ್ಧದ ಕೊನೆಯ ಪಂದ್ಯದಿಂದ ವಿಶ್ರಾಂತಿ ನೀಡುವ ಸೂಚನೆ ನೀಡಿದ್ದಾರೆ.

ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಎರಡೂ ಏಕದಿನ ಪಂದ್ಯಗಳಲ್ಲಿ ಅದ್ಭುತ ಬೌಲಿಂಗ್ ಮಾಡಿದರು. ಮೊದಲ ಪಂದ್ಯದಲ್ಲಿ ಸಿರಾಜ್ ಮಿಂಚಿದರೆ, ಎರಡನೇ ಏಕದಿನ ಪಂದ್ಯದಲ್ಲಿ ಮೂರು ವಿಕೆಟ್ ಕಬಳಿಸುವ ಮೂಲಕ ಶಮಿ ಕೂಡ ಫಾರ್ಮ್​ಗೆ ಮರಳುವ ಸೂಚನೆ ನೀಡಿದ್ದಾರೆ.

IND vs NZ 3rd ODI: ಭಾರತ- ನ್ಯೂಜಿಲೆಂಡ್ ಅಂತಿಮ ತೃತೀಯ ಏಕದಿನ ಪಂದ್ಯ ಯಾವಾಗ?, ಎಲ್ಲಿ ನಡೆಯಲಿದೆ?

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ನಮಗೆ ಮುಖ್ಯ

ಆದರೆ ಇಬ್ಬರೂ ಬೌಲರ್‌ಗಳು ಅದ್ಭುತ ಫಾರ್ಮ್​ನಲ್ಲಿದ್ದರೂ ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಈ ಇಬ್ಬರಿಂದ ಕೇವಲ 12 ಓವರ್‌ ಮಾತ್ರ ಬೌಲ್ ಮಾಡಿಸಿದರು. ಪಂದ್ಯದ ನಂತರ ಇದರ ಹಿಂದಿನ ಕಾರಣವನ್ನು ವಿವರಿಸಿದ ರೋಹಿತ್, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಸಮೀಪಿಸುತ್ತಿದೆ. ಆಸ್ಟ್ರೇಲಿಯ ವಿರುದ್ಧದ ಸರಣಿಗೆ ಈ ಇಬ್ಬರೂ ಬೌಲರ್‌ಗಳು ಫಿಟ್ ಆಗಿರುವುದು ನಮಗೆ ಅತ್ಯವಶ್ಯಕವಾಗಿದೆ ಎಂದಿದ್ದಾರೆ.

ಅಲ್ಲದೆ ಇಂದೋರ್‌ನಲ್ಲಿ ನಡೆಯಲ್ಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯ ಈಗ ಕೇವಲ ಔಪಚಾರಿಕವಾಗಿದೆ. ಆದ್ದರಿಂದ ರೋಹಿತ್ ಶರ್ಮಾ ಒಬ್ಬರು ಅಥವಾ ಇಬ್ಬರಿಗೂ ವಿಶ್ರಾಂತಿ ನೀಡಲು ನಿರ್ಧರಿಸಬಹುದು. ಈ ಇಬ್ಬರಲ್ಲಿ ಒಬ್ಬರಿಗೆ ವಿಶ್ರಾಂತಿ ನೀಡಿದರೆ ಮೂರನೇ ಏಕದಿನ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಅವರಿಗೆ ಅವಕಾಶ ಸಿಗಬಹುದು. ಶ್ರೀಲಂಕಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಯಲ್ಲಿ ಉಮ್ರಾನ್ ಮಲಿಕ್ ಉತ್ತಮ ಪ್ರದರ್ಶನ ನೀಡಿದ್ದರು.

ರೋಹಿತ್ ಶರ್ಮಾ ಹೇಳಿದ್ದೇನು?

ಕಳೆದ ಐದು ಪಂದ್ಯಗಳಲ್ಲಿ ಟೀಂ ಇಂಡಿಯಾ ಬೌಲರ್​ಗಳು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅಲ್ಲದೆ ನಾವು ಅವರಿಂದ ಏನನ್ನು ನಿರೀಕ್ಷಿಸಿದ್ದೇವೊ ಅದನ್ನು ಅವರು ಈಡೇರಿಸಲು ಪ್ರಯತ್ನಿಸಿದ್ದಾರೆ. ಭಾರತದಲ್ಲಿ ಈ ರೀತಿಯ ಬೌಲಿಂಗ್ ನೋಡಲು ಸಿಗುವುದಿಲ್ಲ. ವಿದೇಶದಲ್ಲಿ ಇಂತಹ ಬೌಲಿಂಗ್ ನೋಡಲಾಗುತ್ತದೆ. ನಮ್ಮ ಬೌಲರ್‌ಗಳ ಬಳಿ ಕೌಶಲ್ಯವಿದೆ. ಈ ಮಟ್ಟಕ್ಕೆ ಬರಲು ಅವರು ತುಂಬಾ ಕಷ್ಟಪಟ್ಟಿದ್ದಾರೆ. ಅವರ ಯಶಸ್ಸನ್ನು ನೋಡಿ ನಮಗೆ ತುಂಬಾ ಸಂತೋಷವಾಗುತ್ತಿದೆ. ಶಮಿ ಮತ್ತು ಸಿರಾಜ್ ದೊಡ್ಡ ಸ್ಪೆಲ್ ಬೌಲ್ ಮಾಡಬಲ್ಲರು. ಹೀಗಾಗಿ ಮುಂದೆ ಬರುವ ಟೆಸ್ಟ್ ಸರಣಿ ನಮಗೆ ಬಹಳ ಮುಖ್ಯವಾಗಿದೆ. ಹೀಗಾಗಿ ಈ ಇಬ್ಬರ ಬಗ್ಗೆ ನಾವು ಕಾಳಜಿ ವಹಿಸಬೇಕು ಎಂದು ಪಂದ್ಯದ ಬಳಿಕ ರೋಹಿತ್ ಶರ್ಮಾ ಹೇಳಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ