IND vs AUS: ಭಾರತ vs ಆಸ್ಟ್ರೇಲಿಯಾ ಪಂದ್ಯದಲ್ಲಿ 30 ಓವರ್ಗಳ ಕಡಿತ
India vs Australia ODI: ಭಾರತ ಮತ್ತು ಆಸ್ಟ್ರೇಲಿಯಾ ಈವರೆಗೆ 152 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 58 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದರೆ, ಆಸ್ಟ್ರೇಲಿಯಾ 84 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಾಗ್ಯೂ ಕಳೆದ ಕೆಲ ವರ್ಷಗಳಿಂದ ಆಸೀಸ್ ಪಡೆ ವಿರುದ್ಧ ಟೀಮ್ ಇಂಡಿಯಾ ಮೇಲುಗೈ ಸಾಧಿಸುತ್ತಾ ಬಂದಿದೆ. ಹೀಗಾಗಿ ಈ ಸರಣಿಯಲ್ಲೂ ಭಾರತ ತಂಡದಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

Ind Vs Aus
ಪರ್ತ್ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಏಕದಿನ ಪಂದ್ಯದಲ್ಲಿ 30 ಓವರ್ಗಳನ್ನು ಕಡಿತ ಮಾಡಲಾಗಿದೆ. ಅಂದರೆ ಪ್ರತಿ ಇನಿಂಗ್ಸ್ 50 ಓವರ್ಗಳ ಬದಲಾಗಿ 35 ಓವರ್ಗಳಿಗೆ ಸೀಮಿತವಾಗಿರಲಿದೆ. ಪಂದ್ಯದ ನಡುವೆ ಮಳೆ ಬಂದಿದ್ದರಿಂದ ಕೆಲ ಕಾಲ ಮ್ಯಾಚ್ ಸ್ಥಗಿತಗೊಂಡಿದ್ದು, ಹೀಗಾಗಿ ಓವರ್ಗಳ ಕಡಿತದೊಂದಿಗೆ ಪಂದ್ಯ ಮುಂದುವರೆಸಲು ನಿರ್ಧರಿಸಲಾಗಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಅನುಭವಿ ದಾಂಡಿಗ ರೋಹಿತ್ ಶರ್ಮಾ ಕೇವಲ 8 ರನ್ಗಳಿಗೆ ಬಲಗೈ ವೇಗಿ ಜೋಶ್ ಹೇಝಲ್ವುಡ್ಗೆ ವಿಕೆಟ್ ಒಪ್ಪಿಸಿದರು.
Follow Us




