AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಇಂದಿನಿಂದ (ಅ.19) ಆರಂಭವಾಗಿದೆ. ಕಾಂಗರೂನಾಡಿನಲ್ಲಿ ನಡೆಯುತ್ತಿರುವ ಈ ಸರಣಿಯಲ್ಲಿ ಒಟ್ಟು 8 ಪಂದ್ಯಗಳನ್ನಾಡಲಾಗುತ್ತದೆ. ಮೊದಲಿಗೆ 3 ಮ್ಯಾಚ್​ಗಳ ಏಕದಿನ ಸರಣಿ ನಡೆದರೆ, ಆ ಬಳಿಕ ಐದು ಪಂದ್ಯಗಳ ಟಿ20 ಸರಣಿ ಜರುಗಲಿದೆ.

IND vs AUS: ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ
Ind Vs Aus
ಝಾಹಿರ್ ಯೂಸುಫ್
|

Updated on:Oct 19, 2025 | 8:53 AM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುರುವಾಗಿದೆ. ಪರ್ತ್​​ನಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಲಿದೆ.

ಇನ್ನು ಈ ಪಂದ್ಯದ ಮೂಲಕ ಭಾರತ ಏಕದಿನ ತಂಡದ ನಾಯಕರಾಗಿ ಶುಭ್​​ಮನ್ ಗಿಲ್ ಪಾದಾರ್ಪಣೆ ಮಾಡಿದ್ದಾರೆ. ಅಲ್ಲದೆ ಇದೇ ಮ್ಯಾಚ್​​ ಮೂಲಕ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮತ್ತೆ ಕಣಕ್ಕಿಳಿಯಲಿದ್ದಾರೆ. ಅಂದರೆ ಕಳೆದ 7 ತಿಂಗಳಿಂದ ರೋಹಿತ್-ಕೊಹ್ಲಿ ಟೀಮ್ ಇಂಡಿಯಾ ಪರ ಯಾವುದೇ ಪಂದ್ಯವಾಡಿಲ್ಲ.

ಕೊನೆಯ ಬಾರಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದ ಈ ಜೋಡಿಯು ಇದೀಗ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ.

ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಫಿಲಿಪ್ , ಮಿಚೆಲ್ ಓವನ್, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್,ಮ್ಯಾಥ್ಯೂ ಕುಹ್ನೆಮನ್, ಮಾರ್ನಸ್ ಲಾಬುಶೇನ್.

ಭಾರತ vs ಆಸ್ಟ್ರೇಲಿಯಾ ಸರಣಿ ವೇಳಾಪಟ್ಟಿ:

    • ಏಕದಿನ ಸರಣಿ ವೇಳಾಪಟ್ಟಿ:
    • ಅಕ್ಟೋಬರ್ 19: ಮೊದಲ ಏಕದಿನ ಪಂದ್ಯ – ಪರ್ತ್ ಕ್ರೀಡಾಂಗಣ, ಪರ್ತ್
    • ಅಕ್ಟೋಬರ್ 23: ಎರಡನೇ ಏಕದಿನ ಪಂದ್ಯ – ಅಡಿಲೇಡ್ ಓವಲ್
    • ಅಕ್ಟೋಬರ್ 25: ಮೂರನೇ ಏಕದಿನ ಪಂದ್ಯ – ಸಿಡ್ನಿ ಕ್ರಿಕೆಟ್ ಮೈದಾನ, ಸಿಡ್ನಿ

ಪಂದ್ಯ ಶುರುವಾಗುವುದು ಎಷ್ಟು ಗಂಟೆಗೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಭಾರತೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ಶುರುವಾಗಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್ ಆ್ಯಪ್​ ಹಾಗೂ ವೆಬ್​ಸೈಟ್​ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.

Published On - 8:34 am, Sun, 19 October 25

Follow Us