IND vs AUS: ಭಾರತೀಯ ಬ್ಯಾಟರ್​ಗಳ ಅಬ್ಬರ: 3ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತತ್ತರ

Australia vs India: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (161) ಹಾಗೂ ವಿರಾಟ್ ಕೊಹ್ಲಿ (100) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕಗಳ ನೆರವಿನಿಂದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾಗೆ 534 ರನ್​ಗಳ ಗುರಿ ನೀಡಿದೆ.

IND vs AUS: ಭಾರತೀಯ ಬ್ಯಾಟರ್​ಗಳ ಅಬ್ಬರ: 3ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತತ್ತರ
Yashasvi Jaiswal - Virat Kohli
Follow us
ಝಾಹಿರ್ ಯೂಸುಫ್
|

Updated on: Nov 24, 2024 | 3:22 PM

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದ ಮೂರನೇ ದಿನದಾಟದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಭಾರತೀಯ ಬ್ಯಾಟರ್​ಗಳು ದ್ವಿತೀಯ ಇನಿಂಗ್ಸ್​ನಲ್ಲಿ 487 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ. ಈ ಮೂಲಕ ಆಸೀಸ್ ಪಡೆಗೆ ಕೊನೆಯ ಇನಿಂಗ್ಸ್​ನಲ್ಲಿ 534 ರನ್​ಗಳ ಬೃಹತ್ ಮೊತ್ತದ ಗುರಿ ನೀಡಿದೆ.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 150 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 104 ರನ್​ಗಳಿಗೆ ಮುಗ್ಗರಿಸಿ 46 ರನ್​ಗಳ ಹಿನ್ನಡೆ ಅನುಭವಿಸಿತು.

ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 201 ರನ್​ಗಳ ಜೊತೆಯಾಟವಾಡಿದ ಬಳಿಕ ಕೆಎಲ್ ರಾಹುಲ್ (77) ಇನಿಂಗ್ಸ್ ಅಂತ್ಯಗೊಳಿಸಿದರು.

ಆ ಬಳಿಕ ಬಂದ ದೇವದತ್ ಪಡಿಕ್ಕಲ್ ಕೇವಲ 25 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಮತ್ತೊಂದೆಡೆ ಕ್ರೀಸ್ ಕಚ್ಚಿ ನಿಂತಿದ್ದ ಯಶಸ್ವಿ ಜೈಸ್ವಾಲ್ 205 ಎಸೆತಗಳಲ್ಲಿ ಶತಕ ಪೂರೈಸಿದರು. ಶತಕದ ಬಳಿಕ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ ಜೈಸ್ವಾಲ್ 297 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ 161 ರನ್ ಬಾರಿಸಿ ಔಟಾದರು. ಆ ಬಳಿಕ ಕಣಕ್ಕಿಳಿದ ಧ್ರುವ್ ಜುರೇಲ್ (1) ಹಾಗೂ ರಿಷಭ್ ಪಂತ್ (1) ಬೇಗನೆ ವಿಕೆಟ್ ಒಪ್ಪಿಸಿದರು.

ಆದರೆ ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ ಆಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದರು. ಅಲ್ಲದೆ 143 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ 30 ಶತಕ ಬಾರಿಸಿದ ವಿಶ್ವದ 16ನೇ ಬ್ಯಾಟರ್ ಎನಿಸಿಕೊಂಡರು.

ವಿರಾಟ್ ಕೊಹ್ಲಿಯ ಈ ಭರ್ಜರಿ ಸೆಂಚುರಿ ನೆರವಿನಿಂದ ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಕಳೆದುಕೊಂಡು 487 ರನ್​ ಕಲೆಹಾಕಿದ್ದ ಟೀಮ್ ಇಂಡಿಯಾ ಡಿಕ್ಲೇರ್​ ಘೋಷಿಸಿತು. ಅತ್ತ ಮೊದಲ ಇನಿಂಗ್ಸ್​ನಲ್ಲಿ 46 ರನ್​ಗಳ ಹಿನ್ನಡೆ ಹೊಂದಿರುವ ಆಸ್ಟ್ರೇಲಿಯಾ ತಂಡವು ಗೆಲ್ಲಲು ದ್ವಿತೀಯ ಇನಿಂಗ್ಸ್​ನಲ್ಲಿ 534 ರನ್​ ಕಲೆಹಾಕಬೇಕಿದೆ.

ಟೀಮ್ ಇಂಡಿಯಾ ಶುಭಾರಂಭ:

534 ರನ್​ಗಳ ಕಠಿಣ ಸವಾಲನ್ನು ಬೆನ್ನತ್ತಲು ಕಣಕ್ಕಿಳಿದ ಆಸ್ಟ್ರೇಲಿಯಾಗೆ ಜಸ್​ಪ್ರೀತ್ ಬುಮ್ರಾ ಮೊದಲ ಓವರ್​ನಲ್ಲೇ ಆಘಾತ ನೀಡಿದ್ದಾರೆ. ದ್ವಿತೀಯ ಇನಿಂಗ್ಸ್​ನ 4ನೇ ಎಸೆತದಲ್ಲಿ ನಾಥನ್ ಮೆಕ್​ಸ್ವೀನಿ (0) ಅನ್ನು ಎಲ್​ಬಿಡಬ್ಲ್ಯೂ ಮಾಡಿ ಬುಮ್ರಾ ಭಾರತ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟಿದ್ದರು. ಇದರ ಬೆನ್ನಲ್ಲೇ ಮೊಹಮ್ಮದ್ ಸಿರಾಜ್ ಪ್ಯಾಟ್ ಕಮಿನ್ಸ್ (2) ವಿಕೆಟ್ ಪಡೆದರು.

ಇನ್ನು ಮೂರನೇ ದಿನದಾಟದ ಕೊನೆಯ ಓವರ್​ನಲ್ಲಿ ಮಾರ್ನಸ್ ಲಾಬುಶೇನ್ (3) ಕೂಡ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಅದರಂತೆ ಮೂರನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ತಂಡವು 3 ವಿಕೆಟ್ ಕಳೆದುಕೊಂಡು 12 ರನ್ ಕಲೆಹಾಕಿದೆ.

ಭಾರತ ಪ್ಲೇಯಿಂಗ್ 11: ಜಸ್​ಪ್ರೀತ್ ಬುಮ್ರಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಇತಿಹಾಸ ನಿರ್ಮಿಸಿದ ರಿಷಭ್ ಪಂತ್

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?