IND vs AUS: ಸಿರಾಜ್ ಭರ್ಜರಿ ಬೌಲಿಂಗ್: ಗೆಲುವಿನತ್ತ ಟೀಮ್ ಇಂಡಿಯಾ

Australia vs India, 1st Test: ಪರ್ತ್​ ಟೆಸ್ಟ್​ನ ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಬೌಲಿಂಗ್ ಮುಂದುವರೆಸಿದೆ. ಸೋಮವಾರ ಶುರುವಾಗಿರುವ ನಾಲ್ಕನೇ ದಿನದಾಟದ ಆರಂಭದಲ್ಲೇ ಮೊಹಮ್ಮದ್ ಸಿರಾಜ್ 2 ವಿಕೆಟ್ ಉರುಳಿಸಿದ್ದು. ಈ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ನೀಡಿದ್ದಾರೆ.

IND vs AUS: ಸಿರಾಜ್ ಭರ್ಜರಿ ಬೌಲಿಂಗ್: ಗೆಲುವಿನತ್ತ ಟೀಮ್ ಇಂಡಿಯಾ
IND vs AUS
Follow us
ಝಾಹಿರ್ ಯೂಸುಫ್
|

Updated on: Nov 25, 2024 | 10:31 AM

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ನೀಡಿದ 534 ರನ್​ಗಳ ಕಠಿಣ ಗುರಿ ಬೆನ್ನತ್ತಿರುವ ಆಸ್ಟ್ರೇಲಿಯಾ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಮೂರನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 12 ರನ್​ಗಳಿಸಿದ್ದ ಆಸ್ಟ್ರೇಲಿಯಾ ತಂಡವು ನಾಲ್ಕನೇ ದಿನದಾಟದ ಆರಂಭದಲ್ಲೇ ಉಸ್ಮಾನ್ ಖ್ವಾಜಾ (4) ವಿಕೆಟ್ ಕಳೆದುಕೊಂಡಿತು. ಸಿರಾಜ್ ಎಸೆತದ ಅತ್ಯುತ್ತಮ ಎಸೆತವನ್ನು ಗುರುತಿಸುವಲ್ಲಿ ಎಡವಿದ ಖ್ವಾಜಾ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿದರು.

ಈ ವೇಳೆ ಕಣಕ್ಕಿಳಿದ ಸ್ಟೀವ್ ಸ್ಮಿತ್ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ಕ್ರೀಸ್ ಕಚ್ಚಿ ನಿಂತಿದ್ದರು. 25ನೇ ಓವರ್​ ವೇಳೆ ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಬುಮ್ರಾ ಚೆಂಡನ್ನು ಸಿರಾಜ್​ಗೆ ಕೈಗಿತ್ತರು.

ಮತ್ತೊಮ್ಮೆ ಮಾರಕ ದಾಳಿ ಸಂಘಟಿಸಿದ ಸಿರಾಜ್ ಅನುಭವಿ ಸ್ಟೀವ್ ಸ್ಮಿತ್ (17) ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇದಾಗ್ಯೂ ಮತ್ತೊಂದೆಡೆ ಟ್ರಾವಿಸ್ ಹೆಡ್ 72 ಎಸೆತಗಳಲ್ಲಿ 63 ರನ್ ಬಾರಿಸಿ ಕ್ರೀಸ್​ನಲ್ಲಿದ್ದಾರೆ.

ಭೋಜನಾ ವಿರಾಮದ ವೇಳೆಗೆ ಆಸ್ಟ್ರೇಲಿಯಾ ತಂಡವು 5 ವಿಕೆಟ್ ಕಳೆದುಕೊಂಡು 104 ರನ್​ ಗಳಿಸಿದೆ. ಸದ್ಯ ಕ್ರೀಸ್​ನಲ್ಲಿ ಟ್ರಾವಿಸ್ ಹೆಡ್ ಹಾಗೂ ಮಿಚೆಲ್ ಮಾರ್ಷ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಅತ್ತ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 430 ರನ್​ಗಳ ಅವಶ್ಯಕತೆಯಿದ್ದರೆ, ಇತ್ತ ಟೀಮ್ ಇಂಡಿಯಾಗೆ ಕೇವಲ 5 ವಿಕೆಟ್​ಗಳ ಅಗತ್ಯತೆಯಿದೆ. ಹೀಗಾಗಿ ಪರ್ತ್​ ಟೆಸ್ಟ್ ಪಂದ್ಯವು ಸದ್ಯ ಟೀಮ್ ಇಂಡಿಯಾದ ಹಿಡಿತದಲ್ಲಿದ್ದು, ಹೀಗಾಗಿ ಈ ಮ್ಯಾಚ್​ನಲ್ಲಿ ಭಾರತ ತಂಡದ ಗೆಲುವನ್ನು ನಿರೀಕ್ಷಿಸಬಹುದು.

ಸಂಕ್ಷಿಪ್ತ ವಿವರ:

  • ಭಾರತ– 150 & 487/6 ಡಿಕ್ಲೇರ್
  • ಯಶಸ್ವಿ ಜೈಸ್ವಾಲ್ (161), ವಿರಾಟ್ ಕೊಹ್ಲಿ (100)
  • ಆಸ್ಟ್ರೇಲಿಯಾ– 104 & 104/5 (30)
  • ಮೊಹಮ್ಮದ್ ಸಿರಾಜ್ 3 ವಿಕೆಟ್, ಜಸ್​ಪ್ರೀತ್ ಬುಮ್ರಾ 2 ವಿಕೆಟ್

ಭಾರತ ಪ್ಲೇಯಿಂಗ್ 11: ಜಸ್​ಪ್ರೀತ್ ಬುಮ್ರಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಇತಿಹಾಸ ನಿರ್ಮಿಸಿದ ರಿಷಭ್ ಪಂತ್

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ