AUS vs IND: ಬುಮ್ರಾ ಬೂಮ್​ಗೆ ಆಸ್ಟ್ರೇಲಿಯಾ ತತ್ತರ: ಅಲ್ಪ ಮೊತ್ತಕ್ಕೆ ಆಸೀಸ್ ಪಡೆ ಆಲೌಟ್

Australia vs India, 1st Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವು ಪರ್ತ್​ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 150 ರನ್​ಗಳಿಗೆ ಆಲೌಟ್ ಆಗಿದೆ.

AUS vs IND: ಬುಮ್ರಾ ಬೂಮ್​ಗೆ ಆಸ್ಟ್ರೇಲಿಯಾ ತತ್ತರ: ಅಲ್ಪ ಮೊತ್ತಕ್ಕೆ ಆಸೀಸ್ ಪಡೆ ಆಲೌಟ್
IND vs AUS
Follow us
ಝಾಹಿರ್ ಯೂಸುಫ್
|

Updated on: Nov 23, 2024 | 9:52 AM

ಪರ್ತ್​ನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡವು 104 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಜಸ್​ಪ್ರೀತ್ ಬುಮ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ (0) ಶೂನ್ಯಕ್ಕೆ ಔಟಾದರೆ, ಆ ಬಳಿಕ ಬಂದ ದೇವದತ್ ಪಡಿಕ್ಕಲ್ (0) ಕೂಡ ಸೊನ್ನೆ ಸುತ್ತಿದರು. ಇನ್ನು ವಿರಾಟ್ ಕೊಹ್ಲಿ ಕೇವಲ 5 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಇದರ ಬೆನ್ನಲ್ಲೇ ವಿವಾದಾತ್ಮಕ ತೀರ್ಪಿಗೆ ಕೆಎಲ್ ರಾಹುಲ್ (26) ಬಲಿಯಾದರು. ಈ ಹಂತದಲ್ಲಿ ರಿಷಭ್ ಪಂತ್ 37 ರನ್ ಬಾರಿಸಿ ಒಂದಷ್ಟು ಹೊತ್ತು ಆಸರೆಯಾಗಿ ನಿಂತರೆ, ಮತ್ತೊಂದೆಡೆ ಧ್ರುವ್ ಜುರೇಲ್ (11) ಹಾಗೂ ವಾಷಿಂಗ್ಟನ್ ಸುಂದರ್ (4) ಬೇಗನೆ ವಿಕೆಟ್ ಒಪ್ಪಿಸಿದರು.

ಇನ್ನು ಚೊಚ್ಚಲ ಪಂದ್ಯವಾಡಿದ ನಿತೀಶ್ ಕುಮಾರ್ ರೆಡ್ಡಿ 59 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 41 ರನ್​ ಬಾರಿಸಿದರು. ಅತ್ತ ಕಡೆ ಹರ್ಷಿತ್ ರಾಣಾ (7), ಜಸ್​ಪ್ರೀತ್ ಬುಮ್ರಾ (8) ಬೇಗನೆ ವಿಕೆಟ್ ಕೈ ಚೆಲ್ಲುವುದರೊಂದಿಗೆ ಟೀಮ್ ಇಂಡಿಯಾದ ಮೊದಲ ಇನಿಂಗ್ಸ್​ ಕೇವಲ 150 ರನ್​ಗಳಿಗೆ ಕೊನೆಗೊಂಡಿತು.

ಆಸ್ಟ್ರೇಲಿಯಾ ಮೊದಲ ಇನಿಂಗ್ಸ್​:

ಭಾರತ ತಂಡವನ್ನು 150 ರನ್​ಗಳಿಗೆ ಆಲೌಟ್ ಮಾಡಿ ಮೊದಲ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ಪಡೆಗೆ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು. ನಾಥನ್ ಮೆಕ್​ಸ್ವೀನಿ (10) ವಿಕೆಟ್ ಕಬಳಿಸಿ ಶುಭಾರಂಭ ಮಾಡಿದ ಬುಮ್ರಾ, ಇದರ ಬೆನ್ನಲ್ಲೇ ಉಸ್ಮಾನ್ ಖ್ವಾಜಾಗೆ (8) ಪೆವಿಲಿಯನ್ ಹಾದಿ ತೋರಿಸಿದರು.

ಇನ್ನು ಸ್ಟೀವ್ ಸ್ಮಿತ್ (0) ಖಾತೆ ತೆರೆಯುವ ಮುನ್ನವೇ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಟ್ರಾವಿಸ್ ಹೆಡ್​ (11) ಹರ್ಷಿತ್ ರಾಣಾ ಎಸೆತದಲ್ಲಿ ಬೌಲ್ಡ್ ಆದರೆ, ಮಿಚೆಲ್ ಮಾರ್ಷ್ (6) ಹಾಗೂ ಮಾರ್ನಸ್ ಲಾಬುಶೇನ್​ (2) ಮೊಹಮ್ಮದ್ ಸಿರಾಜ್ ಎಸೆತಗಳಲ್ಲಿ ಔಟಾದರು.

ಈ ಹಂತದಲ್ಲಿ ಅಲೆಕ್ಸ್ ಕ್ಯಾರಿ ಹಾಗೂ ಪಾಟ್ ಕಮಿನ್ಸ್ ಜೊತೆಗೂಡಿದರು. ಆದರೆ ಮೊದಲ ದಿನದಾಟದ ಅಂತ್ಯದ ವೇಳೆಗೆ ಕಮಿನ್ಸ್​ (3) ವಿಕೆಟ್ ಪಡೆಯುವಲ್ಲಿ ಬುಮ್ರಾ ಯಶಸ್ವಿಯಾದರು. ಈ ಮೂಲಕ ಆಸ್ಟ್ರೇಲಿಯಾ ಮೊದಲ ದಿನಾಟದಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 67 ರನ್ ಕಲೆಹಾಕಿತು.

ಇನ್ನು ದ್ವಿತೀಯ ದಿನದಾಟದ ಆರಂಭದಲ್ಲೇ ಅಲೆಕ್ಸ್ ಕ್ಯಾರಿ (21) ಯನ್ನು ಔಟ್ ಮಾಡಿ ಜಸ್​ಪ್ರೀತ್ ಬುಮ್ರಾ 5 ವಿಕೆಟ್​ಗಳ ಸಾಧನೆ ಮಾಡಿದರು. ಇದರ ಬೆನ್ನಲ್ಲೇ ಹರ್ಷಿತ್ ರಾಣಾ ಎಸೆತದಲ್ಲಿ ನಾಥನ್ ಲಿಯಾನ್ (5) ಔಟಾದರು.

ಅಂತಿಮವಾಗಿ ಹರ್ಷಿತ್ ರಾಣಾ ಎಸೆತದಲ್ಲಿ ಮಿಚೆಲ್ ಸ್ಟಾರ್ಕ್​ (26) ರಿಷಭ್ ಪಂತ್​ಗೆ ಕ್ಯಾಚ್ ನೀಡಿದರು. ಇದರೊಂದಿಗೆ ಆಸ್ಟ್ರೇಲಿಯಾ ತಂಡವು 104 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 46 ರನ್​ಗಳ ಮುನ್ನಡೆ ಪಡೆದುಕೊಂಡಿದೆ.

ಬುಮ್ರಾ ಬೂಮ್ ಬೂಮ್:

ಮೊದಲ ಇನಿಂಗ್ಸ್​ನಲ್ಲಿ 18 ಓವರ್​ಗಳನ್ನು ಎಸೆದ ಜಸ್​ಪ್ರೀತ್ ಬುಮ್ರಾ ಕೇವಲ 30 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಅತ್ತ ಮೊಹಮ್ಮದ್ ಸಿರಾಜ್ 2 ವಿಕೆಟ್ ಪಡೆದರೆ, ಯುವ ವೇಗಿ ಹರ್ಷಿತ್ ರಾಣಾ 3 ವಿಕೆಟ್ ಕಬಳಿಸಿ ಮಿಂದಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಇತಿಹಾಸ ನಿರ್ಮಿಸಿದ ರಿಷಭ್ ಪಂತ್

ಭಾರತ ಪ್ಲೇಯಿಂಗ್ 11: ಜಸ್​ಪ್ರೀತ್ ಬುಮ್ರಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ.

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ