IND vs AUS: ಆಸ್ಟ್ರೇಲಿಯಾಗೆ ಸ್ಪರ್ಧಾತ್ಮಕ ಗುರಿ ನೀಡಿದ ಟೀಮ್ ಇಂಡಿಯಾ

Australia vs India, 2nd ODI: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಏಕದಿನ ಪಂದ್ಯವು ಸರಣಿ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ. ಇದೀಗ ದ್ವಿತೀಯ ಪಂದ್ಯದಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.

IND vs AUS: ಆಸ್ಟ್ರೇಲಿಯಾಗೆ ಸ್ಪರ್ಧಾತ್ಮಕ ಗುರಿ ನೀಡಿದ ಟೀಮ್ ಇಂಡಿಯಾ
Ind Vs Aus

Updated on: Oct 23, 2025 | 12:56 PM

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 264 ರನ್​ಗಳಿಸಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕನಾಗಿ ಕಣಕ್ಕಿಳಿದ ಶುಭ್​​ಮನ್ ಗಿಲ್ ಕೇವಲ 4 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ವಿರಾಟ್ ಕೊಹ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು. 4ನೇ ವಿಕೆಟ್​ಗೆ ಶತಕದ ಜೊತೆಯಾವಾಟವಾಡುವ ಈ ಮೂಲಕ ಈ ಜೋಡಿ ಭಾರತ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಇದರ ನಡುವೆ ರೋಹಿತ್ ಶರ್ಮಾ 97 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 73 ರನ್ ಬಾರಿಸಿದರು. ಈ ಹಂತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಹಿಟ್​ಮ್ಯಾನ್ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಶ್ರೇಯಸ್ ಅಯ್ಯರ್ (61) ಕೂಡ ಬೌಲ್ಡ್ ಆಗಿ ಹೊರ ನಡೆದರು.

ಈ ವೇಳೆಗ ಆಗಮಿಸಿದ ಅಕ್ಷರ್ ಪಟೇಲ್ 41 ರನ್​ಗಳ ಕೊಡುಗೆ ನೀಡಿದರೆ, ಕೆಎಲ್ ರಾಹುಲ್ 11 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ಇನ್ನು ವಾಷಿಂಗ್ಟನ್ ಸುಂದರ್ 12 ರನ್​ಗಳಿಸಿದರೆ, ನಿತೀಶ್ ಕುಮಾರ್ ರೆಡ್ಡಿ 8 ರನ್ ಬಾರಿಸಿ ಪೆವಿಲಿಯನ್​ಗೆ ಹಿಂತಿರುಗಿದರು.

ಇನ್ನು 9ನೇ ವಿಕೆಟ್​ಗೆ ಹರ್ಷಿತ್ ರಾಣಾ (24) ಹಾಗೂ ಅರ್ಷದೀಪ್ ಸಿಂಗ್ (13) 37 ರನ್​ಗಳ ಜೊತೆಯಾಟವಾಡಿದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 264 ರನ್ ಕಲೆಹಾಕಿದೆ.

ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್.

ಇದನ್ನೂ ಓದಿ: 17 ವರ್ಷಗಳ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಹಿಂದೆಂದೂ ಹೀಗೆ ಔಟಾಗಿರಲಿಲ್ಲ..!

ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಮಿಚೆಲ್ ಓವನ್, ಕ್ಸೇವಿಯರ್ ಬಾರ್ಟ್ಲೆಟ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹೇಝಲ್​ವುಡ್.