IND vs AUS: ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ

India vs Australia: ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​ನಲ್ಲಿ ಸೋತಿದ್ದ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸದೊಂದಿಗೆ ಕಣಕ್ಕಿಳಿದಿದೆ . ಕಾಂಗರೂನಾಡಿನಲ್ಲಿ ನಡೆಯುತ್ತಿರುವ ಈ ಸರಣಿಯ ದ್ವಿತೀಯ ಪಂದ್ಯ ಅಡಿಲೇಡ್​ನಲ್ಲಿ ನಡೆದರೆ, ಮೂರನೇ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಗ್ರೌಂಡ್ ಆತಿಥ್ಯವಹಿಸಲಿದೆ.

IND vs AUS: ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ
Ind Vs Aus

Updated on: Oct 23, 2025 | 8:32 AM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಏಕದಿನ ಪಂದ್ಯ ಶುರುವಾಗಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಭಾರತ ತಂಡ ಮೊದಲು ಬ್ಯಾಟ್ ಮಾಡಲಿದೆ.

ಸರಣಿ ನಿರ್ಣಾಯಕ ಪಂದ್ಯ:

ಈ ಮ್ಯಾಚ್ ಟೀಮ್ ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಏಕೆಂದರೆ ಪರ್ತ್​​ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 7 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ದ್ವಿತೀಯ ಪಂದ್ಯದಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿಯನ್ನು ಸಮಬಲಗೊಳಿಸಬಹುದು. ಅಲ್ಲದೆ ಮೂರನೇ ಪಂದ್ಯದ ಮೂಲಕ ಸರಣಿ ಜಯಿಸಬಹುದು. ಹೀಗಾಗಿ ಇಂದಿನ ಪಂದ್ಯವು ಸರಣಿ ನಿರ್ಣಾಯಕ ಎಂದೇ ಹೇಳಬಹುದು.

ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಫಿಲಿಪ್ , ಮಿಚೆಲ್ ಓವನ್, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್,ಮ್ಯಾಥ್ಯೂ ಕುಹ್ನೆಮನ್, ಮಾರ್ನಸ್ ಲಾಬುಶೇನ್.

ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:

  • ಅಕ್ಟೋಬರ್ 19: ಮೊದಲ ಏಕದಿನ ಪಂದ್ಯ – ಪರ್ತ್ ಕ್ರೀಡಾಂಗಣ, ಪರ್ತ್ – ಆಸ್ಟ್ರೇಲಿಯಾ ತಂಡಕ್ಕೆ ಜಯ
  • ಅಕ್ಟೋಬರ್ 23: ಎರಡನೇ ಏಕದಿನ ಪಂದ್ಯ – ಅಡಿಲೇಡ್ ಓವಲ್
  • ಅಕ್ಟೋಬರ್ 25: ಮೂರನೇ ಏಕದಿನ ಪಂದ್ಯ – ಸಿಡ್ನಿ ಕ್ರಿಕೆಟ್ ಮೈದಾನ, ಸಿಡ್ನಿ

ಇದನ್ನೂ ಓದಿ: ಪಾಕ್ ಬೌಲರ್‌ಗಳನ್ನ ಚೆಂಡಾಡಿ ವಿಶ್ವ ದಾಖಲೆ ಬರೆದ ಕಗಿಸೊ ರಬಾಡ

ಪಂದ್ಯ ಶುರುವಾಗುವುದು ಎಷ್ಟು ಗಂಟೆಗೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಭಾರತೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ಶುರುವಾಗಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್ ಆ್ಯಪ್​ ಹಾಗೂ ವೆಬ್​ಸೈಟ್​ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.