Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs IND: ಮೊದಲ ಇನಿಂಗ್ಸ್ ಅಂತ್ಯ: ಡ್ರಾದತ್ತ ಭಾರತ-ಆಸ್ಟ್ರೇಲಿಯಾ ಪಂದ್ಯ

Australia vs India, 3rd Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯವು ಕೊನೆಯ ದಿನದಾಟಕ್ಕೆ ಕಾಲಿಟ್ಟಿದೆ. ಈ ಪಂದ್ಯವು ಡ್ರಾಗೊಳ್ಳುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ನಡೆದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್ ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ 10 ವಿಕೆಟ್‌ಗಳ ಗೆಲುವು ದಾಖಲಿಸಿದೆ.

AUS vs IND: ಮೊದಲ ಇನಿಂಗ್ಸ್ ಅಂತ್ಯ: ಡ್ರಾದತ್ತ ಭಾರತ-ಆಸ್ಟ್ರೇಲಿಯಾ ಪಂದ್ಯ
Ind Vs Aus
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 18, 2024 | 7:15 AM

ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಅಂತ್ಯಗೊಂಡಿದೆ. ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (152) ಹಾಗೂ ಸ್ಟೀವ್ ಸ್ಮಿತ್ (101) ಆಕರ್ಷಕ ಶತಕ ಬಾರಿಸಿ ಮಿಂಚಿದರು. ಈ ಸೆಂಚುರಿಗಳ ನೆರವಿನಿಂದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್ ನಲ್ಲಿ 445 ರನ್ ಕಲೆಹಾಕಿ ಆಲೌಟ್ ಆಯಿತು.

ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಶುರು ಮಾಡಿದ ಟೀಮ್ ಇಂಡಿಯಾ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ನಿಂತ ಕೆಎಲ್ ರಾಹುಲ್ 139 ಎಸೆತಗಳಲ್ಲಿ 8 ಫೋರ್ ಗಳೊಂದಿಗೆ 84 ರನ್ ಬಾರಿಸಿದರು. ಇನ್ನು ಕೆಲ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ 77 ರನ್ ಗಳ ಕೊಡುಗೆ ನೀಡಿದರು. ಅದರಲ್ಲೂ 10ನೇ ವಿಕೆಟ್‌ಗೆ ಜೊತೆಗೂಡಿದ ಜಸ್ ಪ್ರೀತ್ ಬುಮ್ರಾ (10) ಹಾಗೂ ಆಕಾಶ್ ದೀಪ್ (31) 47 ರನ್ ಗಳ ಜೊತೆಯಾಟವಾಡುವ ಮೂಲಕ ಫಾಲೋಆನ್ ತಪ್ಪಿಸಿದರು. ಅಂತಿಮವಾಗಿ ಟೀಮ್ ಇಂಡಿಯಾ 260 ರನ್ ಗಳಿಗೆ ಆಲೌಟ್ ಆಗುವ ಮೂಲಕ ಮೊದಲ ಇನಿಂಗ್ಸ್ ಅಂತ್ಯಗೊಳಿಸಿದರು.

ಡ್ರಾದತ್ತ ಪಂದ್ಯ:

ಮಳೆಬಾಧಿತ ಈ ಪಂದ್ಯವು 5ನೇ ದಿನದಾಟಕ್ಕೆ ಕಾಲಿಟಿದ್ದು, ಇದೀಗ ಆಸ್ಟ್ರೇಲಿಯಾ ದ್ವಿತೀಯ ಇನಿಂಗ್ಸ್ ಆರಂಭಿಸಬೇಕಿದೆ. ಸದ್ಯ 185 ರನ್ ಗಳ ಮುನ್ನಡೆ ಹೊಂದಿರುವ ಆಸ್ಟ್ರೇಲಿಯಾ ತಂಡ ಬೃಹತ್ ಮೊತ್ತದ ಟಾರ್ಗೆಟ್ ನೀಡಿದರೂ ಟೀಮ್ ಇಂಡಿಯಾ ಪಂದ್ಯವನ್ನು ಡ್ರಾನಲ್ಲಿ ಅಂತ್ಯಗೊಳಿಸಲು ಪ್ರಯತ್ನಿಸಲಿದೆ. ಹೀಗಾಗಿ ಗಾಬಾ ಟೆಸ್ಟ್ ಡ್ರಾಗೊಳ್ಳುವ ಸಾಧ್ಯತೆ ಹೆಚ್ಚು.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಪಾಕಿಸ್ತಾನ್ ಪರ ಕಣಕ್ಕಿಳಿದ ಇಬ್ಬರು ಹಿಂದೂ ಕ್ರಿಕೆಟಿಗರು ಯಾರು ಗೊತ್ತಾ?

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.