ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಅಂತ್ಯವಾಗಿದೆ. ಮಳೆಯೊಂದಿಗಿನ ಕಣ್ಣಾ ಮುಚ್ಚಾಲೆಯೊಂದಿಗೆ ಶುರುವಾದ ಮೂರನೇ ದಿನದಾಟದ ಆರಂಭದಲ್ಲೇ ಆಸ್ಟ್ರೇಲಿಯಾ ತಂಡವು ಮಿಚೆಲ್ ಸ್ಟಾರ್ಕ್ (18), ನಾಥನ್ ಲಿಯಾನ್ (2) ಹಾಗೂ ಅಲೆಕ್ಸ್ ಕ್ಯಾರಿ (70)ಯ ವಿಕೆಟ್ ಕಳೆದುಕೊಂಡಿತು.
ಇದರೊಂದಿಗೆ ಆಸ್ಟ್ರೇಲಿಯಾ ತಂಡದ ಪ್ರಥಮ ಇನಿಂಗ್ಸ್ 445 ರನ್ಗಳಿಗೆ ಕೊನೆಗೊಂಡಿತು. ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಮಿಚೆಲ್ ಸ್ಟಾರ್ಕ್ ಮೊದಲ ಓವರ್ನಲ್ಲೇ ಆಘಾತ ನೀಡಿದ್ದರು.
ಮೊದಲ ಓವರ್ನ 2ನೇ ಎಸೆತದಲ್ಲಿ ಯಶಸ್ವಿ ಜೈಸ್ವಾಲ್ (4) ವಿಕೆಟ್ ಕಬಳಿಸಿ ಸ್ಟಾರ್ಕ್ ಆಸ್ಟ್ರೇಲಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಶುಭ್ಮನ್ ಗಿಲ್ (1) ಕೂಡ ಸ್ಟಾರ್ಕ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.
ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 3 ರನ್ಗಳಿಸಿ ಜೋಶ್ ಹ್ಯಾಝಲ್‌ವುಡ್ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದರು. ಆ ಬಳಿಕ ಬಂದ ರಿಷಭ್ ಪಂತ್ 9 ರನ್ಗಳಿಸಿ ಬಂದ ವೇಗದಲ್ಲೇ ಹಿಂತಿರುಗಿದರು.
ಇದರ ನಡುವೆ ಹಲವು ಬಾರಿ ಪಂದ್ಯಕ್ಕೆ ಮಳೆಯ ಅಡಚಣೆಯನ್ನುಂಟು ಮಾಡಿತು. ಇದಾಗ್ಯೂ ಉತ್ತಮ ದಾಳಿ ಸಂಘಟಿಸಿದ ಆಸ್ಟ್ರೇಲಿಯಾ ಬೌಲರ್ಗಳು 17 ಓವರ್ಗಳಲ್ಲಿ 51 ರನ್ ನೀಡಿ 4 ವಿಕೆಟ್ ಕಬಳಿಸಿದರು.
18ನೇ ಓವರ್ ಆರಂಭಕ್ಕೂ ಮುನ್ನ ಮತ್ತೆ ಮಳೆ ಬರಲಾರಂಭಿಸಿದರಿಂದ ಅಂಪೈರ್ ದಿನದಾಟವನ್ನು ಅಂತ್ಯಗೊಳಿಸಲು ನಿರ್ಧರಿಸಿದರು. ಅದರಂತೆ ಮೂರನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 51 ರನ್ ಕಲೆಹಾಕಿದೆ. ಕ್ರೀಸ್ನಲ್ಲಿ ಕೆಎಲ್ ರಾಹುಲ್ (33) ಹಾಗೂ ರೋಹಿತ್ ಶರ್ಮಾ (0) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಆಸ್ಟ್ರೇಲಿಯಾ– 445 (ಪ್ರಥಮ ಇನಿಂಗ್ಸ್)
ಟ್ರಾವಿಸ್ ಹೆಡ್ (152), ಸ್ಟೀವ್ ಸ್ಮಿತ್ (101), ಅಲೆಕ್ಸ್ ಕ್ಯಾರಿ (70).
ಭಾರತ– 51/4 (17)
ಕೆಎಲ್ ರಾಹುಲ್ (33*), ರಿಷಭ್ ಪಂತ್ (9).
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: ಪಾಕಿಸ್ತಾನ್ ಪರ ಕಣಕ್ಕಿಳಿದ ಇಬ್ಬರು ಹಿಂದೂ ಕ್ರಿಕೆಟಿಗರು ಯಾರು ಗೊತ್ತಾ?
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.
Published On - 1:11 pm, Mon, 16 December 24