IND vs AUS: ಭಾರತ ತಂಡಕ್ಕೆ 275 ರನ್​ಗಳ ಗುರಿ ನೀಡಿದ ಆಸ್ಟ್ರೇಲಿಯಾ

Australia vs India, 3rd Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಬ್ರಿಸ್ಬೇನ್​ನಲ್ಲಿ ನಡೆಯುತ್ತಿದೆ. ಪರ್ತ್​ನಲ್ಲಿ ನಡೆದ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​​ಗಳ ಜಯ ಸಾಧಿಸಿದೆ. ಇನ್ನು ಅಡಿಲೇಡ್​ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಗೆಲುವು ದಾಖಲಿಸಿದೆ. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

IND vs AUS: ಭಾರತ ತಂಡಕ್ಕೆ 275 ರನ್​ಗಳ ಗುರಿ ನೀಡಿದ ಆಸ್ಟ್ರೇಲಿಯಾ
Ind Vs Aus
Follow us
ಝಾಹಿರ್ ಯೂಸುಫ್
|

Updated on:Dec 18, 2024 | 10:01 AM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯವು ರಣರೋಚಕಘಟ್ಟದತ್ತ ಸಾಗುತ್ತಿದೆ. ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 445 ರನ್​ ಕಲೆಹಾಕಿದರೆ, ಟೀಮ್ ಇಂಡಿಯಾ 260 ರನ್​ಗಳಿಸಿ ಆಲೌಟ್ ಆಗಿತ್ತು. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 18 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 89 ರನ್ ಕಲೆಹಾಕಿ ಡಿಕ್ಲೇರ್ ಘೋಷಿಸಿದೆ.

ಮೊದಲ ಇನಿಂಗ್ಸ್​ ಹಿನ್ನಡೆಯೊಂದಿಗೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲು 275 ರನ್​​ಗಳನ್ನು ಕಲೆಹಾಕಬೇಕಿದೆ. ಇತ್ತ ಪಂದ್ಯವು 5ನೇ ದಿನದಾಟದ 2ನೇ ಸೆಷನ್​ನಲ್ಲಿದ್ದು, ಹೀಗಾಗಿ ಈ ಟಾರ್ಗೆಟ್ ಬೆನ್ನತ್ತುವುದು ಕಷ್ಟಸಾಧ್ಯ ಎನ್ನಬಹುದು.

ಇದಾಗ್ಯೂ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡದಿದ್ದರೆ ಭಾರತ ತಂಡವು ಕನಿಷ್ಠ 52 ಓವರ್​​ಗಳನ್ನು ಎದುರಿಸಲಿದ್ದು, ಈ ಮೂಲಕ 275 ರನ್​ ಕಲೆಹಾಕಿ ಗೆಲುವು ಸಾಧಿಸಬಹುದು. ಅತ್ತ ಆಸ್ಟ್ರೇಲಿಯಾ ತಂಡವು ಈ ಪಂದ್ಯದಲ್ಲಿ ಗೆಲುವು ಸಾಧಿಸಬೇಕಿದ್ದರೆ ಟೀಮ್ ಇಂಡಿಯಾವನ್ನು ಆಲೌಟ್ ಮಾಡಬೇಕು.

275 ರನ್​ಗಳ ಒಳಗೆ ಭಾರತ ತಂಡವನ್ನು ಆಲೌಟ್ ಮಾಡುವ ತಂತ್ರದೊಂದಿಗೆ ಡಿಕ್ಲೇರ್ ಘೋಷಿಸಿರುವ ಆಸ್ಟ್ರೇಲಿಯಾ ಪರ ಮೂವರು ವೇಗಿಗಳು ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ ಹಾಗೂ ಮಿಚೆಲ್ ಮಾರ್ಷ್ ಆಸ್ಟ್ರೇಲಿಯಾ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ.

ಆದರೆ ಮೊದಲ ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದ ಜೋಶ್ ಹ್ಯಾಝಲ್​ವುಡ್ ಗಾಯದ ಕಾರಣ ದ್ವಿತೀಯ ಇನಿಂಗ್ಸ್​ಗೆ ಅಲಭ್ಯರಾಗಿದ್ದಾರೆ. ಇದು ಟೀಮ್ ಇಂಡಿಯಾ ಪಾಲಿಗೆ ಪ್ಲಸ್ ಪಾಯಿಂಟ್. ಈ ಪ್ಲಸ್ ಪಾಯಿಂಟ್ ಅನ್ನು ಸದುಪಯೋಗಪಡಿಸಿಕೊಂಡು ಭಾರತೀಯ ಬ್ಯಾಟರ್​​ಗಳು ಗೆಲುವು ದಕ್ಕಿಸಿಕೊಳ್ಳಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಪಾಕಿಸ್ತಾನ್ ಪರ ಕಣಕ್ಕಿಳಿದ ಇಬ್ಬರು ಹಿಂದೂ ಕ್ರಿಕೆಟಿಗರು ಯಾರು ಗೊತ್ತಾ?

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

Published On - 10:00 am, Wed, 18 December 24

ಕಿತ್ತಾಟದಿಂದ ರದ್ದಾಯ್ತು ಟಾಸ್ಕ್; ದೊಡ್ಡ ಪರಿಣಾಮ ಎದುರಿಸಿದ ಮನೆ ಮಂದಿ
ಕಿತ್ತಾಟದಿಂದ ರದ್ದಾಯ್ತು ಟಾಸ್ಕ್; ದೊಡ್ಡ ಪರಿಣಾಮ ಎದುರಿಸಿದ ಮನೆ ಮಂದಿ
ಜಪ ಮಾಲೆಯಲ್ಲಿನ 108 ಮಣಿಗಳ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
ಜಪ ಮಾಲೆಯಲ್ಲಿನ 108 ಮಣಿಗಳ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಲಿದೆ
Daily Horoscope: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಲಿದೆ
ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ
ನಡುರಸ್ತೆಯಲ್ಲಿ ಯುವತಿಯ ಕೂದಲು ಹಿಡಿದೆಳೆದ ಪುರುಷರು; ವಿಡಿಯೋ ಇಲ್ಲಿದೆ
ನಡುರಸ್ತೆಯಲ್ಲಿ ಯುವತಿಯ ಕೂದಲು ಹಿಡಿದೆಳೆದ ಪುರುಷರು; ವಿಡಿಯೋ ಇಲ್ಲಿದೆ
ಜಾರಕಿಹೊಳಿ ಮತ್ತು ಬಸನಗೌಡ ಯತ್ನಾಳ್ ಹೇಳಿಕೆಗಳಲ್ಲಿ ವ್ಯತ್ಯಾಸ!
ಜಾರಕಿಹೊಳಿ ಮತ್ತು ಬಸನಗೌಡ ಯತ್ನಾಳ್ ಹೇಳಿಕೆಗಳಲ್ಲಿ ವ್ಯತ್ಯಾಸ!
ವಿಜಯೇಂದ್ರರನ್ನು ಟೀಕಿಸುವುದು ಬಿಡದ ಯತ್ನಾಳ್, ಪುನಃ ಟೀಕಾಪ್ರಹಾರ!
ವಿಜಯೇಂದ್ರರನ್ನು ಟೀಕಿಸುವುದು ಬಿಡದ ಯತ್ನಾಳ್, ಪುನಃ ಟೀಕಾಪ್ರಹಾರ!
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸಿದ ರಜತ್-ಉಗ್ರಂ ಮಂಜು
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸಿದ ರಜತ್-ಉಗ್ರಂ ಮಂಜು