ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯವು ರಣರೋಚಕಘಟ್ಟದತ್ತ ಸಾಗುತ್ತಿದೆ. ಬ್ರಿಸ್ಬೇನ್ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 445 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 260 ರನ್ಗಳಿಸಿ ಆಲೌಟ್ ಆಗಿತ್ತು. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 18 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 89 ರನ್ ಕಲೆಹಾಕಿ ಡಿಕ್ಲೇರ್ ಘೋಷಿಸಿದೆ.
ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಲು 275 ರನ್ಗಳನ್ನು ಕಲೆಹಾಕಬೇಕಿದೆ. ಇತ್ತ ಪಂದ್ಯವು 5ನೇ ದಿನದಾಟದ 2ನೇ ಸೆಷನ್ನಲ್ಲಿದ್ದು, ಹೀಗಾಗಿ ಈ ಟಾರ್ಗೆಟ್ ಬೆನ್ನತ್ತುವುದು ಕಷ್ಟಸಾಧ್ಯ ಎನ್ನಬಹುದು.
ಇದಾಗ್ಯೂ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡದಿದ್ದರೆ ಭಾರತ ತಂಡವು ಕನಿಷ್ಠ 52 ಓವರ್ಗಳನ್ನು ಎದುರಿಸಲಿದ್ದು, ಈ ಮೂಲಕ 275 ರನ್ ಕಲೆಹಾಕಿ ಗೆಲುವು ಸಾಧಿಸಬಹುದು. ಅತ್ತ ಆಸ್ಟ್ರೇಲಿಯಾ ತಂಡವು ಈ ಪಂದ್ಯದಲ್ಲಿ ಗೆಲುವು ಸಾಧಿಸಬೇಕಿದ್ದರೆ ಟೀಮ್ ಇಂಡಿಯಾವನ್ನು ಆಲೌಟ್ ಮಾಡಬೇಕು.
275 ರನ್ಗಳ ಒಳಗೆ ಭಾರತ ತಂಡವನ್ನು ಆಲೌಟ್ ಮಾಡುವ ತಂತ್ರದೊಂದಿಗೆ ಡಿಕ್ಲೇರ್ ಘೋಷಿಸಿರುವ ಆಸ್ಟ್ರೇಲಿಯಾ ಪರ ಮೂವರು ವೇಗಿಗಳು ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ ಹಾಗೂ ಮಿಚೆಲ್ ಮಾರ್ಷ್ ಆಸ್ಟ್ರೇಲಿಯಾ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ.
ಆದರೆ ಮೊದಲ ಇನಿಂಗ್ಸ್ನಲ್ಲಿ ಬೌಲಿಂಗ್ ಮಾಡಿದ್ದ ಜೋಶ್ ಹ್ಯಾಝಲ್ವುಡ್ ಗಾಯದ ಕಾರಣ ದ್ವಿತೀಯ ಇನಿಂಗ್ಸ್ಗೆ ಅಲಭ್ಯರಾಗಿದ್ದಾರೆ. ಇದು ಟೀಮ್ ಇಂಡಿಯಾ ಪಾಲಿಗೆ ಪ್ಲಸ್ ಪಾಯಿಂಟ್. ಈ ಪ್ಲಸ್ ಪಾಯಿಂಟ್ ಅನ್ನು ಸದುಪಯೋಗಪಡಿಸಿಕೊಂಡು ಭಾರತೀಯ ಬ್ಯಾಟರ್ಗಳು ಗೆಲುವು ದಕ್ಕಿಸಿಕೊಳ್ಳಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: ಪಾಕಿಸ್ತಾನ್ ಪರ ಕಣಕ್ಕಿಳಿದ ಇಬ್ಬರು ಹಿಂದೂ ಕ್ರಿಕೆಟಿಗರು ಯಾರು ಗೊತ್ತಾ?
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್ಸ್ವೀನಿ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್ವುಡ್.
Published On - 10:00 am, Wed, 18 December 24