AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತ vs ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಡ್ರಾನಲ್ಲಿ ಅಂತ್ಯ

Australia vs India: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮ್ಯಾಚ್ ಡ್ರಾನಲ್ಲಿ ಕೊನೆಗೊಂಡಿದೆ. ಬ್ರಿಸ್ಬೇನ್​ ಗಾಬಾ ಮೈದಾನದಲ್ಲಿ ನಡೆದ ಈ ಪಂದ್ಯದ ಬಹುತೇಕ ದಿನದಾಟಗಳು ಮಳೆಗಾಹುತಿಯಾಗಿತ್ತು. ಹೀಗಾಗಿ ಈ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿದೆ. ಇದರೊಂದಿಗೆ ಸರಣಿಯು 1-1 ಅಂತರದಿಂದ ಮುಂದುವರೆದಿದೆ.

IND vs AUS: ಭಾರತ vs ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಡ್ರಾನಲ್ಲಿ ಅಂತ್ಯ
Australia vs India
ಝಾಹಿರ್ ಯೂಸುಫ್
|

Updated on: Dec 18, 2024 | 11:18 AM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ. ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆದ ಈ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿತ್ತು. ಹೀಗಾಗಿ ಸಂಪೂರ್ಣ ದಿನದಾಟಗಳು ನಡೆದಿರಲಿಲ್ಲ. ಇದಾಗ್ಯೂ ಕೊನೆಯ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡವು ಭಾರತಕ್ಕೆ 275 ರನ್​ಗಳ ಗುರಿ ನೀಡಿತ್ತು. ಆದರೆ ಅಂತಿಮ ದಿನದಾಟಕ್ಕೂ ವರುಣ ಅವಕೃಪೆ ತೋರಿದ್ದಾನೆ. ಹೀಗಾಗಿ ಅಂಪೈರ್ 5ನೇ​ ದಿನದಾಟವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ.

ಅದರಂತೆ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮ್ಯಾಚ್ ಡ್ರಾನಲ್ಲಿ ಕೊನೆಗೊಂಡಿದೆ. ಇದಕ್ಕೂ ಮುನ್ನ ಪರ್ತ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಅಡಿಲೇಡ್​ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಇದೀಗ ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿರುವ ಕಾರಣ, ಸರಣಿ ಜಯಿಸಲು ಮುಂದಿನ ಎರಡು ಪಂದ್ಯಗಳು ನಿರ್ಣಾಯಕ. ಹೀಗಾಗಿ ಮೆಲ್ಬೋರ್ನ್​ ಹಾಗೂ ಸಿಡ್ನಿಯಲ್ಲಿ ನಡೆಯಲಿರುವ 4ನೇ ಮತ್ತು 5ನೇ ಪಂದ್ಯದಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

3ನೇ ಟೆಸ್ಟ್ ಸಂಕ್ಷಿಪ್ತ ವಿವರ:

  • ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ.
  • ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (152) ಹಾಗೂ ಸ್ಟೀವ್ ಸ್ಮಿತ್ (101) ಶತಕ.
  • ಮೊದಲ ಇನಿಂಗ್ಸ್​ನಲ್ಲಿ 445 ರನ್​ಗಳಿಸಿ ಆಲೌಟ್ ಆದ ಆಸ್ಟ್ರೇಲಿಯಾ.
  • ಟೀಮ್ ಇಂಡಿಯಾ ಪರ ಮೊದಲ ಇನಿಂಗ್ಸ್​ನಲ್ಲಿ 6 ವಿಕೆಟ್ ಕಬಳಿಸಿ ಮಿಂಚಿದ ಜಸ್​ಪ್ರೀತ್ ಬುಮ್ರಾ.
  • ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಪರ ಅರ್ಧಶತಕ ಬಾರಿಸಿದ ಕೆಎಲ್ ರಾಹುಲ್ (84) ಹಾಗೂ ರವೀಂದ್ರ ಜಡೇಜಾ (77).
  • 10ನೇ ವಿಕೆಟ್​ಗೆ 47 ರನ್​​ಗಳ ಜೊತೆಯಾಟವಾಡಿ ಫಾಲೋಆನ್ ತಪ್ಪಿಸಿದ ಆಕಾಶ್ ದೀಪ್ (31) ಹಾಗೂ ಜಸ್​ಪ್ರೀತ್ ಬುಮ್ರಾ.
  • ಮೊದಲ ಇನಿಂಗ್ಸ್​ನಲ್ಲಿ 260 ರನ್​ಗಳಿಸಿ ಆಲೌಟ್ ಆದ ಟೀಮ್ ಇಂಡಿಯಾ.
  • ದ್ವಿತೀಯ ಇನಿಂಗ್ಸ್​ನಲ್ಲಿ 7 ವಿಕೆಟ್ ನಷ್ಟಕ್ಕೆ 89 ರನ್​ಗಳಿಸಿ ಡಿಕ್ಲೇರ್ ಘೋಷಿಸಿದ ಆಸ್ಟ್ರೇಲಿಯಾ.
  • ಮೊದಲ ಇನಿಂಗ್ಸ್​ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 275 ರನ್​​ಗಳ ಗುರಿ ಪಡೆದ ಟೀಮ್ ಇಂಡಿಯಾ.
  • ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 8 ರನ್​ಗಳಿಸಿದ್ದ ವೇಳೆ ಮಳೆ ಅಡಚಣೆ/ಬ್ಯಾಡ್ ಲೈಟ್.
  • ಮಳೆಯ ಕಾರಣ ಐದನೇ ದಿನದಾಟವನ್ನು ರದ್ದುಗೊಳಿಸಲು ನಿರ್ಧರಿಸಿದ ಅಂಪೈರ್.
  • ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯ.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಪಾಕಿಸ್ತಾನ್ ಪರ ಕಣಕ್ಕಿಳಿದ ಇಬ್ಬರು ಹಿಂದೂ ಕ್ರಿಕೆಟಿಗರು ಯಾರು ಗೊತ್ತಾ?

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ