ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ. ಬ್ರಿಸ್ಬೇನ್ನ ಗಾಬಾ ಮೈದಾನದಲ್ಲಿ ನಡೆದ ಈ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿತ್ತು. ಹೀಗಾಗಿ ಸಂಪೂರ್ಣ ದಿನದಾಟಗಳು ನಡೆದಿರಲಿಲ್ಲ. ಇದಾಗ್ಯೂ ಕೊನೆಯ ದಿನದಾಟದಲ್ಲಿ ಆಸ್ಟ್ರೇಲಿಯಾ ತಂಡವು ಭಾರತಕ್ಕೆ 275 ರನ್ಗಳ ಗುರಿ ನೀಡಿತ್ತು. ಆದರೆ ಅಂತಿಮ ದಿನದಾಟಕ್ಕೂ ವರುಣ ಅವಕೃಪೆ ತೋರಿದ್ದಾನೆ. ಹೀಗಾಗಿ ಅಂಪೈರ್ 5ನೇ ದಿನದಾಟವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ.
ಅದರಂತೆ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮ್ಯಾಚ್ ಡ್ರಾನಲ್ಲಿ ಕೊನೆಗೊಂಡಿದೆ. ಇದಕ್ಕೂ ಮುನ್ನ ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ಅಡಿಲೇಡ್ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್ಗಳ ಗೆಲುವು ದಾಖಲಿಸಿದೆ.
ಇದೀಗ ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿರುವ ಕಾರಣ, ಸರಣಿ ಜಯಿಸಲು ಮುಂದಿನ ಎರಡು ಪಂದ್ಯಗಳು ನಿರ್ಣಾಯಕ. ಹೀಗಾಗಿ ಮೆಲ್ಬೋರ್ನ್ ಹಾಗೂ ಸಿಡ್ನಿಯಲ್ಲಿ ನಡೆಯಲಿರುವ 4ನೇ ಮತ್ತು 5ನೇ ಪಂದ್ಯದಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: ಪಾಕಿಸ್ತಾನ್ ಪರ ಕಣಕ್ಕಿಳಿದ ಇಬ್ಬರು ಹಿಂದೂ ಕ್ರಿಕೆಟಿಗರು ಯಾರು ಗೊತ್ತಾ?
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.