IND vs AUS: ಟೀಮ್ ಇಂಡಿಯಾ ಆಲೌಟ್: ಆಸ್ಟ್ರೇಲಿಯಾಗೆ ಆರಂಭಿಕ ಆಘಾತ

Australia vs India, 4th Test: ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 295 ರನ್​​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಗೆಲುವು ದಾಖಲಿಸಿದೆ. ಆದರೆ ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದೀಗ ಮೆಲ್ಬೋರ್ನ್​ನಲ್ಲಿ ಉಭಯ ತಂಡಗಳು 4ನೇ ಟೆಸ್ಟ್ ಪಂದ್ಯವನ್ನಾಡುತ್ತಿದೆ.

IND vs AUS: ಟೀಮ್ ಇಂಡಿಯಾ ಆಲೌಟ್: ಆಸ್ಟ್ರೇಲಿಯಾಗೆ ಆರಂಭಿಕ ಆಘಾತ
Ind Vs Aus
Follow us
ಝಾಹಿರ್ ಯೂಸುಫ್
|

Updated on: Dec 29, 2024 | 5:42 AM

ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 369 ರನ್ ಪೇರಿಸಿ ಟೀಮ್ ಇಂಡಿಯಾ ಆಲೌಟ್ ಆಗಿದೆ. ಮೂರನೇ ದಿನದಾಟದ ಮುಕ್ತಾಯದ ವೇಳೆಗೆ 9 ವಿಕೆಟ್ ಕಳೆದುಕೊಂಡು 358 ರನ್​​ಗಳಿಸಿದ್ದ ಭಾರತ ತಂಡವು ಇಂದು 11 ರನ್​ ಪೇರಿಸುವಷ್ಟರಲ್ಲಿ ನಿತೀಶ್ ಕುಮಾರ್ ರೆಡ್ಡಿ (114) ವಿಕೆಟ್ ಕಳೆದುಕೊಂಡಿತು. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್​ ಆರಂಭಿಸಿದ ಆಸ್ಟ್ರೇಲಿಯಾ ಪರ ಯುವ ದಾಂಡಿಗ ಸ್ಯಾಮ್ ಕೊನ್​ಸ್ಟಾಸ್ (60) ಸ್ಪೋಟಕ ಅರ್ಧಶತಕ ಬಾರಿಸಿದ್ದರು. ಇನ್ನು ಉಸ್ಮಾನ್ ಖ್ವಾಜಾ 57 ರನ್​ ಕಲೆಹಾಕಿದರೆ, ಮಾರ್ನಸ್ ಲಾಬುಶೇನ್ 72 ರನ್ ಬಾರಿಸಿದರು.

ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಟೀವ್ ಸ್ಮಿತ್ 197 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 13 ಫೋರ್​​ಗಳೊಂದಿಗೆ 140 ರನ್ ಬಾರಿಸಿದರು. ಈ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 474 ರನ್​ಗಳಿಸಿ ಆಲೌಟ್ ಆಯಿತು.

ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಶುರು ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 3 ರನ್​ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 24 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಯಶಸ್ವಿ ಜೈಸ್ವಾಲ್ ಶತಕದ ಜೊತೆಯಾಟ ಪ್ರದರ್ಶಿಸಿದರು. ಆದರೆ ತಂಡದ ಮೊತ್ತ 153 ರನ್ ಆಗಿದ್ದ ವೇಳೆ ರನ್​ ಕದಿಯುವ ಯತ್ನದಲ್ಲಿ ಯಶಸ್ವಿ ಜೈಸ್ವಾಲ್ (82) ರನೌಟ್ ಆಗಿ ಹೊರ ನಡೆದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (36) ಸಹ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಆಕಾಶ್ ದೀಪ್ (0) ಶೂನ್ಯಕ್ಕೆ ಔಟಾದರೆ, ರಿಷಭ್ ಪಂತ್ 28 ರನ್​ಗಳಿಸಲಷ್ಟೇ ಶಕ್ತರಾದರು. ಇನ್ನು ರವೀಂದ್ರ ಜಡೇಜಾ 17 ರನ್​ಗಳಿಸಿ ವಿಕೆಟ್ ನಿರ್ಗಮಿಸಿದರು.

ಈ ಹಂತದಲ್ಲಿ 8ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಿತೀಶ್ ಕುಮಾರ್ ರೆಡ್ಡಿ – ವಾಷಿಂಗ್ಟನ್ ಸುಂದರ್ ಶತಕದ ಜೊತೆಯಾಟವಾಡಿದರು. ಸುಂದರ್ 162 ಎಸೆತಗಳಲ್ಲಿ ಎದುರಿಸಿ 50 ರನ್ ಬಾರಿಸಿ ಔಟಾದರೆ, ನಿತೀಶ್ ರೆಡ್ಡಿ ಉತ್ತಮ ಬ್ಯಾಟಿಂಗ್ ಮುಂದುವರೆಸಿದರು. ಅಲ್ಲದೆ 171 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ ಚೊಚ್ಚಲ ಶತಕ ಪೂರೈಸಿದರು.

ಈ ಶತಕದೊಂದಿಗೆ ಟೀಮ್ ಇಂಡಿಯಾದ ಮೊತ್ತವನ್ನು 350 ರ ಗಡಿದಾಟಿಸುವಲ್ಲಿ ನಿತೀಶ್ ಕುಮಾರ್ ರೆಡ್ಡಿ ಯಶಸ್ವಿಯಾದರು. ಇನ್ನು ಶತಕದ ಬಳಿಕ 14 ರನ್ ಪೇರಿಸಿದ ನಿತೀಶ್ ಕುಮಾರ್ ರೆಡ್ಡಿ (114) ಟೀಮ್ ಇಂಡಿಯಾ ಮೊತ್ತವನ್ನು 369 ಕ್ಕೆ ತಲುಪಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡವು 105 ರನ್​ಗಳ ಮುನ್ನಡೆ ಪಡೆದುಕೊಂಡಿದೆ.

ಈ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ತಂಡವು ಸ್ಯಾಮ್ ಕೊನ್​ಸ್ಟಾಸ್ (8) ವಿಕೆಟ್ ಕಳೆದುಕೊಂಡಿದ್ದು, 8 ಓವರ್​ಗಳ ಮುಕ್ತಾಯದ ವೇಳೆಗೆ 21 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಉಸ್ಮಾನ್ ಖ್ವಾಜಾ ಹಾಗೂ ಮಾರ್ನಸ್ ಲಾಬುಶೇನ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ , ಸ್ಯಾಮ್ ಕೊನ್​ಸ್ಟಾಸ್ , ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್ , ಟ್ರಾವಿಸ್ ಹೆಡ್ , ಮಿಚೆಲ್ ಮಾರ್ಷ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಸ್ಕಾಟ್ ಬೋಲ್ಯಾಂಡ್.

ಇದನ್ನೂ ಓದಿ: Virat Kohli: ಕಿರಿಕ್ ಕೊಹ್ಲಿಗೆ ಬಿಸಿ ಮುಟ್ಟಿಸಲು ಮುಂದಾದ ಐಸಿಸಿ

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ರೋಹಿತ್ ಶರ್ಮಾ (ನಾಯಕ) , ವಿರಾಟ್ ಕೊಹ್ಲಿ , ರಿಷಬ್ ಪಂತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ನಿತೀಶ್ ಕುಮಾರ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಜಸ್​ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್.

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ