IND vs AUS: ನಿತೀಶ್ ರೆಡ್ಡಿ ಶತಕ: ಟೀಮ್ ಇಂಡಿಯಾ ದಿಟ್ಟ ಹೋರಾಟ

Australia vs India, 4th Test: ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 295 ರನ್​​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಗೆಲುವು ದಾಖಲಿಸಿದೆ. ಆದರೆ ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದೀಗ ಮೆಲ್ಬೋರ್ನ್​ನಲ್ಲಿ ಉಭಯ ತಂಡಗಳು 4ನೇ ಟೆಸ್ಟ್ ಪಂದ್ಯವನ್ನಾಡುತ್ತಿದೆ.

IND vs AUS: ನಿತೀಶ್ ರೆಡ್ಡಿ ಶತಕ: ಟೀಮ್ ಇಂಡಿಯಾ ದಿಟ್ಟ ಹೋರಾಟ
Nitish Kumar Reddy
Follow us
ಝಾಹಿರ್ ಯೂಸುಫ್
|

Updated on: Dec 28, 2024 | 12:38 PM

ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ 3ನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 9 ವಿಕೆಟ್ ಕಳೆದುಕೊಂಡು 358 ರನ್ ಕಲೆಹಾಕಿದೆ.  ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್​ ಆರಂಭಿಸಿದ ಆಸ್ಟ್ರೇಲಿಯಾ ಪರ ಯುವ ದಾಂಡಿಗ ಸ್ಯಾಮ್ ಕೊನ್​ಸ್ಟಾಸ್ (60) ಸ್ಪೋಟಕ ಅರ್ಧಶತಕ ಬಾರಿಸಿದ್ದರು. ಇನ್ನು ಉಸ್ಮಾನ್ ಖ್ವಾಜಾ 57 ರನ್​ ಕಲೆಹಾಕಿದರೆ, ಮಾರ್ನಸ್ ಲಾಬುಶೇನ್ 72 ರನ್ ಬಾರಿಸಿದರು.

ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಟೀವ್ ಸ್ಮಿತ್ 197 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 13 ಫೋರ್​​ಗಳೊಂದಿಗೆ 140 ರನ್ ಬಾರಿಸಿದರು. ಈ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 474 ರನ್​ಗಳಿಸಿ ಆಲೌಟ್ ಆಯಿತು.

ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಶುರು ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕೇವಲ 3 ರನ್​ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೆಎಲ್ ರಾಹುಲ್ 24 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಯಶಸ್ವಿ ಜೈಸ್ವಾಲ್ ಶತಕದ ಜೊತೆಯಾಟ ಪ್ರದರ್ಶಿಸಿದರು. ಆದರೆ ತಂಡದ ಮೊತ್ತ 153 ರನ್ ಆಗಿದ್ದ ವೇಳೆ ರನ್​ ಕದಿಯುವ ಯತ್ನದಲ್ಲಿ ಯಶಸ್ವಿ ಜೈಸ್ವಾಲ್ (82) ರನೌಟ್ ಆಗಿ ಹೊರ ನಡೆದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (36) ಸಹ ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ಆಕಾಶ್ ದೀಪ್ (0) ಶೂನ್ಯಕ್ಕೆ ಔಟಾದರೆ, ರಿಷಭ್ ಪಂತ್ 28 ರನ್​ಗಳಿಸಲಷ್ಟೇ ಶಕ್ತರಾದರು. ಇನ್ನು ರವೀಂದ್ರ ಜಡೇಜಾ 17 ರನ್​ಗಳಿಸಿ ವಿಕೆಟ್ ನಿರ್ಗಮಿಸಿದರು.

ನಿತೀಶ್ ರೆಡ್ಡಿ ಭರ್ಜರಿ ಶತಕ:

ಈ ಹಂತದಲ್ಲಿ 8ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಿತೀಶ್ ಕುಮಾರ್ ರೆಡ್ಡಿ – ವಾಷಿಂಗ್ಟನ್ ಸುಂದರ್ ಶತಕದ ಜೊತೆಯಾಟವಾಡಿದರು. ಸುಂದರ್ 162 ಎಸೆತಗಳಲ್ಲಿ ಎದುರಿಸಿ 50 ರನ್ ಬಾರಿಸಿ ಔಟಾದರೆ, ನಿತೀಶ್ ರೆಡ್ಡಿ ಉತ್ತಮ ಬ್ಯಾಟಿಂಗ್ ಮುಂದುವರೆಸಿದರು. ಅಲ್ಲದೆ 171 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ ಚೊಚ್ಚಲ ಶತಕ ಪೂರೈಸಿದರು.

ಈ ಶತಕದೊಂದಿಗೆ ಟೀಮ್ ಇಂಡಿಯಾದ ಮೊತ್ತವನ್ನು 350 ರ ಗಡಿದಾಟಿಸುವಲ್ಲಿ ನಿತೀಶ್ ಕುಮಾರ್ ರೆಡ್ಡಿ ಯಶಸ್ವಿಯಾದರು. ಅದರಂತೆ ಮೂರನೇ ದಿನದಾಟದ ಮುಕ್ತಾಯದ ವೇಳೆಗೆ ಭಾರತ ತಂಡವು 9 ವಿಕೆಟ್ ಕಳೆದು 358 ರನ್ ಕಲೆಹಾಕಿದೆ. ಕ್ರೀಸ್​ನಲ್ಲಿ ಮೊಹಮ್ಮದ್ ಸಿರಾಜ್ (2) ಹಾಗೂ ನಿತೀಶ್ ಕುಮಾರ್ ರೆಡ್ಡಿ (105) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ , ಸ್ಯಾಮ್ ಕೊನ್​ಸ್ಟಾಸ್ , ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್ , ಟ್ರಾವಿಸ್ ಹೆಡ್ , ಮಿಚೆಲ್ ಮಾರ್ಷ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಸ್ಕಾಟ್ ಬೋಲ್ಯಾಂಡ್.

ಇದನ್ನೂ ಓದಿ: Virat Kohli: ಕಿರಿಕ್ ಕೊಹ್ಲಿಗೆ ಬಿಸಿ ಮುಟ್ಟಿಸಲು ಮುಂದಾದ ಐಸಿಸಿ

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ರೋಹಿತ್ ಶರ್ಮಾ (ನಾಯಕ) , ವಿರಾಟ್ ಕೊಹ್ಲಿ , ರಿಷಬ್ ಪಂತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ನಿತೀಶ್ ಕುಮಾರ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಜಸ್​ಪ್ರೀತ್ ಬುಮ್ರಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್.

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ