
ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಣ ಐದನೇ ಟಿ20 ಪಂದ್ಯ ಶುರುವಾಗಿದೆ. ಬ್ರಿಸ್ಬೇನ್ನ ದಿ ಗಬ್ಬಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.
ಈ ಪಂದ್ಯವು ಸರಣಿ ಗೆಲ್ಲಲು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಐದು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ ಮಳೆಯಿಂದಾಗಿ ರದ್ದಾಗಿದೆ. ಇನ್ನು ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಹಾಗೆಯೇ ಮೂರನೇ ಮತ್ತು ನಾಲ್ಕನೇ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ.
ಇದೀಗ ಐದನೇ ಪಂದ್ಯದಲ್ಲಿ ಗೆದ್ದರೆ ಭಾರತ ತಂಡವು ಸರಣಿಯನ್ನು ಜಯಿಸಬಹುದು. ಅತ್ತ ಸರಣಿಯನ್ನು ಡ್ರಾನಲ್ಲಿ ಕೊನೆಗೊಳಿಸಬೇಕಿದ್ದರೆ ಆಸ್ಟ್ರೇಲಿಯಾ ತಂಡ ಅಂತಿಮ ಪಂದ್ಯದಲ್ಲಿ ಗೆಲ್ಲಲೇಬೇಕು. ಹೀಗಾಗಿ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಒಂದು ಬದಲಾವಣೆ ಮಾಡಿದೆ. ಕಳೆದ ನಾಲ್ಕು ಮ್ಯಾಚ್ಗಳಲ್ಲಿ ಕಣಕ್ಕಿಳಿದಿದ್ದ ಎಡಗೈ ದಾಂಡಿಗ ತಿಲಕ್ ವರ್ಮಾ ಅವರನ್ನು ತಂಡದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ರಿಂಕು ಸಿಂಗ್ ಅವರನ್ನು ಪ್ಲೇಯಿಂಗ್ ಇಲೆವೆನ್ನಲ್ಲಿ ಸೇರಿಸಿಕೊಳ್ಳಲಾಗಿದೆ.
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಮಿಚೆಲ್ ಮಾರ್ಷ್ (ನಾಯಕ), ಮ್ಯಾಥ್ಯೂ ಶಾರ್ಟ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಟಿಮ್ ಡೇವಿಡ್, ಜೋಶ್ ಫಿಲಿಫೆ, ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಬೆನ್ ದ್ವಾರ್ಶುಯಿಸ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಆ್ಯಡಂ ಝಂಪಾ.
ಇದನ್ನೂ ಓದಿ: RCB ಖರೀದಿಗೆ ಮುಂದಾದ ಕನ್ನಡಿಗರು..!
ಭಾರತ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.