AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಟೀಮ್ ಇಂಡಿಯಾಗೆ ಸೋಲು ಕಟ್ಟಿಟ್ಟ ಬುತ್ತಿ

Australia vs India, 5th Test: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದೆ. ಇನ್ನು ಮೂರನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಹಾಗೆಯೇ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದ್ದು, ಇದೀಗ ಐದನೇ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ಗೆಲ್ಲುವ ವಿಶ್ವಾಸದಲ್ಲಿದೆ ಆಸ್ಟ್ರೇಲಿಯಾ.

IND vs AUS: ಟೀಮ್ ಇಂಡಿಯಾಗೆ ಸೋಲು ಕಟ್ಟಿಟ್ಟ ಬುತ್ತಿ
Ind Vs Aus (4)
ಝಾಹಿರ್ ಯೂಸುಫ್
|

Updated on: Jan 05, 2025 | 8:16 AM

Share

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5ನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 157 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 162 ರನ್​ಗಳ ಗುರಿ ನೀಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತು.

ಪ್ರಥಮ ಇನಿಂಗ್ಸ್​ನಲ್ಲಿ ರಿಷಭ್ ಪಂತ್ ಅವರ 40 ರನ್​ಗಳ ಹಾಗೂ ಜಸ್​ಪ್ರೀತ್ ಬುಮ್ರಾ ಅವರ 22 ರನ್​ಗಳ ಕೊಡುಗೆಯೊಂದಿಗೆ ಭಾರತ ತಂಡವು 185 ರನ್​ಗಳಿಸಿ ಆಲೌಟ್ ಆಗಿತ್ತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ಬ್ಯಾಟರ್​ಗಳ ಟೀಮ್ ಇಂಡಿಯಾ ಬೌಲರ್​ಗಳ ಕರಾರುವಾಕ್ ದಾಳಿ ಮುಂದೆ ರನ್​ಗಳಿಸಲು ಪರದಾಡಿದರು. ಪರಿಣಾಮ ಆಸೀಸ್ ಪಡೆ ತವರು ಮೈದಾನದಲ್ಲಿ ಕೇವಲ 181 ರನ್​​ಗಳಿಗೆ ಆಲೌಟ್ ಆಯಿತು.

ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ತಲಾ 3 ವಿಕೆಟ್ ಪಡೆದರೆ, ನಿತೀಶ್ ಕುಮಾರ್ ರೆಡ್ಡಿ ಹಾಗೂ ಜಸ್​ಪ್ರೀತ್ ಬುಮ್ರಾ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

ದ್ವಿತೀಯ ಇನಿಂಗ್ಸ್​:

ಮೊದಲ ಇನಿಂಗ್ಸ್​ನಲ್ಲಿ 4 ರನ್​ಗಳ ಅಲ್ಪ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ 13 ರನ್​ಗಳಿಸಿ ಔಟಾದರೆ, ಇದರ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್ (22) ಕೂಡ ವಿಕೆಟ್ ಒಪ್ಪಿಸಿದರು.

ಇನ್ನು ಶುಭ್​ಮನ್ ಗಿಲ್ (13) ಹಾಗೂ ವಿರಾಟ್ ಕೊಹ್ಲಿ (6) ಬಂದ ವೇಗದಲ್ಲೇ ಹಿಂತಿರುಗಿದರು. ಪರಿಣಾಮ ಟೀಮ್ ಇಂಡಿಯಾ 78 ರನ್​​ಗಳಿಗೆ 4 ವಿಕೆಟ್ ಕಳೆದುಕೊಂಡಿತು.

ರಿಷಭ್ ಪಂತ್ ಅಬ್ಬರ:

ಈ ಹಂತದಲ್ಲಿ ಕಣಕ್ಕಿಳಿದ ರಿಷಭ್ ಪಂತ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಆಸ್ಟ್ರೇಲಿಯಾ ಬೌಲರ್​​ಗಳನ್ನು ಮನಸೋ ಇಚ್ಛೆ ದಂಡಿಸಿದ ಪಂತ್ ಕೇವಲ 29 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 33 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್​​ಗಳೊಂದಿಗೆ 61 ರನ್ ಸಿಡಿಸಿದರು.

ಆದರೆ ಪಂತ್ ಔಟಾದ ಬೆನ್ನಲ್ಲೇ ನಿತೀಶ್ ಕುಮಾರ್ ರೆಡ್ಡಿ (4) ಸುಲಭ ಕ್ಯಾಚ್ ನೀಡಿ ನಿರಾಸೆ ಮೂಡಿಸಿದರು. ಈ ಹಂತದಲ್ಲಿ ಜೊತೆಗೂಡಿದ ರವೀಂದ್ರ ಜಡೇಜಾ (8) ಹಾಗೂ ವಾಷಿಂಗ್ಟನ್ ಸುಂದರ್ (6) 2ನೇ ದಿನದಾಟದ ಅಂತ್ಯದವರೆಗೆ ಬ್ಯಾಟಿಂಗ್ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು.

ಮೂರನೇ ದಿನದಾಟದಲ್ಲಿ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾ ಕೇವಲ 157 ರನ್​​ಗಳಿಗೆ ಆಲೌಟ್ ಆಗಿದೆ. ಅದರಂತೆ ಇದೀಗ ಆಸ್ಟ್ರೇಲಿಯಾ ತಂಡವು 162 ರನ್​ಗಳ ಗುರಿ ಪಡೆದುಕೊಂಡಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಸ್ಯಾಮ್ ಕೊನ್​ಸ್ಟಾಸ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್ , ಟ್ರಾವಿಸ್ ಹೆಡ್ , ಬ್ಯೂ ವೆಬ್​ಸ್ಟರ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಸ್ಕಾಟ್ ಬೋಲ್ಯಾಂಡ್.

ಇದನ್ನೂ ಓದಿ: IND vs AUS: ಮೈದಾನ ತೊರೆದ ಜಸ್​ಪ್ರೀತ್ ಬುಮ್ರಾ: ವಿರಾಟ್ ಕೊಹ್ಲಿ ಕ್ಯಾಪ್ಟನ್

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ರಿಷಬ್ ಪಂತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ನಿತೀಶ್ ಕುಮಾರ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಜಸ್​ಪ್ರೀತ್ ಬುಮ್ರಾ (ನಾಯಕ) , ಪ್ರಸಿದ್ಧ್ ಕೃಷ್ಣ , ಮೊಹಮ್ಮದ್ ಸಿರಾಜ್.

ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
ಸೂರಜ್‌ಕುಂಡ್ ಜಾತ್ರೆ ದುರಂತ; ಸುನಾಮಿ ಉಯ್ಯಾಲೆ ತುಂಡಾಗಿ ಪೊಲೀಸ್ ಸಾವು
‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ
‘ಕಾವು, ಕಾವು’ ಎಂದವರಿಗೆ ಟಾಂಗ್ ಕೊಟ್ಟ ಗಿಲ್ಲಿ: ವಿಡಿಯೋ
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ಮಲೇಷ್ಯಾದ 800 ಕಲಾವಿದರಿಂದ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯದ ಸ್ವಾಗತ
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ