AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 2nd T20I: ಇಂದು ಭಾರತ-ಆಸ್ಟ್ರೇಲಿಯಾ ದ್ವಿತೀಯ ಟಿ20: ಹೈವೋಲ್ಟೇಜ್ ಕದನಕ್ಕೆ ಮೆಲ್ಬೋರ್ನ್ ಸಜ್ಜು

Australia vs India Second T20i: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಅಕ್ಟೋಬರ್ 31 ರಂದು ಅಂದರೆ ಇಂದು ಮೆಲ್ಬೋರ್ನ್ ಮೈದಾನದಲ್ಲಿ ನಡೆಯಲಿದೆ. ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾದ ಕಾರಣ ಇಂದಿನ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದೆ.

IND vs AUS 2nd T20I: ಇಂದು ಭಾರತ-ಆಸ್ಟ್ರೇಲಿಯಾ ದ್ವಿತೀಯ ಟಿ20: ಹೈವೋಲ್ಟೇಜ್ ಕದನಕ್ಕೆ ಮೆಲ್ಬೋರ್ನ್ ಸಜ್ಜು
Ind Vs Aus 2nd T20i
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 31, 2025 | 7:32 AM

Share

ಬೆಂಗಳೂರು (ಅ. 31): ಭಾರತ (Indian Cricket Team) ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಕ್ಯಾನ್‌ಬೆರಾದ ಮನುಕಾ ಓವಲ್‌ನಲ್ಲಿ ನಡೆದಿದ್ದು, ಮಳೆಯಿಂದಾಗಿ ರದ್ದಾಯಿತು. ಈ ಪಂದ್ಯದಲ್ಲಿ, ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಆದರೆ, ಭಾರತೀಯ ಇನ್ನಿಂಗ್ಸ್‌ನ 9.4 ಓವರ್‌ಗಳನ್ನು ಮಾತ್ರ ಆಡಲು ಸಾಧ್ಯವಾಯಿತು, ಈ ಸಂದರ್ಭ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು. ಈಗ ಉಭಯ ತಂಡಗಳ ನಡುವಿನ ಈ ಸರಣಿಯ ಎರಡನೇ ಟಿ20 ಪಂದ್ಯವು ಐತಿಹಾಸಿಕ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆಯಲಿದೆ. ಏಕದಿನ ಸರಣಿ ಕಳೆದುಕೊಂಡಿರುವ ಟೀಮ್ ಇಂಡಿಯಾ ಟಿ20 ಸರಣಿ ಮೇಲೆ ಕಣ್ಣಿಟ್ಟಿದ್ದು, ಇಂದಿನ ಪಂದ್ಯ ಗೆಲ್ಲುವ ಇರಾದೆಯಲ್ಲಿದೆ.

ಇಂದಿನ ಎರಡನೇ ಟಿ20 ಪಂದ್ಯವು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 1:45 ಕ್ಕೆ ಪ್ರಾರಂಭವಾಗುತ್ತದೆ. ಟಾಸ್ ಅರ್ಧ ಗಂಟೆ ಮುಂಚಿತವಾಗಿ, ಮಧ್ಯಾಹ್ನ 1:15 ಕ್ಕೆ ನಡೆಯಲಿದೆ. ಮೊದಲ ಪಂದ್ಯ ರದ್ದಾದ ಕಾರಣ ಸದ್ಯ ನಾಲ್ಕು ಪಂದ್ಯಗಳು ಮಾತ್ರ ಉಳಿದಿವೆ. ಇಂದಿನ ಪಂದ್ಯವನ್ನು ಯಾವ ತಂಡ ಗೆದ್ದರೂ ಸರಣಿ ಗೆಲ್ಲುವ ಸಾಧ್ಯತೆ ಗಮನಾರ್ಹವಾಗಿ ಹೆಚ್ಚಿರುತ್ತದೆ. ಆದ್ದರಿಂದ, ಎರಡೂ ತಂಡಗಳು ಇಂದಿನ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವ ಗುರಿ ಹೊಂದಿದೆ.

ಮೆಲ್ಬೋರ್ನ್ ಕ್ರಿಕೆಟ್ ಮೈದಾನವನ್ನು ವಿಶ್ವ ಕ್ರಿಕೆಟ್‌ನ ಅತ್ಯಂತ ಐತಿಹಾಸಿಕ ಮೈದಾನಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ವಿಸ್ತಾರವಾದ ಬೌಂಡರಿಗಳಿಂದಾಗಿ, ಆಟಗಾರರು ದೊಡ್ಡ ಹೊಡೆತಗಳನ್ನು ಹೊಡೆಯುವುದು ಸುಲಭವಲ್ಲ. ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ 20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಹೆಡ್-ಟು-ಹೆಡ್ ದಾಖಲೆಗೆ ಸಂಬಂಧಿಸಿದಂತೆ, ಇದುವರೆಗೆ ಎರಡೂ ತಂಡಗಳ ನಡುವೆ ನಾಲ್ಕು ಪಂದ್ಯಗಳು ನಡೆದಿವೆ. ಭಾರತ ಎರಡು ಪಂದ್ಯಗಳನ್ನು ಗೆದ್ದಿದ್ದರೆ, ಆತಿಥೇಯ ಆಸ್ಟ್ರೇಲಿಯಾ ಕೇವಲ ಒಂದು ಪಂದ್ಯವನ್ನು ಗೆದ್ದಿದೆ, ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.

ಇದನ್ನೂ ಓದಿ
Image
ನವೆಂಬರ್ 2 ರಂದು ಭಾರತ- ಆಫ್ರಿಕಾ ನಡುವೆ ಫೈನಲ್ ಫೈಟ್
Image
ಜೆಮಿಮಾ, ಹರ್ಮನ್​ ಆಟಕ್ಕೆ ತಲೆಬಾಗಿದ ಆಸ್ಟ್ರೇಲಿಯಾ
Image
ವಿಶ್ವಕಪ್​ನಲ್ಲಿ ಚೊಚ್ಚಲ ಶತಕ ಬಾರಿಸಿದ ಜೆಮಿಮಾ ರೊಡ್ರಿಗಸ್
Image
ವಿಶ್ವಕಪ್ ಪಂದ್ಯಾವಳಿಯಲ್ಲಿ 18 ಕ್ಯಾಚ್‌ ಬಿಟ್ಟ ಟೀಂ ಇಂಡಿಯಾ

World Cup 2025: ಆಸ್ಟ್ರೇಲಿಯಾದ 8 ವರ್ಷಗಳ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಭಾರತ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ 20 ಪಂದ್ಯವನ್ನು 2008 ರಲ್ಲಿ ಮೆಲ್ಬೋರ್ನ್ ಮೈದಾನದಲ್ಲಿ ನಡೆಸಲಾಯಿತು, ಇದರಲ್ಲಿ ಆಸ್ಟ್ರೇಲಿಯಾ ತಂಡ ಎಂಟು ವಿಕೆಟ್‌ಗಳಿಂದ ಗೆದ್ದಿತು. ತರುವಾಯ, ಭಾರತ ತಂಡವು 2012 ಮತ್ತು 2016 ರಲ್ಲಿ ಆಡಿದ ಟಿ 20 ಪಂದ್ಯಗಳನ್ನು ಗೆದ್ದಿತು, ಆದರೆ 2018 ರ ಪಂದ್ಯವನ್ನು ಮಳೆಯಿಂದಾಗಿ ರದ್ದುಗೊಳಿಸಲಾಯಿತು.

ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಭಾರತ ತಂಡವು ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅತ್ಯುತ್ತಮ ದಾಖಲೆಯನ್ನು ಹೊಂದಿದೆ. ಅವರು ಆತಿಥೇಯರ ವಿರುದ್ಧ ನಾಲ್ಕು ಪಂದ್ಯಗಳನ್ನು ಹಾಗೂ ಜಿಂಬಾಬ್ವೆ ಮತ್ತು ಪಾಕಿಸ್ತಾನ ವಿರುದ್ಧದ ಪಂದ್ಯಗಳನ್ನು ಆಡಿದ್ದಾರೆ. ಈ ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದಿದೆ. ಇಲ್ಲಿ ಆಡಿದ ಆರು ಪಂದ್ಯಗಳಲ್ಲಿ, ಭಾರತ ತಂಡವು ನಾಲ್ಕರಲ್ಲಿ ಗೆದ್ದಿದೆ, ಕೇವಲ ಒಂದರಲ್ಲಿ ಮಾತ್ರ ಸೋತಿದೆ. ಏತನ್ಮಧ್ಯೆ, ಆಸ್ಟ್ರೇಲಿಯಾ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ 15 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಒಂಬತ್ತು ಗೆಲುವು ಮತ್ತು ಐದು ಸೋಲು ಕಂಡಿದೆ.

ಇಂದಿನ ಪಂದ್ಯಕ್ಕೆ ಉಭಯ ತಂಡಗಳಲ್ಲಿ ಬದಲಾವಣೆ ಅನುಮಾನ. ಹಿಂದಿನ ಪಂದ್ಯದಲ್ಲಿ ಆಡಿದ ಆಟಗಾರರೇ ಇಂದು ಕೂಡ ಕಣಕ್ಕಿಳಿಯಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಲಾಭ
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಲಾಭ
ಅವಮಾನಿಸಿದ ಕೋಚ್ ಮುಂದೆ ಅಬ್ಬರಿಸಿದ ಹರ್ಲೀನ್ ಡಿಯೋಲ್
ಅವಮಾನಿಸಿದ ಕೋಚ್ ಮುಂದೆ ಅಬ್ಬರಿಸಿದ ಹರ್ಲೀನ್ ಡಿಯೋಲ್
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ