
ಬೆಂಗಳೂರು (ಅ. 24): ಆಸ್ಟ್ರೇಲಿಯಾದಲ್ಲಿ ಭಾರತೀಯ ಕ್ರಿಕೆಟ್ ತಂಡದ (Indian Cricket Team) ಕೆಟ್ಟ ಕಾಲ ಮುಗಿಯುವಂತೆ ಕಾಣುತ್ತಿಲ್ಲ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ ನಂತರ, ತಂಡವು ಏಕದಿನ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ಮುಂದುವರಿಸುವ ಭರವಸೆಯಲ್ಲಿತ್ತು, ಆದರೆ ಆಸ್ಟ್ರೇಲಿಯಾ ಮೂರು ಪಂದ್ಯಗಳ ಸರಣಿಯ ಮೊದಲ ಎರಡು ಏಕದಿನ ಪಂದ್ಯಗಳನ್ನು ಗೆಲ್ಲುವ ಮೂಲಕ ಈ ಭರವಸೆಯನ್ನು ಹುಸಿಗೊಳಿಸಿದೆ. ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತವನ್ನು 2 ವಿಕೆಟ್‌ಗಳಿಂದ ಸೋಲಿಸಿ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಇದೀಗ ಉಳಿದಿರುವ ಕೊನೆಯ ಪಂದ್ಯವನ್ನಾದರೂ ಗೆದ್ದು ಮಾನ ಉಳಿಸುವ ಪ್ಲ್ಯಾನ್ನಲ್ಲಿ ಗಿಲ್ ಪಡೆ ಇದೆ. ಹಾಗಾದರೆ, ಭಾರತ-ಆಸ್ಟ್ರೇಲಿಯಾ ತೃತೀಯ ಏಕದಿನ ಯಾವಾಗ?, ಎಲ್ಲಿ?, ಈ ಕುರಿತ ಮಾಹಿತಿ ಇಲ್ಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಎರಡನೇ ಮತ್ತು ಮೂರನೇ ಪಂದ್ಯಗಳ ನಡುವೆ ಕೇವಲ ಒಂದು ದಿನಗಳ ಅಂತರವಿದೆಯಷ್ಟೆ.
ಭಾರತ vs ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯ ಶನಿವಾರ (ಅಕ್ಟೋಬರ್ 24) ನಡೆಯಲಿದೆ.
ಭಾರತ vs ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯ ಸಿಡ್ನಿಯ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
IND vs AUS 2nd ODI: ಟೀಮ್ ಇಂಡಿಯಾ ಸೋಲಿಗೆ ಕಾರಣ ವಿವರಿಸಿದ ಗಿಲ್: ಏನು ಹೇಳಿದ್ರು?
ಭಾರತ vs ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯವು ಸ್ಥಳೀಯ ಸಮಯ ಮಧ್ಯಾಹ್ನ 2:00 ಗಂಟೆಗೆ ಪ್ರಾರಂಭವಾಗುತ್ತದೆ. ಆದಾಗ್ಯೂ, ಭಾರತದಲ್ಲಿ ಪಂದ್ಯವು ಬೆಳಿಗ್ಗೆ 9:00 ಗಂಟೆಗೆ ಪ್ರಾರಂಭವಾಗುತ್ತದೆ.
ಭಾರತ vs ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯದ ನೇರ ಪ್ರಸಾರ ಜಿಯೋಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.
ಭಾರತ vs ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಲಭ್ಯವಿರುತ್ತದೆ.
ಮೊದಲ ಎರಡು ಪಂದ್ಯಗಳಲ್ಲಿ ಎರಡು ಸೋಲುಗಳನ್ನು ಕಂಡ ನಂತರ, ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಡುವ XI ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಬಹುದು. ಬ್ಯಾಟಿಂಗ್ ಕಳಪೆಯಾಗಿದ್ದು, ಬೌಲರ್‌ಗಳು ಹೆಚ್ಚಿನ ಪರಿಣಾಮ ಬೀರದ ಕಾರಣ ಭಾರತ ಸರಣಿಯಲ್ಲಿ ಕಳಪೆಯಾಗಿ ಕಾಣುತ್ತಿದೆ. ವೈಟ್‌ವಾಶ್ ತಪ್ಪಿಸಲು ಭಾರತ ಎರಡೂ ವಿಭಾಗಗಳಲ್ಲಿ ಬದಲಾವಣೆ ಮಾಡಬಹುದು. ಕೆಎಲ್ ರಾಹುಲ್ಗೆ ವಿಶ್ರಾಂತಿ ನೀಡಿ ಯಶಸ್ವಿ ಜೈಸ್ವಾಲ್ ಅವರನ್ನು ಆಡಿಸಬಹುದು ಬಹುತೇಕ ಖಚಿತ. ಉಳಿದಂತೆ ತಂಡದಲ್ಲಿ ಏನೆಲ್ಲ ಬದಲಾವಣೆ ಆಗಬಹುದು ಎಂಬುದು ನೋಡಬೇಕಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ