
ಬೆಂಗಳೂರು (ನ. 01): ಆಸ್ಟ್ರೇಲಿಯಾದಲ್ಲಿ ಭಾರತೀಯ ಕ್ರಿಕೆಟ್ ತಂಡದ (Indian Cricket Team) ಕೆಟ್ಟ ಕಾಲ ಮುಗಿಯುವಂತೆ ಕಾಣುತ್ತಿಲ್ಲ. ಏಕದಿನ ಸರಣಿಯಲ್ಲಿನ ಹೀನಾಯ ಸೋಲಿನ ನಂತರ ಇದೀಗ ಟಿ20 ಸರಣಿಯಲ್ಲೂ ಕಳಪೆ ಪ್ರದರ್ಶನ ಮುಂದುವರೆಸಿದೆ. ಮೊದಲ ಟಿ20 ಮಳೆಯಿಂದ ರದ್ದಾದರೆ ಎರಡನೇ ಟಿ0 ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತವನ್ನು ಸೋಲಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಟೀಮ್ ಇಂಡಿಯಾ ಸರಣಿ ಗೆಲ್ಲಬೇಕಾದರೆ ಉಳಿದಿರುವ ಎಲ್ಲ ಪಂದ್ಯವನ್ನು ಗೆಲ್ಲಬೇಕಿದೆ. ಹಾಗಾದರೆ, ಭಾರತ-ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯ ಯಾವಾಗ?, ಎಲ್ಲಿ?, ಈ ಕುರಿತ ಮಾಹಿತಿ ಇಲ್ಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಎರಡನೇ ಮತ್ತು ಮೂರನೇ ಪಂದ್ಯಗಳ ನಡುವೆ ಕೇವಲ ಒಂದು ದಿನಗಳ ಅಂತರವಿದೆಯಷ್ಟೆ.
ಭಾರತ vs ಆಸ್ಟ್ರೇಲಿಯಾ ಮೂರನೇ ಟಿ20 ಪಂದ್ಯ ಭಾನುವಾರ (ನವೆಂಬರ್ 02) ನಡೆಯಲಿದೆ.
ಭಾರತ vs ಆಸ್ಟ್ರೇಲಿಯಾ ಮೂರನೇ ಟಿ20 ಪಂದ್ಯ ಹಾಬರ್ಟ್ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯಲಿದೆ.
ಭಾರತ vs ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯವು ಸ್ಥಳೀಯ ಸಮಯ ಸಂಜೆ 7:15ಕ್ಕೆ ಪ್ರಾರಂಭವಾಗುತ್ತದೆ. ಆದಾಗ್ಯೂ, ಭಾರತದಲ್ಲಿ ಪಂದ್ಯವು ಮಧ್ಯಾಹ್ನ 7:15 ಕ್ಕೆ ಪ್ರಾರಂಭವಾಗುತ್ತದೆ.
ಟೀಮ್ ಇಂಡಿಯಾ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದಿದ್ದೇಕೆ?
ಭಾರತ vs ಆಸ್ಟ್ರೇಲಿಯಾ ಮೂರನೇ ಟಿ20 ಪಂದ್ಯದ ನೇರ ಪ್ರಸಾರ ಜಿಯೋಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.
ಭಾರತ vs ಆಸ್ಟ್ರೇಲಿಯಾ ಮೂರನೇ ಟಿ20 ಪಂದ್ಯದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಲಭ್ಯವಿರುತ್ತದೆ.
ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ, ಕಾಂಗರೂ ತಂಡ ಸರಣಿಯಲ್ಲಿ 1-0 ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು. ಈ ಸೋಲಿನೊಂದಿಗೆ, ಟೀಮ್ ಇಂಡಿಯಾದ ಸತತ 10 ಟಿ20ಐ ಪಂದ್ಯಗಳ ಗೆಲುವಿನ ಸರಣಿಗೆ ಬ್ರೇಕ್ ಬಿದ್ದಿತು. ಇದಕ್ಕೂ ಮೊದಲು, ಟೀಮ್ ಇಂಡಿಯಾ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಸತತ 10 ಪಂದ್ಯಗಳನ್ನು ಗೆದ್ದಿತ್ತು ಆದರೆ 11 ನೇ ಪಂದ್ಯದಲ್ಲಿ ಸೋಲನ್ನು ಎದುರಿಸಬೇಕಾಯಿತು. ಜೋಶ್ ಹ್ಯಾಜಲ್‌ವುಡ್ ಆಸ್ಟ್ರೇಲಿಯಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು, ಅವರು ತಮ್ಮ ನಾಲ್ಕು ಓವರ್‌ಗಳ ಅವಧಿಯಲ್ಲಿ 13 ರನ್‌ಗಳಿಗೆ 3 ವಿಕೆಟ್‌ಗಳನ್ನು ಪಡೆದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:18 am, Sat, 1 November 25