ವಿಶ್ವಕಪ್​ನಲ್ಲಿ ನಾಳೆ ಡಬಲ್ ಹೆಡರ್ ದಿನ; ಯಾವ 4 ತಂಡಗಳು ಎಷ್ಟು ಗಂಟೆಗೆ ಎಲ್ಲಿ ಅಖಾಡಕ್ಕಿಳಿಯಲ್ಲಿವೆ? ಇಲ್ಲಿದೆ ಪೂರ್ಣ ವಿವರ

ICC World Cup 2023: ವಿಶ್ವಕಪ್​ನಲ್ಲಿ ನಾಳೆ ಅಂದರೆ ಅಕ್ಟೋಬರ್ 28 ರ ಶನಿವಾರದಂದು ಡಬಲ್ ಹೆಡರ್ ಇದೆ. ಅಂದರೆ ಒಂದೇ ದಿನ ಎರಡು ಪಂದ್ಯಗಳು ನಡೆಯಲ್ಲಿವೆ. ದಿನದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯ, ನ್ಯೂಜಿಲೆಂಡ್ ತಂಡದ ವಿರುದ್ಧ ಕಣಕ್ಕಿಳಿದರೆ, ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ನೆದರ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ .

ವಿಶ್ವಕಪ್​ನಲ್ಲಿ ನಾಳೆ ಡಬಲ್ ಹೆಡರ್ ದಿನ; ಯಾವ 4 ತಂಡಗಳು ಎಷ್ಟು ಗಂಟೆಗೆ ಎಲ್ಲಿ ಅಖಾಡಕ್ಕಿಳಿಯಲ್ಲಿವೆ? ಇಲ್ಲಿದೆ ಪೂರ್ಣ ವಿವರ
ಏಕದಿನ ವಿಶ್ವಕಪ್
Follow us
ಪೃಥ್ವಿಶಂಕರ
|

Updated on: Oct 27, 2023 | 9:40 PM

ವಿಶ್ವಕಪ್​ನಲ್ಲಿ (ICC World Cup 2023) ನಾಳೆ ಅಂದರೆ ಅಕ್ಟೋಬರ್ 28 ರ ಶನಿವಾರದಂದು ಡಬಲ್ ಹೆಡರ್ ಇದೆ. ಅಂದರೆ ಒಂದೇ ದಿನ ಎರಡು ಪಂದ್ಯಗಳು ನಡೆಯಲ್ಲಿವೆ. ದಿನದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯ, ನ್ಯೂಜಿಲೆಂಡ್ (Australia vs New Zealand) ತಂಡದ ವಿರುದ್ಧ ಕಣಕ್ಕಿಳಿದರೆ, ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ನೆದರ್ಲೆಂಡ್ (Bangladesh vs Netherlands) ತಂಡಗಳು ಮುಖಾಮುಖಿಯಾಗಲಿವೆ . ಕಿವೀಸ್ ಎಂಟು ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ಮತ್ತೊಂದೆಡೆ, ಆಸ್ಟ್ರೇಲಿಯಾ 6 ಅಂಕಗಳೊಂದಿಗೆ ನ್ಯೂಜಿಲೆಂಡ್ ನಂತರದ ಸ್ಥಾನದಲ್ಲಿದೆ.

ಮತ್ತೊಂದೆಡೆ, ವಿಶ್ವಕಪ್‌ನಲ್ಲಿ ತುಲನಾತ್ಮಕವಾಗಿ ದುರ್ಬಲವಾಗಿರುವ ಎರಡು ತಂಡಗಳಾದ ಬಾಂಗ್ಲಾದೇಶ ಮತ್ತು ನೆದರ್‌ಲ್ಯಾಂಡ್‌ ಒಂದೇ ಪರಿಸ್ಥಿತಿಯಲ್ಲಿವೆ. ಉಭಯ ತಂಡಗಳು ಇದುವರೆಗೆ ಐದು ಪಂದ್ಯಗಳನ್ನು ಆಡಿದ್ದು, ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆಲುವು ಕಂಡಿವೆ. ಹೀಗಾಗಿ ಎರಡು ತಂಡಗಳಿಗೂ ಈ ಪಂದ್ಯದ ಗೆಲುವು ಅತ್ಯವಶ್ಯಕವಾಗಿದೆ. ಇನ್ನು ಈ ಡಬಲ್ ಹೆಡರ್ ದಿನದಂದು ಯಾವ ಪಂದ್ಯ ಎಷ್ಟು ಗಂಟೆಗೆ ನಡೆಯಲ್ಲಿದೆ ಎಂಬುದರ ಪೂರ್ಣ ವಿವರ ಇಲ್ಲಿದೆ.

ಪಂದ್ಯಗಳ ಬಗ್ಗೆ ಪೂರ್ಣ ವಿವರ ಇಲ್ಲಿದೆ

ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ-ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ ಪಂದ್ಯಗಳು ಯಾವಾಗ ನಡೆಯುತ್ತವೆ?

ಅಕ್ಟೋಬರ್ 28 ರ ಶನಿವಾರದಂದು ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ-ನೆದರ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯಗಳು ನಡೆಯಲಿವೆ.

ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ-ನೆದರ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯಗಳು ಯಾವಾಗ ಪ್ರಾರಂಭವಾಗುತ್ತವೆ?

ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯ ಬೆಳಗ್ಗೆ 10.30ಕ್ಕೆ ಆರಂಭವಾಗಲಿದೆ. ಮತ್ತೊಂದೆಡೆ, ಬಾಂಗ್ಲಾದೇಶ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಪಂದ್ಯ ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗಲಿದೆ.

ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ-ನೆದರ್ಲೆಂಡ್ಸ್ ನಡುವಿನ ವಿಶ್ವಕಪ್ ಪಂದ್ಯದ ಟಾಸ್ ಯಾವಾಗ?

ಆಸ್ಟ್ರೇಲಿಯ-ನ್ಯೂಜಿಲೆಂಡ್ ಪಂದ್ಯ ಬೆಳಗ್ಗೆ 9.30ಕ್ಕೆ ಟಾಸ್ ಆಗಲಿದೆ. ಹಾಗೂ ಬಾಂಗ್ಲಾದೇಶ-ನೆದರ್ಲೆಂಡ್ ಪಂದ್ಯ ಮಧ್ಯಾಹ್ನ 1.30ಕ್ಕೆ ಟಾಸ್ ಆಗಲಿದೆ.

ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ-ನೆದರ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯಗಳು ಎಲ್ಲಿ ನಡೆಯುತ್ತವೆ?

ಹಿಮಾಚಲದ ಧರ್ಮಶಾಲಾ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಪಂದ್ಯ ನಡೆಯಲಿದೆ. ಮತ್ತೊಂದೆಡೆ, ಬಾಂಗ್ಲಾದೇಶ-ನೆದರ್ಲೆಂಡ್ ನಡುವಿನ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.

ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ-ನೆದರ್‌ಲ್ಯಾಂಡ್ ಪಂದ್ಯಗಳನ್ನು ಎಲ್ಲಿ ವೀಕ್ಷಿಸಬೇಕು?

ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ-ನೆದರ್‌ಲ್ಯಾಂಡ್ ಪಂದ್ಯಗಳನ್ನು ವೀಕ್ಷಿಸಬಹುದು. ಇದರ ಹೊರತಾಗಿ, ನೀವು ಈ ಪಂದ್ಯಗಳ ನೇರ ಪ್ರಸಾರವನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ