AUS vs PAK: ಸೋಲೇ ಸೋಲು: 27 ವರ್ಷಗಳಿಂದ ಗೆಲ್ಲದ ಪಾಕಿಸ್ತಾನ್

Australia vs Pakistan: ನಾಲ್ಕನೇ ದಿನದಾಟದಲ್ಲಿ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಪಾಕಿಸ್ತಾನ್ ತಂಡ ಬ್ಯಾಟರ್​ಗಳು ಪ್ಯಾಟ್ ಕಮಿನ್ಸ್ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲೇ ಇಲ್ಲ. ಅಲ್ಲದೆ ಕೇವಲ 237 ರನ್​ಗಳಿಗೆ ಆಲೌಟ್ ಆಗುವ ಮೂಲಕ 79 ರನ್​ಗಳಿಂದ ಸೋಲೊಪ್ಪಿಕೊಂಡಿತು.

AUS vs PAK: ಸೋಲೇ ಸೋಲು: 27 ವರ್ಷಗಳಿಂದ ಗೆಲ್ಲದ ಪಾಕಿಸ್ತಾನ್
Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 30, 2023 | 7:08 AM

ಮೆಲ್ಬೋರ್ನ್​ನಲ್ಲಿ ನಡೆದ ಪಾಕಿಸ್ತಾನ್ (Pakistan) ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಜಯಭೇರಿ ಬಾರಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಆಸೀಸ್ ಪಡೆ 2-0 ಅಂತರದಿಂದ ವಶಪಡಿಸಿಕೊಂಡಂತಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 318 ರನ್​ ಕಲೆಹಾಕಿತು.

ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಪಾಕಿಸ್ತಾನ್ ತಂಡವು ಪ್ಯಾಟ್ ಕಮಿನ್ಸ್ ದಾಳಿಗೆ ತತ್ತರಿಸಿತು. ಕೇವಲ 48 ರನ್​ ನೀಡಿ 5 ವಿಕೆಟ್ ಕಬಳಿಸುವ ಮೂಲಕ ಕಮಿನ್ಸ್ ಪಾಕ್ ಪಡೆಯನ್ನು ಮೊದಲ ಇನಿಂಗ್ಸ್​ನಲ್ಲಿ 264 ರನ್​ಗಳಿಗೆ ಆಲೌಟ್ ಮಾಡಿದರು.

54 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ ಆಡಿದ ಆಸ್ಟ್ರೇಲಿಯಾ ತಂಡವು ಕೇವಲ 262 ರನ್​ಗಳಿಸಿ ಸರ್ವಪತನ ಕಂಡಿತು. ಅತ್ತ ದ್ವಿತೀಯ ಇನಿಂಗ್ಸ್​ನಲ್ಲಿ ಪಾಕಿಸ್ತಾನ್ ತಂಡದ ಮುಂದಿದದ್ದು ಕೇವಲ 315 ರನ್​ಗಳ ಗುರಿ.

ಅದರಂತೆ ನಾಲ್ಕನೇ ದಿನದಾಟದಲ್ಲಿ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಪಾಕಿಸ್ತಾನ್ ತಂಡ ಬ್ಯಾಟರ್​ಗಳು ಪ್ಯಾಟ್ ಕಮಿನ್ಸ್ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಸಾಧ್ಯವಾಗಲೇ ಇಲ್ಲ. ಅಲ್ಲದೆ ಕೇವಲ 237 ರನ್​ಗಳಿಗೆ ಆಲೌಟ್ ಆಗುವ ಮೂಲಕ 79 ರನ್​ಗಳಿಂದ ಸೋಲೊಪ್ಪಿಕೊಂಡಿತು. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಸೋಲು ಸೋಲೇ ಸೋಲು:

ಪಾಕಿಸ್ತಾನ್ ತಂಡವು ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆದ್ದು ಬರೋಬ್ಬರಿ 27 ವರ್ಷಗಳೇ ಕಳೆದಿವೆ. ಅಂದರೆ 1995-96 ರಲ್ಲಿ ವಾಸಿಂ ಅಕ್ರಮ್ ನೇತೃತ್ವದಲ್ಲಿ ಪಾಕ್ ಪಡೆ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಜಯಿಸಿತ್ತು. ಇದಾದ ಬಳಿಕ ಒಮ್ಮೆಯೂ ಸರಣಿ ಗೆದ್ದಿಲ್ಲ ಎಂಬುದು ವಿಶೇಷ.

ಅದರಲ್ಲೂ ಆಸ್ಟ್ರೇಲಿಯಾದಲ್ಲಿ ಆಡಿದ ಕೊನೆಯ 16 ಟೆಸ್ಟ್ ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡವು ಸತತ ಸೋಲನುಭವಿಸಿದೆ. ಅಂದರೆ ಗೆಲುವು ಇರಲಿ, ಒಂದೇ ಒಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ಕೂಡ ಸಾಧ್ಯವಾಗಿಲ್ಲ. ಇದೀಗ 3 ಪಂದ್ಯಗಳ ಸರಣಿಯ 2 ಮ್ಯಾಚ್​ಗಳಲ್ಲಿ ಪಾಕ್ ಪಡೆ ಸೋಲನುಭವಿಸಿದೆ. ಇನ್ನು ಮೂರನೇ ಪಂದ್ಯವು ಸಿಡ್ನಿಯಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆಸ್ಟ್ರೇಲಿಯಾ ತಂಡವು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಇರಾದೆಯಲ್ಲಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್ , ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್ , ಜೋಶ್ ಹ್ಯಾಝಲ್​ವುಡ್.

ಇದನ್ನೂ ಓದಿ: IPL 2024: ಹಾರ್ದಿಕ್ ಪಾಂಡ್ಯಗಾಗಿ 100 ಕೋಟಿ ರೂ. ನೀಡಿದ ಮುಂಬೈ ಇಂಡಿಯನ್ಸ್..!

ಪಾಕಿಸ್ತಾನ್ ಪ್ಲೇಯಿಂಗ್ 11: ಇಮಾಮ್-ಉಲ್-ಹಕ್ , ಅಬ್ದುಲ್ಲಾ ಶಫೀಕ್, ಶಾನ್ ಮಸೂದ್ (ನಾಯಕ), ಬಾಬರ್ ಆಝಂ , ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸಲ್ಮಾನ್ ಅಲಿ ಅಘಾ, ಶಾಹೀನ್ ಅಫ್ರಿದಿ, ಹಸನ್ ಅಲಿ , ಮೀರ್ ಹಂಝ, ಅಮೀರ್ ಜಮಾಲ್, ಸಾಜಿದ್ ಖಾನ್.

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ