ಏಕದಿನ ವಿಶ್ವಕಪ್ನಲ್ಲಿ (ICC World Cup 2023) ಇಂದು ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ (Australia vs Pakistan) ನಡುವಿನ ಹೈವೋಲ್ಟೇಜ್ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈಗಾಗಲೇ ಪಂದ್ಯದ ಟಾಸ್ ನಡೆದಿದ್ದು, ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಬಾಬರ್ ಆಝಂ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.ಈ ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ಇದುವರೆಗೆ ಮೂರು ಪಂದ್ಯಗಳನ್ನು ಆಡಿದ್ದು, ಇದರಲ್ಲಿ 2 ಪಂದ್ಯಗಳಲ್ಲಿ ಸೋತಿದ್ದರೆ, ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಇತ್ತ ಪಾಕಿಸ್ತಾನ ಮೂರು ಪಂದ್ಯಗಳನ್ನು ಆಡಿದ್ದು, ಎರಡರಲ್ಲಿ ಗೆದ್ದು, ಒಂದು ಪಂದ್ಯದಲ್ಲಿ ಸೋತಿದೆ. ಇಂತಹ ಪರಿಸ್ಥಿತಿಯಲ್ಲಿ
ಸೆಮಿಫೈನಲ್ಗೇರಲು ಉಭಯ ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ.
ಪಾಕಿಸ್ತಾನ ತಂಡ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಉಸಾಮಾ ಮಿರ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ , ಹಾರಿಸ್ ರೌಫ್.
🚨 PLAYING XI & TOSS 🚨
Pakistan have won the toss and decided to field first 🏏
One change to our line-up today 👇#AUSvPAK | #DattKePakistani | #WeHaveWeWill pic.twitter.com/LEHXp3ouLy
— Pakistan Cricket (@TheRealPCB) October 20, 2023
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:54 pm, Fri, 20 October 23