AUS vs SA: 276 ರನ್‌ಗಳಿಂದ ಗೆದ್ದ ಆಸ್ಟ್ರೇಲಿಯಾ; ದಕ್ಷಿಣ ಆಫ್ರಿಕಾ ಪಾಲಾದ ಏಕದಿನ ಸರಣಿ
AUS vs SA: ಆಸ್ಟ್ರೇಲಿಯಾ ಭಾನುವಾರ ಮೆಲ್ಬೋರ್ನ್‌ನಲ್ಲಿ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 276 ರನ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 431 ರನ್ ಗಳಿಸಿತು. ದಕ್ಷಿಣ ಆಫ್ರಿಕಾ 155 ರನ್‌ಗಳಿಗೆ ಆಲೌಟ್ ಆಯಿತು. ಆದರೂ, ದಕ್ಷಿಣ ಆಫ್ರಿಕಾ 2-1 ಅಂತರದಿಂದ ಸರಣಿಯನ್ನು ಗೆದ್ದುಕೊಂಡಿತು. ಇದಕ್ಕೂ ಮೊದಲು, ಆಸ್ಟ್ರೇಲಿಯಾ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದಿತ್ತು.

ಕೊನೆಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾವನ್ನು (Australia vs South Africa) 276 ರನ್‌ಗಳಿಂದ ಸೋಲಿಸಿ ವೈಟ್ ವಾಶ್ ಮುಖಭಂಗದಿಂದ ಪಾರಾಗಿದೆ. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯ ಭಾನುವಾರ ಮೆಕೆಯಲ್ಲಿ ನಡೆಯಿತು. ಈ ಪಂದ್ಯದಲ್ಲಿ, ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಎರಡು ವಿಕೆಟ್ ನಷ್ಟಕ್ಕೆ 431 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ, ದಕ್ಷಿಣ ಆಫ್ರಿಕಾ 24.5 ಓವರ್‌ಗಳಲ್ಲಿ 155 ರನ್‌ಗಳಿಗೆ ಆಲೌಟ್ ಆಯಿತು. ಈ ಸೋಲಿನ ಹೊರತಾಗಿಯೂ, ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. ಇದಕ್ಕೂ ಮೊದಲು, ಆಸ್ಟ್ರೇಲಿಯಾ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು 2-1 ಅಂತರದಿಂದ ಸೋಲಿಸಿತ್ತು.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 431 ರನ್‌ಗಳ ಬೃಹತ್ ಸ್ಕೋರ್ ಗಳಿಸಿತು. ತಂಡದ ಪರ 3 ಬ್ಯಾಟ್ಸ್‌ಮನ್‌ಗಳ ಶತಕ ಬಾರಿಸಿದರು. ಅವರಲ್ಲಿ ಟ್ರಾವಿಸ್ ಹೆಡ್, ನಾಯಕ ಮಿಚೆಲ್ ಮಾರ್ಷ್ ಮತ್ತು ಕ್ಯಾಮರೂನ್ ಗ್ರೀನ್ ಕೂಡ ಸೇರಿದ್ದಾರೆ. ಆಸ್ಟ್ರೇಲಿಯಾದ ಪರ್ವತದಂತಹ ಸ್ಕೋರ್‌ಗೆ ಪ್ರತಿಕ್ರಿಯೆಯಾಗಿ, ದಕ್ಷಿಣ ಆಫ್ರಿಕಾ ತಂಡವು ಕೇವಲ 24.5 ಓವರ್‌ಗಳಲ್ಲಿ 155 ರನ್‌ಗಳಿಗೆ ಆಲೌಟ್ ಆಯಿತು. ಈ ರೀತಿಯಾಗಿ, ದಕ್ಷಿಣ ಆಫ್ರಿಕಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ತನ್ನ ಅತಿದೊಡ್ಡ ಸೋಲನ್ನು ಎದುರಿಸಬೇಕಾಯಿತು.
ಬೇಡದ ದಾಖಲೆ ಬರೆದ ಆಫ್ರಿಕಾ
ಈ ಹಿಂದೆ, 2023 ರಲ್ಲಿ ಭಾರತದ ವಿರುದ್ಧದ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತನ್ನ ಅತಿದೊಡ್ಡ ಸೋಲನ್ನು ಅನುಭವಿಸಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾವನ್ನು 243 ರನ್‌ಗಳಿಂದ ಸೋಲಿಸಿತ್ತು. ಈಗ ಭಾರತ ತಂಡದ ಆ ದಾಖಲೆ ಆಸ್ಟ್ರೇಲಿಯಾ ಪಾಲಾಗಿದೆ. ರನ್‌ಗಳ ವಿಷಯದಲ್ಲಿ ಏಕದಿನದಲ್ಲಿ ಇದು ಆಸ್ಟ್ರೇಲಿಯಾದ ಎರಡನೇ ಅತಿದೊಡ್ಡ ಗೆಲುವಾಗಿದೆ. ದಕ್ಷಿಣ ಆಫ್ರಿಕಾ ಪರ ಡೆವಾಲ್ಡ್ ಬ್ರೆವಿಸ್ 49 ರನ್‌ಗಳ ಅತ್ಯಧಿಕ ಇನ್ನಿಂಗ್ಸ್ ಆಡಿದರು. ಆಸ್ಟ್ರೇಲಿಯಾ ಪರ ಬೌಲಿಂಗ್‌ನಲ್ಲಿ ಕೂಪರ್ ಕೊನೊಲಿ ಕೇವಲ 6 ಓವರ್‌ಗಳಲ್ಲಿ 22 ರನ್ ನೀಡಿ 5 ವಿಕೆಟ್‌ಗಳನ್ನು ಕಬಳಿಸಿದರು.
AUS vs SA: ಮೂವರ ಶತಕ, ಬರೋಬ್ಬರಿ 431 ರನ್; ಆಫ್ರಿಕಾ ವಿರುದ್ಧ 19 ವರ್ಷಗಳ ಬಳಿಕ ಅಬ್ಬರಿಸಿದ ಆಸ್ಟ್ರೇಲಿಯಾ
ಸರಣಿ ಸೋತ ಆಸ್ಟ್ರೇಲಿಯಾ
ಆಸ್ಟ್ರೇಲಿಯಾ ಮೂರನೇ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾದರೂ, ದಕ್ಷಿಣ ಆಫ್ರಿಕಾ ಮೊದಲ ಎರಡು ಪಂದ್ಯಗಳನ್ನು ಗೆದ್ದು ಸರಣಿಯನ್ನು 2-1 ಅಂತರದಿಂದ ಗೆದ್ದಿದೆ ಎಂಬುದು ಗಮನಿಸಬೇಕಾದ ಸಂಗತಿ. ಈಗ ದಕ್ಷಿಣ ಆಫ್ರಿಕಾ ತಂಡ ಮುಂದಿನ ತಿಂಗಳು ಇಂಗ್ಲೆಂಡ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಟಿ20 ಮತ್ತು ಏಕದಿನ ಸರಣಿಗಳು ನಡೆಯಲಿವೆ. ಇದಕ್ಕಾಗಿ ದಕ್ಷಿಣ ಆಫ್ರಿಕಾ ಕೂಡ ತನ್ನ ತಂಡವನ್ನು ಪ್ರಕಟಿಸಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:38 pm, Sun, 24 August 25




