AUS vs SA: 276 ರನ್‌ಗಳಿಂದ ಗೆದ್ದ ಆಸ್ಟ್ರೇಲಿಯಾ; ದಕ್ಷಿಣ ಆಫ್ರಿಕಾ ಪಾಲಾದ ಏಕದಿನ ಸರಣಿ

AUS vs SA: ಆಸ್ಟ್ರೇಲಿಯಾ ಭಾನುವಾರ ಮೆಲ್ಬೋರ್ನ್‌ನಲ್ಲಿ ನಡೆದ ಕೊನೆಯ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 276 ರನ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 431 ರನ್ ಗಳಿಸಿತು. ದಕ್ಷಿಣ ಆಫ್ರಿಕಾ 155 ರನ್‌ಗಳಿಗೆ ಆಲೌಟ್ ಆಯಿತು. ಆದರೂ, ದಕ್ಷಿಣ ಆಫ್ರಿಕಾ 2-1 ಅಂತರದಿಂದ ಸರಣಿಯನ್ನು ಗೆದ್ದುಕೊಂಡಿತು. ಇದಕ್ಕೂ ಮೊದಲು, ಆಸ್ಟ್ರೇಲಿಯಾ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದಿತ್ತು.

AUS vs SA: 276 ರನ್‌ಗಳಿಂದ ಗೆದ್ದ ಆಸ್ಟ್ರೇಲಿಯಾ; ದಕ್ಷಿಣ ಆಫ್ರಿಕಾ ಪಾಲಾದ ಏಕದಿನ ಸರಣಿ
Aus Vs Sa

Updated on: Aug 24, 2025 | 5:19 PM

ಕೊನೆಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾವನ್ನು (Australia vs South Africa) 276 ರನ್‌ಗಳಿಂದ ಸೋಲಿಸಿ ವೈಟ್ ವಾಶ್ ಮುಖಭಂಗದಿಂದ ಪಾರಾಗಿದೆ. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯ ಭಾನುವಾರ ಮೆಕೆಯಲ್ಲಿ ನಡೆಯಿತು. ಈ ಪಂದ್ಯದಲ್ಲಿ, ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಎರಡು ವಿಕೆಟ್ ನಷ್ಟಕ್ಕೆ 431 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ, ದಕ್ಷಿಣ ಆಫ್ರಿಕಾ 24.5 ಓವರ್‌ಗಳಲ್ಲಿ 155 ರನ್‌ಗಳಿಗೆ ಆಲೌಟ್ ಆಯಿತು. ಈ ಸೋಲಿನ ಹೊರತಾಗಿಯೂ, ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. ಇದಕ್ಕೂ ಮೊದಲು, ಆಸ್ಟ್ರೇಲಿಯಾ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು 2-1 ಅಂತರದಿಂದ ಸೋಲಿಸಿತ್ತು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 2 ವಿಕೆಟ್‌ಗಳ ನಷ್ಟಕ್ಕೆ 431 ರನ್‌ಗಳ ಬೃಹತ್ ಸ್ಕೋರ್ ಗಳಿಸಿತು. ತಂಡದ ಪರ 3 ಬ್ಯಾಟ್ಸ್‌ಮನ್‌ಗಳ ಶತಕ ಬಾರಿಸಿದರು. ಅವರಲ್ಲಿ ಟ್ರಾವಿಸ್ ಹೆಡ್, ನಾಯಕ ಮಿಚೆಲ್ ಮಾರ್ಷ್ ಮತ್ತು ಕ್ಯಾಮರೂನ್ ಗ್ರೀನ್ ಕೂಡ ಸೇರಿದ್ದಾರೆ. ಆಸ್ಟ್ರೇಲಿಯಾದ ಪರ್ವತದಂತಹ ಸ್ಕೋರ್‌ಗೆ ಪ್ರತಿಕ್ರಿಯೆಯಾಗಿ, ದಕ್ಷಿಣ ಆಫ್ರಿಕಾ ತಂಡವು ಕೇವಲ 24.5 ಓವರ್‌ಗಳಲ್ಲಿ 155 ರನ್‌ಗಳಿಗೆ ಆಲೌಟ್ ಆಯಿತು. ಈ ರೀತಿಯಾಗಿ, ದಕ್ಷಿಣ ಆಫ್ರಿಕಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ತನ್ನ ಅತಿದೊಡ್ಡ ಸೋಲನ್ನು ಎದುರಿಸಬೇಕಾಯಿತು.

ಬೇಡದ ದಾಖಲೆ ಬರೆದ ಆಫ್ರಿಕಾ

ಈ ಹಿಂದೆ, 2023 ರಲ್ಲಿ ಭಾರತದ ವಿರುದ್ಧದ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತನ್ನ ಅತಿದೊಡ್ಡ ಸೋಲನ್ನು ಅನುಭವಿಸಿತ್ತು. ಆ ಪಂದ್ಯದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾವನ್ನು 243 ರನ್‌ಗಳಿಂದ ಸೋಲಿಸಿತ್ತು. ಈಗ ಭಾರತ ತಂಡದ ಆ ದಾಖಲೆ ಆಸ್ಟ್ರೇಲಿಯಾ ಪಾಲಾಗಿದೆ. ರನ್‌ಗಳ ವಿಷಯದಲ್ಲಿ ಏಕದಿನದಲ್ಲಿ ಇದು ಆಸ್ಟ್ರೇಲಿಯಾದ ಎರಡನೇ ಅತಿದೊಡ್ಡ ಗೆಲುವಾಗಿದೆ. ದಕ್ಷಿಣ ಆಫ್ರಿಕಾ ಪರ ಡೆವಾಲ್ಡ್ ಬ್ರೆವಿಸ್ 49 ರನ್‌ಗಳ ಅತ್ಯಧಿಕ ಇನ್ನಿಂಗ್ಸ್ ಆಡಿದರು. ಆಸ್ಟ್ರೇಲಿಯಾ ಪರ ಬೌಲಿಂಗ್‌ನಲ್ಲಿ ಕೂಪರ್ ಕೊನೊಲಿ ಕೇವಲ 6 ಓವರ್‌ಗಳಲ್ಲಿ 22 ರನ್‌ ನೀಡಿ 5 ವಿಕೆಟ್‌ಗಳನ್ನು ಕಬಳಿಸಿದರು.

AUS vs SA: ಮೂವರ ಶತಕ, ಬರೋಬ್ಬರಿ 431 ರನ್; ಆಫ್ರಿಕಾ ವಿರುದ್ಧ 19 ವರ್ಷಗಳ ಬಳಿಕ ಅಬ್ಬರಿಸಿದ ಆಸ್ಟ್ರೇಲಿಯಾ

ಸರಣಿ ಸೋತ ಆಸ್ಟ್ರೇಲಿಯಾ

ಆಸ್ಟ್ರೇಲಿಯಾ ಮೂರನೇ ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾದರೂ, ದಕ್ಷಿಣ ಆಫ್ರಿಕಾ ಮೊದಲ ಎರಡು ಪಂದ್ಯಗಳನ್ನು ಗೆದ್ದು ಸರಣಿಯನ್ನು 2-1 ಅಂತರದಿಂದ ಗೆದ್ದಿದೆ ಎಂಬುದು ಗಮನಿಸಬೇಕಾದ ಸಂಗತಿ. ಈಗ ದಕ್ಷಿಣ ಆಫ್ರಿಕಾ ತಂಡ ಮುಂದಿನ ತಿಂಗಳು ಇಂಗ್ಲೆಂಡ್ ಪ್ರವಾಸ ಮಾಡಲಿದೆ. ಈ ಪ್ರವಾಸದಲ್ಲಿ ಟಿ20 ಮತ್ತು ಏಕದಿನ ಸರಣಿಗಳು ನಡೆಯಲಿವೆ. ಇದಕ್ಕಾಗಿ ದಕ್ಷಿಣ ಆಫ್ರಿಕಾ ಕೂಡ ತನ್ನ ತಂಡವನ್ನು ಪ್ರಕಟಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Sun, 24 August 25

Follow Us