
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ (World Test Championship Final) ಪಂದ್ಯ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ (Australia vs South Africa) ನಡುವೆ ಲಂಡನ್‌ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಜೂನ್ 11 ರಿಂದ ಪ್ರಾರಂಭವಾಗಲಿದೆ. ಈ ಮಹತ್ವದ ಪಂದ್ಯಕ್ಕಾಗಿ ಎರಡೂ ತಂಡಗಳು ಅಭ್ಯಾಸ ಆರಂಭಿಸಿವೆ. ಈ ಎರಡೂ ತಂಡಗಳು ಈ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಫೈನಲ್ ಗೆಲುವಿನ ತವಕದಲ್ಲಿವೆ. ಆದಾಗ್ಯೂ, ಫೈನಲ್‌ಗೆ ಮೊದಲು, ಆಸ್ಟ್ರೇಲಿಯಾದ ಮಾಜಿ ನಾಯಕ ಆರನ್ ಫಿಂಚ್ ಮತ್ತು ದಕ್ಷಿಣ ಆಫ್ರಿಕಾದ ಅನುಭವಿ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ (AB de Villiers) ಎರಡೂ ತಂಡಗಳ ಬಗ್ಗೆ ಹೇಳಿಕೆ ನೀಡಿದ್ದು, ಯಾವ ತಂಡ ಗೆಲ್ಲಬಹುದು ಎಂಬುದನ್ನು ಕಾರಣ ಸಹಿತ ವಿವರಿಸಿದ್ದಾರೆ.
ಆಸ್ಟ್ರೇಲಿಯಾದ ಮಾಜಿ ನಾಯಕ ಆರೋನ್ ಫಿಂಚ್, ಎರಡೂ ತಂಡಗಳನ್ನು ನೋಡಿದರೆ ಎರಡು ತಂಡಗಳ ಬೌಲಿಂಗ್ ದಾಳಿ ಒಂದೇ ಆಗಿದೆ. ಆಸ್ಟ್ರೇಲಿಯಾದಲ್ಲಿ ನಾಲ್ಕು ಅತ್ಯುತ್ತಮ ವೇಗದ ಬೌಲರ್‌ಗಳಿದ್ದಾರೆ. ಇವರಲ್ಲಿ ನಾಥನ್ ಲಿಯಾನ್ ಕೂಡ ಸೇರಿದ್ದಾರೆ. ದಕ್ಷಿಣ ಆಫ್ರಿಕಾದ ಬಗ್ಗೆ ಹೇಳುವುದಾದರೆ, ತಂಡದಲ್ಲಿ ರಬಾಡ ಮತ್ತು ಲುಂಗಿ ಎನ್‌ಗಿಡಿಯಂತಹ ಉತ್ತಮ ಬೌಲರ್‌ಗಳಿದ್ದಾರೆ. ನಂತರ ಮಾರ್ಕೊ ಯಾನ್ಸೆನ್ ಮತ್ತು ಕೇಶವ್ ಮಹಾರಾಜ್ ಕೂಡ ವಿಕೆಟ್ ಪಡೆಯುವಲ್ಲಿ ನಿಪುಣರು. ಎರಡೂ ತಂಡಗಳು ಬಹುತೇಕ ಒಂದೇ ಆಗಿವೆ ಆದರೆ ನನ್ನ ಪ್ರಕಾರ ಆಸ್ಟ್ರೇಲಿಯಾ ಸ್ವಲ್ಪ ಮುಂದಿದೆ ಏಕೆಂದರೆ ಈ ತಂಡ ಹೆಚ್ಚು ಟೆಸ್ಟ್ ಕ್ರಿಕೆಟ್ ಆಡಿದ ಅನುಭವ ಹೊಂದಿದೆ ಎಂದಿದ್ದಾರೆ.
ಇದೇ ವೇಳೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್, ‘ದಕ್ಷಿಣ ಆಫ್ರಿಕಾ ಕ್ರಿಕೆಟ್‌ಗೆ ಇದು ಬಹಳ ದೊಡ್ಡ ಕ್ಷಣ. ಲಾರ್ಡ್ಸ್‌ನಲ್ಲಿ ಫೈನಲ್ ಆಡುವುದು ದೊಡ್ಡ ವಿಷಯ. ಇಡೀ ದೇಶ ನಮ್ಮ ತಂಡವನ್ನು ಬೆಂಬಲಿಸುತ್ತದೆ. ಮುಂಬರುವ ಸವಾಲಿಗೆ ನಾವು ತುಂಬಾ ಉತ್ಸುಕರಾಗಿದ್ದೇವೆ. ಇದು ತುಂಬಾ ಒಳ್ಳೆಯ ತಂಡ ಮತ್ತು ನಾವು ಆಸ್ಟ್ರೇಲಿಯಾವನ್ನು ಸೋಲಿಸಬಹುದು ಎಂದು ನನಗೆ ಭರವಸೆ ಇದೆ.
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಗೆಲ್ಲಲು ಆಸ್ಟ್ರೇಲಿಯಾ ಪ್ರಬಲ ಸ್ಪರ್ಧಿಯಾಗಿರುವುದರಿಂದ ನಾನು ಇದನ್ನು ಹೇಳುತ್ತಿದ್ದೇನೆ. ಆಸ್ಟ್ರೇಲಿಯಾ ಬಹಳ ಅನುಭವಿ ತಂಡವಾಗಿದ್ದು, ದಕ್ಷಿಣ ಆಫ್ರಿಕಾಗೆ ಈ ತಂಡವನ್ನು ಸೋಲಿಸುವುದು ಅಷ್ಟು ಸುಲಭವಲ್ಲ. ಆದರೆ ದಕ್ಷಿಣ ಆಫ್ರಿಕಾದ ಆಟಗಾರರು ಪ್ರಸ್ತುತ ಉತ್ತಮ ಫಾರ್ಮ್‌ನಲ್ಲಿದೆ ಹೀಗಾಗಿ ಆಫ್ರಿಕಾ ಗೆಲ್ಲಲಿದೆ ಎಂದಿದ್ದಾರೆ.
Virat Kohli: ಹೀಗಾದ್ರೆ ಮಾತ್ರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ಮರಳುತ್ತಾರೆ ಎಂದ ಆಸೀಸ್ ಲೆಜೆಂಡ್
ಕಳೆದ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ನಲ್ಲಿ ಆಸ್ಟ್ರೇಲಿಯಾ, ಭಾರತ ತಂಡವನ್ನು ಸೋಲಿಸಿ ಪ್ರಶಸ್ತಿ ಗೆದ್ದಿತ್ತು. ಈ ಬಾರಿ ಯಾವ ತಂಡ ಗೆಲ್ಲುತ್ತದೆ ಎಂಬುದು ಈಗ ಮುಖ್ಯವಾಗುತ್ತದೆ. ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡುವ ಮೂಲಕ ತಮ್ಮ ತಂಡದ ಗೆಲುವಿಗೆ ಮಹತ್ವದ ಕೊಡುಗೆ ನೀಡಬಲ್ಲ ಅನೇಕ ಬಲಿಷ್ಠ ಆಟಗಾರರನ್ನು ಹೊಂದಿವೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ