AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs WI: ಎರಡಂಕಿ ಮೊತ್ತಕ್ಕೆ ವೆಸ್ಟ್ ಇಂಡೀಸ್ ಆಲೌಟ್

Australia vs West Indies: ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ ತಂಡ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಸ್ಟೀವ್ ಸ್ಮಿತ್ ನಾಯಕತ್ವದಲ್ಲಿ ಕಣಕ್ಕಿಳಿದ ಆಸೀಸ್ ಪಡೆ ಮೊದಲ ಪಂದ್ಯದಲ್ಲಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು 2ನೇ ಪಂದ್ಯದಲ್ಲಿ 83 ರನ್​ಗಳ ಅಮೋಘ ಗೆಲುವು ದಾಖಲಿಸಿತ್ತು.

AUS vs WI: ಎರಡಂಕಿ ಮೊತ್ತಕ್ಕೆ ವೆಸ್ಟ್ ಇಂಡೀಸ್ ಆಲೌಟ್
Australia vs West Indies
TV9 Web
| Edited By: |

Updated on: Feb 06, 2024 | 12:54 PM

Share

ಕ್ಯಾನ್​ಬೆರಾದ ಮನುಕಾ ಓವಲ್​ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ (West Indies) ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ (Australia) ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ (Steve Smith) ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬೌಲಿಂಗ್ ದಾಳಿ ಸಂಘಟಿಸಿದ ಆಸೀಸ್ ಬೌಲರ್​ಗಳು ವೆಸ್ಟ್ ಇಂಡೀಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾಗಿದ್ದರು. ಮೊದಲ 10 ಓವರ್​ಗಳಲ್ಲಿ ಕೇವಲ 38 ರನ್ ನೀಡಿದ ಆಸೀಸ್ ವೇಗಿಗಳು 2 ವಿಕೆಟ್ ಕಬಳಿಸಿದ್ದರು.

ಇದಾದ ಬಳಿಕ ವಿಂಡೀಸ್ ಬ್ಯಾಟರ್​ಗಳು ಆಸೀಸ್ ದಾಳಿಯನ್ನು ಎದುರಿಸಲು ತಿಣುಕಾಡಿದರು. ಪರಿಣಾಮ ನಾಯಕ ಶಾಯ್ ಹೋಪ್ 4 ರನ್​ಗಳಿಸಿ ಔಟಾದರು. ಇದರ ಬೆನ್ನಲ್ಲೇ ಟೆಡ್ಡಿ ಬಿಷಪ್ (0), ರೊಸ್ಟನ್ ಚೇಸ್ (12), ರೊಮೊರಿಯೊ ಶೆಫರ್ಡ್​ (1), ಮ್ಯಾಥ್ಯೂ ಫೋರ್ಡ್ (0) ಪೆವಿಲಿಯನ್ ಪರೇಡ್ ನಡೆಸಿದರು.

ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ನಿಂತ ಅಲಿಕ್ ಅಥನಾಝ್ 60 ಎಸೆತಗಳನ್ನು ಎದುರಿಸಿ 32 ರನ್ ಕಲೆಹಾಕಿದರು. ಆದರೆ ಆ್ಯಡಂ ಝಂಪಾ ಎಸೆತವನ್ನು ಸರಿಯಾಗಿ ಗುರುತಿಸುವಲ್ಲಿ ಎಡವಿದ ಅಥನಾಝ್ ಕೂಡ ವಿಕೆಟ್ ಒಪ್ಪಿಸಿದರು.

ಇನ್ನು ಅಲ್ಝಾರಿ ಜೋಸೆಫ್ (6) ಹಾಗೂ ಗುಡಾಕೇಶ್ ಮೋಟಿ (0) ವಿಕೆಟ್ ಕೈಚೆಲ್ಲುವುದರೊಂದಿಗೆ ವೆಸ್ಟ್ ಇಂಡೀಸ್ ತಂಡ 24.1 ಓವರ್​ಗಳಲ್ಲಿ ಕೇವಲ 86 ರನ್​ಗಳಿಗೆ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರ ಕ್ಸೇವಿಯರ್ ಬಾರ್ಟ್ಲೆಟ್ 7.1 ಓವರ್​ಗಳಲ್ಲಿ 21 ರನ್ ನೀಡಿ 4 ವಿಕೆಟ್ ಪಡೆದರೆ, ಆ್ಯಡಂ ಝಂಪಾ ಹಾಗೂ ಲಾನ್ಸ್​ ಮೋರಿಸ್ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

87 ರನ್​ಗಳ ಸುಲಭ ಗುರಿ:

50 ಓವರ್​ಗಳಲ್ಲಿ 87 ರನ್​ಗಳ ಸುಲಭ ಗುರಿ ಪಡೆದ ಆಸ್ಟ್ರೇಲಿಯಾ ಪರ ಆರಂಭಿಕ ಆಟಗಾರ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ 41 ರನ್ ಬಾರಿಸಿದರೆ, ಜೋಶ್ ಇಂಗ್ಲಿಸ್ ಅಜೇಯ 35 ರನ್ ಸಿಡಿಸಿದರು. ಈ ಮೂಲಕ 6.5 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 87 ರನ್ ಬಾರಿಸಿ ಆಸ್ಟ್ರೇಲಿಯಾ ತಂಡವು 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಈ ಸರಣಿಯನ್ನು ಆಸ್ಟ್ರೇಲಿಯಾ 3-0 ಅಂತರದಿಂದ ಕ್ಲೀನ್ ಸ್ವೀಪ್​ ಮಾಡಿಕೊಂಡಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಜೇಕ್ ಫ್ರೇಸರ್-ಮೆಕ್‌ಗುರ್ಕ್ , ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್) , ಆರನ್ ಹಾರ್ಡಿ , ಸ್ಟೀವ್ ಸ್ಮಿತ್ (ನಾಯಕ) , ಕ್ಯಾಮರೋನ್ ಗ್ರೀನ್ , ಮಾರ್ನಸ್ ಲಾಬುಶೇನ್, ಶಾನ್ ಅಬಾಟ್ , ವಿಲ್ ಸದರ್ಲ್ಯಾಂಡ್ , ಕ್ಸೇವಿಯರ್ ಬಾರ್ಟ್ಲೆಟ್ , ಆ್ಯಡಂ ಝಂಪಾ , ಲ್ಯಾನ್ಸ್ ಮೋರಿಸ್.

ಇದನ್ನೂ ಓದಿ: Kane Williamson: ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೇನ್ ವಿಲಿಯಮ್ಸನ್

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಅಲಿಕ್ ಅಥಾನಾಝ್ , ಟೆಡ್ಡಿ ಬಿಷಪ್ , ಕ್ಜೋರ್ನ್ ಒಟ್ಟ್​ಲಿ , ಶಾಯ್ ಹೋಪ್ (ನಾಯಕ) , ಕೀಸಿ ಕಾರ್ಟಿ , ರೋಸ್ಟನ್ ಚೇಸ್ , ರೊಮಾರಿಯೋ ಶೆಫರ್ಡ್ , ಮ್ಯಾಥ್ಯೂ ಫೋರ್ಡ್ , ಅಲ್ಝಾರಿ ಜೋಸೆಫ್ , ಗುಡಾಕೇಶ್ ಮೋಟಿ , ಒಶಾನೆ ಥಾಮಸ್.

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ