AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs SA: ಏಕಾಂಗಿಯಾಗಿ ಪಂದ್ಯ ಗೆಲ್ಲಿಸಿದ ಮ್ಯಾಕ್ಸ್‌ವೆಲ್; ಟಿ20 ಸರಣಿ ಸೋತ ಆಫ್ರಿಕಾ

ustralia Wins T20 Series Against South Africa: ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದಿದೆ. ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ 173 ರನ್‌ಗಳ ಗುರಿಯನ್ನು ಬೆನ್ನಟ್ಟಿ 2 ವಿಕೆಟ್‌ಗಳ ಜಯ ಸಾಧಿಸಿತು. ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಅಜೇಯ ಅರ್ಧಶತಕ ಮತ್ತು ಕೊನೆಯ ಓವರ್‌ನಲ್ಲಿ ಬೌಂಡರಿ ಬಾರಿಸಿದ್ದು ಗೆಲುವಿಗೆ ಕಾರಣವಾಯಿತು. ದಕ್ಷಿಣ ಆಫ್ರಿಕಾದ ಡೆವಾಲ್ಡ್ ಬ್ರೆವಿಸ್ ಅವರು ವೇಗದ ಅರ್ಧಶತಕ ಸಿಡಿಸಿದರೂ ತಂಡ ಸೋಲನುಭವಿಸಿತು.

AUS vs SA: ಏಕಾಂಗಿಯಾಗಿ ಪಂದ್ಯ ಗೆಲ್ಲಿಸಿದ ಮ್ಯಾಕ್ಸ್‌ವೆಲ್; ಟಿ20 ಸರಣಿ ಸೋತ ಆಫ್ರಿಕಾ
Aus Vs Sa
ಪೃಥ್ವಿಶಂಕರ
|

Updated on: Aug 16, 2025 | 7:24 PM

Share

ಟಿ20 ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾದ ಅಜೇಯ ಓಟಕ್ಕೆ ಬ್ರೇಕ್ ಹಾಕುವಲ್ಲಿ ಯಶಸ್ವಿಯಾಗಿದ್ದ ದಕ್ಷಿಣ ಅಫ್ರಿಕಾ (Australia vs South Africa) ತಂಡ ಸರಣಿ ಗೆಲುವಿನ ಓಟಕ್ಕೆ ಬ್ರೇಕ್ ಹಾಕುವಲ್ಲಿ ಎಡವಿತು. ಉಭಯ ತಂಡಗಳ ನಡುವೆ ನಡೆದ ಸರಣಿಯ ಕೊನೆಯ ಪಂದ್ಯವನ್ನು 2 ವಿಕೆಟ್‌ಗಳಿಂದ ಗೆದ್ದುಕೊಂಡ ಆಸ್ಟ್ರೇಲಿಯಾ, ಈ ಮೂಲಕ ಸರಣಿಯನ್ನು ಸಹ 2-1 ಅಂತರದಿಂದ ಗೆದ್ದುಕೊಂಡಿತು. ಆಸ್ಟ್ರೇಲಿಯಾದ ಈ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ (Glen Maxwell ) ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡಿದಲ್ಲದೆ, ಕೊನೆಯ ಓವರ್‌ನ 5 ನೇ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ತಂಡವನ್ನು ಗುರಿಯತ್ತ ಕೊಂಡೊಯ್ದರು.

ಅಜೇಯ ಓಟ ಮುಂದುವರೆಸಿದ ಆಸೀಸ್

ಆಗಸ್ಟ್ 16 ರ ಶನಿವಾರ ಕೈರ್ನ್ಸ್‌ನ ಕ್ಯಾಜೆಲಿ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವೆ ಟಿ20 ಸರಣಿಯ ಕೊನೆಯ ಪಂದ್ಯ ನಡೆಯಿತು. ಇದಕ್ಕೂ ಮೊದಲು ನಡೆದ ಎರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿದ್ದರಿಂದ ಮೂರನೇ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆದರೆ ಪಂದ್ಯಕ್ಕೂ ಮುನ್ನವೇ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ ಎಂದು ತೋರುತ್ತಿತ್ತು. ಅದಕ್ಕೆ ಕಾರಣ ಈ ಮೈದಾನ. 21 ವರ್ಷಗಳ ಹಿಂದೆ ಈ ಮೈದಾನದಲ್ಲಿ ಅಂತರರಾಷ್ಟ್ರೀಯ ಪಂದ್ಯವನ್ನಾಡಲು ಆರಂಭಿಸಿದ ಆಸ್ಟ್ರೇಲಿಯಾ ಅಂದಿನಿಂದ ಯಾವುದೇ ಸ್ವರೂಪದಲ್ಲಿ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಈ ಬಾರಿಯೂ ಅದೇ ಕಥೆ ಮುಂದುವರೆಯಿತು.

ಆಸೀಸ್​ಗೆ ವೇಗದ ಆರಂಭ ನೀಡಿದ ಮಾರ್ಷ್​

ಈ ಪಂದ್ಯವನ್ನು ಗೆಲ್ಲಲು 173 ರನ್‌ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾಕ್ಕೆ ನಾಯಕ ಮಿಚೆಲ್ ಮಾರ್ಷ್ ಸ್ಫೋಟಕ ಆರಂಭವನ್ನು ನೀಡಿ ತಂಡವನ್ನು ಪವರ್‌ಪ್ಲೇನಲ್ಲಿಯೇ 50 ರನ್‌ಗಳ ಗಡಿ ದಾಟಿಸಿದರು. ಟ್ರಾವಿಸ್ ಹೆಡ್ ಮತ್ತೆ ವಿಫಲವಾದರೂ, ಮಾರ್ಷ್ 54 ರನ್‌ಗಳ ಬಲವಾದ ಇನ್ನಿಂಗ್ಸ್ ಆಡಿದರು. ಆದರೆ ಈ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ ಕ್ಯಾಮರೂನ್ ಗ್ರೀನ್ ಮತ್ತು ಟಿಮ್ ಡೇವಿಡ್ ಈ ಪಂದ್ಯದಲ್ಲಿ ವಿಫಲರಾದರು. ಇವರ ಜೊತೆಗೆ ಜೋಶ್ ಇಂಗ್ಲಿಸ್ ಕೂಡ ಮೊದಲ ಎಸೆತದಲ್ಲಿಯೇ ಬೌಲ್ಡ್ ಆದರು. ಹೀಗಾಗಿ ಆಸ್ಟ್ರೇಲಿಯಾ ಕೇವಲ 122 ರನ್‌ಗಳಿಗೆ 6 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿತ್ತು.

ಏಕಾಂಗಿಯಾಗಿ ಗೆಲ್ಲಿಸಿದ ಮ್ಯಾಕ್ಸ್​ವೆಲ್

ಇಲ್ಲಿಂದ ಮ್ಯಾಕ್ಸ್‌ವೆಲ್ ದಕ್ಷಿಣ ಆಫ್ರಿಕಾದ ಬೌಲರ್‌ಗಳ ಮೇಲೆ ದಾಳಿ ನಡೆಸಿದರು. ತಂಡದ ಪರ ಏಕಾಂಗಿ ಹೋರಾಟ ನೀಡಿದ ಮ್ಯಾಕ್ಸ್‌ವೆಲ್ 30 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಕೊನೆಯ ಓವರ್‌ನಲ್ಲಿ ತಂಡಕ್ಕೆ 10 ರನ್‌ಗಳು ಬೇಕಾಗಿದ್ದವು, ಆದರೆ ಕೇವಲ 2 ವಿಕೆಟ್‌ಗಳು ಮಾತ್ರ ಇದ್ದವು. ಈ ಓವರ್‌ನ ಮೊದಲ 2 ಎಸೆತಗಳಲ್ಲಿ ಮ್ಯಾಕ್ಸ್‌ವೆಲ್ 6 ರನ್ ಗಳಿಸಿದರು, ಆದರೆ ಮುಂದಿನ 2 ಎಸೆತಗಳಲ್ಲಿ ಯಾವುದೇ ರನ್ ಗಳಿಸಲಿಲ್ಲ. ನಂತರ ಐದನೇ ಎಸೆತದಲ್ಲಿ ರಿವರ್ಸ್ ಸ್ಕೂಪ್‌ನಲ್ಲಿ ಬೌಂಡರಿ ಗಳಿಸಿ ತಂಡಕ್ಕೆ ರೋಮಾಂಚಕ ಗೆಲುವು ತಂದುಕೊಟ್ಟರು.

ಏಕದಿನ, ಟಿ20 ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ; ಆರ್​ಸಿಬಿ ಆಟಗಾರನಿಗೆ ತಂಡದ ನಾಯಕತ್ವ

ಡೆವಾಲ್ಡ್ ಬ್ರೆವಿಸ್ ಅರ್ಧಶತಕ ವ್ಯರ್ಥ

ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆಫ್ರಿಕಾ ತಂಡಕ್ಕೆ ಮತ್ತೊಮ್ಮೆ ಯುವ ಬ್ಯಾಟ್ಸ್‌ಮನ್ ಡೆವಾಲ್ಡ್ ಬ್ರೆವಿಸ್ ಆಸರೆಯಾದರು. ಕೇವಲ 49 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಳೆದುಕೊಂಡಿದ್ದ ಆಫ್ರಿಕಾ ಇನ್ನಿಂಗ್ಸ್​ಗೆ ವೇಗ ನೀಡಿದ ಬ್ರೆವಿಸ್ ಆಸ್ಟ್ರೇಲಿಯಾದ ಬೌಲರ್‌ಗಳ ಮೇಲೆ ಪ್ರತಿದಾಳಿ ನಡೆಸಿ ಸಿಕ್ಸರ್‌ಗಳ ಮಳೆ ಸುರಿಸಿದರು. ಈ ಪೈಕಿ, ಬ್ರೆವಿಸ್ ಆರನ್ ಹಾರ್ಡಿ ಅವರ ಒಂದೇ ಓವರ್‌ನಲ್ಲಿ ಸತತ 4 ಸಿಕ್ಸರ್‌ಗಳನ್ನು ಬಾರಿಸಿದರು. ಇದರೊಂದಿಗೆ ಅವರು ಕೇವಲ 22 ಎಸೆತಗಳಲ್ಲಿ ದಕ್ಷಿಣ ಆಫ್ರಿಕಾ ಪರ ವೇಗದ ಅರ್ಧಶತಕ ಸಿಡಿಸಿದ ದಾಖಲೆಯನ್ನು ನಿರ್ಮಿಸಿದರು. ಬ್ರೆವಿಸ್ ಹೊರತುಪಡಿಸಿ, ರಾಸ್ಸಿ ವ್ಯಾನ್ ಡೆರ್ ಡಸೆನ್ ಅಜೇಯ 38 ರನ್​ಗಳ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿ ಬರಲಿಲ್ಲ. ಹೀಗಾಗಿ ಆಫ್ರಿಕಾ ತಂಡವು ಕೇವಲ 172 ರನ್‌ಗಳಿಸಲಷ್ಟೇ ಶಕ್ತವಾಯಿತು. ಆಸ್ಟ್ರೇಲಿಯಾ ಪರ ನಾಥನ್ ಎಲ್ಲಿಸ್ 3 ವಿಕೆಟ್‌ಗಳನ್ನು ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್