AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಬಹು ಸರಣಿಗಳ ಭಾರತ ಪ್ರವಾಸಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟ

Australia Women's A Tour India: ಆಸ್ಟ್ರೇಲಿಯಾ ಮಹಿಳಾ 'ಎ' ತಂಡ ಸೆಪ್ಟೆಂಬರ್‌ನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದ್ದು, ಇದರಲ್ಲಿ ಮೂರು ಟಿ20ಐ, ಮೂರು ಏಕದಿನ ಮತ್ತು ನಾಲ್ಕು ದಿನಗಳ ಪಂದ್ಯ ಸೇರಿವೆ. ಮೂರು ವಾರಗಳ ಪ್ರವಾಸಕ್ಕಾಗಿ ಅನುಭವಿ ವೇಗಿಗಳಾದ ಟೇಲಾ ವ್ಲೇಮಿಂಕ್ ಮತ್ತು ಡಾರ್ಸಿ ಬ್ರೌನ್ ಸೇರಿದಂತೆ 15 ಸದಸ್ಯರ ತಂಡವನ್ನು ಘೋಷಿಸಲಾಗಿದೆ. ವಿಭಿನ್ನ ಸ್ವರೂಪಗಳಿಗೆ ವಿಭಿನ್ನ ನಾಯಕಿಯರನ್ನು ನೇಮಿಸಲಾಗಿದೆ. ಪಂದ್ಯಗಳು ನ್ಯೂಚಂಡೀಗಢ, ಮೊಹಾಲಿ ಮತ್ತು ಧರ್ಮಶಾಲಾದಲ್ಲಿ ನಡೆಯಲಿವೆ.

IND vs AUS: ಬಹು ಸರಣಿಗಳ ಭಾರತ ಪ್ರವಾಸಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟ
Aus Vs Ind
ಪೃಥ್ವಿಶಂಕರ
|

Updated on:Aug 05, 2026 | 3:11 PM

Share

ಬಹು ಸರಣಿಗಳ ಭಾರತ ಪ್ರವಾಸಕ್ಕೆ ಆಸ್ಟ್ರೇಲಿಯಾ ಮಹಿಳಾ ಎ ತಂಡವನ್ನು (Australia Women’s A Tour India) ಪ್ರಕಟಿಸಲಾಗಿದೆ. ಭಾರತ ಮಹಿಳಾ ತಂಡ ಹಾಗೂ ಆಸ್ಟ್ರೇಲಿಯಾ ಮಹಿಳಾ ಎ ತಂಡಗಳ ನಡುವೆ ಬರುವ ತಿಂಗಳು ಅಂದರೆ ಸೆಪ್ಟೆಂಬರ್ ತಿಂಗಳಲ್ಲಿ ಮೂರು ಮಾದರಿಗಳ ಸರಣಿ ನಡೆಯಲಿದೆ. ಆಸ್ಟ್ರೇಲಿಯಾ ಎ ಮಹಿಳಾ ತಂಡದ ಈ ಭಾರತ ಪ್ರವಾಸ ಮೂರು ವಾರಗಳ ನಡೆಯಲಿದ್ದು, ಈ ಪ್ರವಾಸದಲ್ಲಿ ಮೂರು ಟಿ20 ಪಂದ್ಯಗಳು, ಮೂರು ಏಕದಿನ ಅಂತರರಾಷ್ಟ್ರೀಯ ಪಂದ್ಯಗಳು ಮತ್ತು ಒಂದು ನಾಲ್ಕು ದಿನಗಳ ಪಂದ್ಯ ನಡೆಯಲಿದೆ.

15 ಸದಸ್ಯರ ಆಸ್ಟ್ರೇಲಿಯಾ ಎ ಮಹಿಳಾ ತಂಡ

ಇನ್ನು ಈ ಭಾರತ ಪ್ರವಾಸಕ್ಕಾಗಿ 15 ಸದಸ್ಯರ ಆಸ್ಟ್ರೇಲಿಯಾ ಎ ಮಹಿಳಾ ತಂಡವನ್ನು ಪ್ರಕಟಿಸಿದ್ದು, ಅನುಭವಿ ವೇಗಿಗಳಾದ ಟೇಲಾ ವ್ಲೇಮಿಂಕ್ ಮತ್ತು ಡಾರ್ಸಿ ಬ್ರೌನ್ ವೇಗದ ದಾಳಿಯನ್ನು ಮುನ್ನಡೆಸಲಿದ್ದಾರೆ. ಟೇಲಾ ವ್ಲೇಮಿಂಕ್ ಗಾಯದಿಂದ ಚೇತರಿಸಿಕೊಂಡು ಬಹಳ ದಿನಗಳ ಮಂತರ ಕ್ರಿಕೆಟ್​ಗೆ ಮರಳುತ್ತಿದ್ದು, ಡಾರ್ಸಿ ಬ್ರೌನ್ ಕೂಡ ಬಹಳ ದಿನಗಳ ನಂತರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಈ ಸರಣಿಯಲ್ಲಿ ತಹ್ಲಿಯಾ ವಿಲ್ಸನ್ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ಎ ತಂಡವನ್ನು ಮುನ್ನಡೆಸಲಿದ್ದು, ನಿಕೋಲ್ ಫಾಲ್ಟಮ್ ಟಿ20 ತಂಡವನ್ನು ಮುನ್ನಡೆಸಲಿದ್ದಾರೆ ಮತ್ತು ರಾಚೆಲ್ ಟ್ರೆನಮನ್ ನಾಲ್ಕು ದಿನಗಳ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.

ಮೊದಲಿಗೆ ಮೂರು ಟಿ20 ಪಂದ್ಯಗಳು ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿವೆ. ನಂತರ ಮೂರು ಏಕದಿನ ಪಂದ್ಯಗಳು ಮೊಹಾಲಿಯ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕೊನೆಯದಾಗಿ ನಾಲ್ಕು ದಿನಗಳ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಪ್ರವಾಸಕ್ಕೆ ಆಸ್ಟ್ರೇಲಿಯಾ ಎ ಮಹಿಳಾ ತಂಡ: ಡಾರ್ಸಿ ಬ್ರೌನ್, ಮೈಟ್ಲಾನ್ ಬ್ರೌನ್, ನಿಕೋಲ್ ಫಾಲ್ಟಮ್, ಟೆಸ್ ಫ್ಲಿಂಟಾಫ್, ಸಿಯಾನಾ ಜಿಂಜರ್, ಚಾರ್ಲಿ ನಾಟ್, ಅನಿಕಾ ಲಿಯರಾಯ್ಡ್, ಕೇಟೀ ಮ್ಯಾಕ್, ಲಿಲ್ಲಿ ಮಿಲ್ಸ್, ಫ್ರಾಂಕಿ ನಿಕ್ಲಿನ್, ಹೇಲಿ ಸಿಲ್ವರ್-ಹೋಮ್ಸ್, ರಾಚೆಲ್ ಟ್ರೆನಮನ್, ಕೋರ್ಟ್ನಿ ವೆಬ್, ತಹ್ಲಿಯಾ ವಿಲ್ಸನ್ ಮತ್ತು ಟೇಲಾ ವ್ಲೇಮಿಂಕ್.

ಪ್ರವಾಸದ ವೇಳಾಪಟ್ಟಿ

ಟಿ20 ಸರಣಿ

  • ಸೆಪ್ಟೆಂಬರ್ 12 – ಮೊದಲ ಟಿ20, ನ್ಯೂ ಚಂಡೀಗಢ
  • ಸೆಪ್ಟೆಂಬರ್ 15 – ಎರಡನೇ ಟಿ20, ನ್ಯೂ ಚಂಡೀಗಢ
  • ಸೆಪ್ಟೆಂಬರ್ 17 – ಮೂರನೇ ಟಿ20, ನ್ಯೂ ಚಂಡೀಗಢ

ಏಕದಿನ ಸರಣಿ

  • ಸೆಪ್ಟೆಂಬರ್ 20- ಮೊದಲ ಏಕದಿನ ಪಂದ್ಯ, ಮೊಹಾಲಿ
  • ಸೆಪ್ಟೆಂಬರ್ 23- ಎರಡನೇ ಏಕದಿನ ಪಂದ್ಯ, ಮೊಹಾಲಿ
  • ಸೆಪ್ಟೆಂಬರ್ 25 – ಮೂರನೇ ಏಕದಿನ ಪಂದ್ಯ, ಮೊಹಾಲಿ
  • ಸೆಪ್ಟೆಂಬರ್ 29–ಅಕ್ಟೋಬರ್ 2- ನಾಲ್ಕು ದಿನಗಳ ಪಂದ್ಯ, ಧರ್ಮಶಾಲಾ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Wed, 5 August 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ