ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

Chloe Amanda Bailey-Michael Vaughan: ಇಂಗ್ಲೆಂಡ್ ತಂಡವು ಕೇವಲ 68 ರನ್​ಗಳಿಗೆ ಆಲೌಟಾದ ಬೆನ್ನಲ್ಲೇ ಆಸ್ಟ್ರೇಲಿಯಾದ ಮಹಿಳಾ ಪತ್ರಕರ್ತೆ ಕೋಲ್ ಅಮಂಡಾ ಬೈಲಿ ಇಂಗ್ಲೆಂಡ್ ಮಾಜಿ ನಾಯಕ ಮೈಕೆಲ್ ವಾನ್ ಅವರ ಹಳೆಯ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದಾರೆ.

ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!
Chloe Amanda Bailey-Michael Vaughan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 28, 2021 | 2:59 PM

ಅದು 2019…ಭಾರತ ತಂಡವು ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿತ್ತು. ಐದು ಪಂದ್ಯಗಳ ಏಕದಿನ ಸರಣಿಯ 4ನೇ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ದ ಮುಗ್ಗರಿಸಿತ್ತು. ಅದು ಕೂಡ ಅತ್ಯಂತ ಹೀನಾಯವಾಗಿ ಎಂಬುದು ವಿಶೇಷ. ಹೌದು, ಅಂದು ಟೀಮ್ ಇಂಡಿಯಾ 30.5 ಓವರ್​ನಲ್ಲಿ ಕೇವಲ 92 ರನ್​ಗಳಿಗೆ ಆಲೌಟ್ ಆಗಿತ್ತು. ಭಾರತ ತಂಡದ ಈ ಕಳಪೆ ಬ್ಯಾಟಿಂಗ್ ಬೆನ್ನಲ್ಲೇ ಇಂಗ್ಲೆಂಡ್ ಮಾಜಿ ನಾಯಕ ಮೈಕೆಲ್ ವಾನ್ ಟೀಮ್ ಇಂಡಿಯಾವನ್ನು ಗೇಲಿ ಮಾಡಿದ್ದರು. ಭಾರತ 92 ಕ್ಕೆ ಆಲೌಟ್ ಎಂದು ವಾನ್ ಟ್ವೀಟ್ ಮಾಡಿದ್ದ ವಾನ್, ಈ ದಿನಗಳಲ್ಲಿ ಒಂದು ತಂಡವು 100 ಕ್ಕಿಂತ ಕಡಿಮೆ ರನ್ ಗಳಿಸುತ್ತದೆ ಎಂದರೆ ನಂಬಲಾಗುತ್ತಿಲ್ಲ ಎಂದು ಕಿಚಾಯಿಸಿದ್ದರು.

ಇದೀಗ ಎರಡು ವರ್ಷಗಳ ಹಿಂದಿನ ಮೈಕೆಲ್ ವಾನ್ ಅವರ ಟ್ವೀಟ್ ವೈರಲ್ ಆಗಿದೆ. ಹೀಗೆ ಹಳೆಯ ಟ್ವೀಟ್ ವೈರಲ್ ಆಗಲು ಕಾರಣ ಇಂಗ್ಲೆಂಡ್ ತಂಡವು ಕೇವಲ 68 ರನ್​ಗಳಿಗೆ ಆಲೌಟ್ ಆಗಿರುವುದು. ಹೌದು, ಪ್ರತಿಷ್ಠಿತ ಆ್ಯಶಸ್ ಸರಣಿಯ 3ನೇ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ವಿರುದ್ದ ಇಂಗ್ಲೆಂಡ್ ಕೇವಲ 68 ರನ್​ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಇಂಗ್ಲೆಂಡ್ ತಂಡವನ್ನು ಇನಿಂಗ್ಸ್ ಹಾಗೂ 14 ರನ್​ಗಳ ಅಂತರದಿಂದ ಮಣಿಸಿ ಆಸ್ಟ್ರೇಲಿಯಾ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದೆ.

ಇತ್ತ ಇಂಗ್ಲೆಂಡ್ ತಂಡವು ಕೇವಲ 68 ರನ್​ಗಳಿಗೆ ಆಲೌಟಾದ ಬೆನ್ನಲ್ಲೇ ಆಸ್ಟ್ರೇಲಿಯಾದ ಮಹಿಳಾ ಪತ್ರಕರ್ತೆ ಕೋಲ್ ಅಮಂಡಾ ಬೈಲಿ ಇಂಗ್ಲೆಂಡ್ ಮಾಜಿ ನಾಯಕ ಮೈಕೆಲ್ ವಾನ್ ಅವರ ಹಳೆಯ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದಾರೆ. ಭಾರತ ತಂಡವನ್ನು ಗೇಲಿ ಮಾಡಿದ್ದ ಎರಡು ವರ್ಷಗಳ ಹಿಂದಿನ ಟ್ವೀಟ್​ಗೆ ಉತ್ತರಿಸಿರುವ ಅಮಂಡಾ ಇಂಗ್ಲೆಂಡ್ 68 ರನ್​ಗೆ ಆಲೌಟ್​ ಆಗಿರುವುದನ್ನು ಪ್ರಸ್ತಾಪಿಸಿ ಹೀಗೂ ಆಗುತ್ತೆ ಎಂಬುದು ಈಗ ತಿಳಿಯಿತು ಎಂದು ಮೈಕೆಲ್ ವಾನ್ ಅವರ ಕಾಲೆಳೆದಿದ್ದಾರೆ.

ಇನ್ನೊಂದೆ ಟೀಮ್ ಇಂಡಿಯಾ ಮಾಜಿ ಆಟಗಾರ ವಾಸಿಂ ಜಾಫರ್ ಕೂಡ ಮೈಕೆಲ್ ವಾನ್ ಅವರ ಕಾಲೆಳೆದಿದ್ದು, 68 ರನ್​ಗಳಿಗೆ ಇಂಗ್ಲೆಂಡ್ ಆಲೌಟ್ ಆಗಿರುವುದನ್ನು ಪ್ರಸ್ತಾಪಿಸಿ ವಾನ್ ಅವರ ಹಳೆಯ ಟ್ವೀಟ್​ ಅನ್ನು ಮತ್ತೆ ನೆನಪಿಸಿದ್ದಾರೆ. ಒಟ್ಟಿನಲ್ಲಿ ಪ್ರತಿಷ್ಠಿತ ಆ್ಯಶಸ್ ಸರಣಿಯಲ್ಲಿ ಈ ಬಾರಿ ಇಂಗ್ಲೆಂಡ್ ತಂಡವು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದು, ಸರಣಿಯ ನಿರ್ಣಾಯಕ ಪಂದ್ಯವನ್ನು ಮೂರನೇ ದಿನಕ್ಕೆ ಅಂತ್ಯಗೊಳಿಸಿ ಇಂಗ್ಲೆಂಡ್ ತಂಡವು ಸೋಲೊಪ್ಪಿಸಿಕೊಂಡಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ 3-0 ಅಂತರದಿಂದ ಮುನ್ನಡೆಸಿ ಸಾಧಿಸಿ ಆಸ್ಟ್ರೇಲಿಯಾ ಆಶ್ಯಸ್ ಟ್ರೋಫಿಯನ್ನು ವಶಪಡಿಸಿಕೊಂಡಿದೆ.

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(Australian Journalist Defended India And Trolled Michael Vaughan)

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!