AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL vs AUS: ಶೇನ್ ವಾರ್ನ್​ರ ವಿಶ್ವ ದಾಖಲೆಯನ್ನು ಸರಿಗಟ್ಟಿದ ನಾಥನ್ ಲಿಯಾನ್

Nathan Lyon: ನಾಥನ್ ಲಿಯಾನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿದ್ದಾರೆ. ಲಂಕಾ ವಿರುದ್ದ ಐದು ವಿಕೆಟ್ ಕಬಳಿಸುವ ಮೂಲಕ ಸರ್ ರಿಚರ್ಡ್ ಹ್ಯಾಡ್ಲಿ ಅವರನ್ನು ಹಿಂದಿಕ್ಕಿದರು.

SL vs AUS: ಶೇನ್ ವಾರ್ನ್​ರ ವಿಶ್ವ ದಾಖಲೆಯನ್ನು ಸರಿಗಟ್ಟಿದ ನಾಥನ್ ಲಿಯಾನ್
Nathan lyon-Shane warne
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 30, 2022 | 12:55 PM

ಕ್ರಿಕೆಟ್ ಲೆಜೆಂಡ್ ಆಸ್ಟ್ರೇಲಿಯಾದ ಶೇನ್ ವಾರ್ನ್ (Shane Warne) ಅವರ ವಿಶ್ವ ದಾಖಲೆಯೊಂದನ್ನು ಆಸೀಸ್ ಸ್ಪಿನ್ನರ್ ನಾಥನ್ ಲಿಯಾನ್ ಸರಿಗಟ್ಟುವ ಮೂಲಕ ಹೊಸ ಸಾಧನೆ ಮೆರೆದಿದ್ದಾರೆ. ಶ್ರೀಲಂಕಾ ವಿರುದ್ದ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಪಿನ್ ಮೋಡಿ ತೋರಿಸಿದ್ದ ಲಿಯಾನ್ 5 ವಿಕೆಟ್ ಉರುಳಿಸಿ ಮಿಂಚಿದ್ದರು. ಈ ಐದು ವಿಕೆಟ್​ಗಳೊಂದಿಗೆ ನಾಥನ್ ಲಿಯಾನ್ ವಿಶೇಷ ಸಾಧನೆಯನ್ನೂ ಸಹ ಮಾಡಿದ್ದಾರೆ. ಲಿಯಾನ್​ಗೆ ಇದು ಟೆಸ್ಟ್ ವೃತ್ತಿಜೀವನದ 20ನೇ 5 ವಿಕೆಟ್ ಗುಚ್ಛವಾಗಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 20 ಅಥವಾ ಅದಕ್ಕಿಂತ ಹೆಚ್ಚು ಬಾರಿ 5 ವಿಕೆಟ್ ಪಡೆದ ಆಸ್ಟ್ರೇಲಿಯಾದ 5ನೇ ಬೌಲರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಶೇನ್ ವಾರ್ನ್ (37), ಗ್ಲೆನ್ ಮೆಕ್‌ಗ್ರಾತ್ (29), ಡೆನ್ನಿಸ್ ಲಿಲ್ಲಿ (23) ಮತ್ತು ಕ್ಲಾರಿ ಗ್ರಿಮ್ಮೆಟ್ (21) ನಾಥನ್ ಲಿಯಾನ್‌ಗಿಂತ ಮುಂದಿದ್ದಾರೆ.

ವಿಶೇಷ ಎಂದರೆ ಏಷ್ಯನ್ ಪಿಚ್‌ನಲ್ಲಿ ಇನ್ನಿಂಗ್ಸ್‌ವೊಂದರಲ್ಲಿ 5 ವಿಕೆಟ್ ಕಬಳಿಸಿದ ಶೇನ್ ವಾರ್ನ್ ಅವರ ವಿಶ್ವ ದಾಖಲೆಯನ್ನು ಕೂಡ ಇದರೊಂದಿಗೆ ನಾಥನ್ ಲಿಯಾನ್ ಸರಿಗಟ್ಟಿದ್ದಾರೆ. ಸ್ಪಿನ್ ಮಾಂತ್ರಿಕ ಶೇನ್ ವಾರ್ನ್​ ಏಷ್ಯಾದಲ್ಲಿ 9 ಬಾರಿ 5 ವಿಕೆಟ್​ಗಳನ್ನು ಪಡೆದಿದ್ದರು. ಇದೀಗ ಲಿಯಾನ್ ಶ್ರೀಲಂಕಾ ವಿರುದ್ದ 5 ವಿಕೆಟ್ ಉರುಳಿಸುವ ಮೂಲಕ ಏಷ್ಯಾದಲ್ಲಿ 9ನೇ ಬಾರಿ ಈ ಸಾಧನೆ ಮಾಡಿದ್ದಾರೆ​. ಈ ಮೂಲಕ ಆಸ್ಟ್ರೇಲಿಯಾದ ಶ್ರೇಷ್ಠ ಸ್ಪಿನ್ನರ್ ಶೇನ್ ವಾರ್ನ್ ಅವರ ಸಾಧನೆಯನ್ನು ಸರಿಗಟ್ಟಿದ್ದಾರೆ.

ಸದ್ಯ ನಾಥನ್ ಲಿಯಾನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿದ್ದಾರೆ. ಲಂಕಾ ವಿರುದ್ದ ಐದು ವಿಕೆಟ್ ಕಬಳಿಸುವ ಮೂಲಕ ಸರ್ ರಿಚರ್ಡ್ ಹ್ಯಾಡ್ಲಿ ಅವರನ್ನು ಹಿಂದಿಕ್ಕಿದರು. ಇದೀಗ ಲಂಕಾ ರಂಗನಾ ಹೆರಾತ್ (433) ಅವರ ವಿಕೆಟ್​ಗಳ ದಾಖಲೆಯನ್ನು ಸರಿಗಟ್ಟಲು ಲಿಯಾನ್​ಗೆ ಕೇವಲ 1 ವಿಕೆಟ್ ಅವಶ್ಯಕತೆಯಿದೆ. ಹಾಗೆಯೇ 432 ವಿಕೆಟ್ ಉರುಳಿಸಿರುವ ಲಿಯಾನ್ ಅವರ ಮುಂದಿನ ಟಾರ್ಗೆಟ್​ ಕಪಿಲ್ ದೇವ್ ಅವರ 434 ವಿಕೆಟ್‌ಗಳು. ಕಪಿಲ್ ದೇವ್ ಅವರನ್ನು ಹಿಂದಿಕ್ಕಿದ್ದರೆ ನಾಥನ್ ಲಿಯಾನ್ ಟೆಸ್ಟ್ ಕ್ರಿಕೆಟ್‌ನ ಟಾಪ್ 10 ವಿಕೆಟ್ ಟೇಕರ್ ಬೌಲರ್‌ಗಳ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.

ಇದನ್ನೂ ಓದಿ
Image
Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ರ ಟೀಮ್ ಇಂಡಿಯಾ ಪ್ಲೇಯಿಂಗ್ 11
Image
Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
Image
ಪೆಟ್ರೋಲ್ ಪಂಪ್​ನಲ್ಲಿ ಚಹಾ ನೀಡುತ್ತಿರುವ ಶ್ರೀಲಂಕಾ ಕ್ರಿಕೆಟಿಗ
Image
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್

ಇನ್ನು ಗಾಲೆಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಬೌಲರ್​ಗಳು ಅತ್ಯುತ್ತಮ ಬೌಲಿಂಗ್ ದಾಳಿ ಸಂಘಟಿಸಿದ್ದರು. ಪರಿಣಾಮ ಶ್ರೀಲಂಕಾ ಮೊದಲ ಇನಿಂಗ್ಸ್​ನಲ್ಲಿ ಕೇವಲ 212 ರನ್‌ಗಳಿಗೆ ಆಲೌಟ್ ಆಗಿದೆ. ಇದೀಗ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್ ಬ್ಯಾಟಿಂಗ್ ಮಾಡುತ್ತಿದ್ದು, ಮಧ್ಯಾಹ್ನದ ಊಟದ ಬ್ರೇಕ್ ವೇಳೆಗೆ 3 ವಿಕೆಟ್ ನಷ್ಟಕ್ಕೆ 98 ರನ್​ ಕಲೆಹಾಕಿದೆ.

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​