AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ವೇಗಿಗೆ 2 ಪಂದ್ಯಗಳ ನಿಷೇಧ!

ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ 'ಪ್ಲೇಯರ್ ಆಫ್ ದಿ ಸೀರೀಸ್' ಪ್ರಶಸ್ತಿ ಗೆದ್ದು ಸಂಭ್ರಮದಲ್ಲಿದ್ದ ಆಸ್ಟ್ರೇಲಿಯಾದ ಹಿರಿಯ ವೇಗಿ ಮೇಗನ್ ಶಟ್‌ಗೆ ಪ್ರಿಸ್ಕ್ರಿಪ್ಷನ್ ಔಷಧಿ ವಿವಾದ ದೊಡ್ಡ ಹಿನ್ನಡೆ ತಂದಿದೆ. ಕ್ರೀಡಾ ವೈದ್ಯಕೀಯ ಮಾರ್ಗಸೂಚಿಗಳ ಉಲ್ಲಂಘನೆಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಇವರ ಮೇಲೆ ಎರಡು ಪಂದ್ಯಗಳ ನಿಷೇಧ ಹೇರಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಆಸ್ಟ್ರೇಲಿಯಾ ವೇಗಿಗೆ 2 ಪಂದ್ಯಗಳ ನಿಷೇಧ!
Megan SchuttImage Credit source: GettyImages
ಝಾಹಿರ್ ಯೂಸುಫ್
|

Updated on:Oct 22, 2026 | 1:59 PM

Share

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಹಿರಿಯ ವೇಗದ ಬೌಲರ್ ಮೇಗನ್ ಶಟ್ ಅವರಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಎರಡು ಪಂದ್ಯಗಳ ನಿಷೇಧ ಹೇರಿದೆ. ಪ್ರಿಸ್ಕ್ರಿಪ್ಷನ್ ಔಷಧಿಗಳ ಬಳಕೆಗೆ ಸಂಬಂಧಿಸಿದ ವೈದ್ಯಕೀಯ ಮಾರ್ಗಸೂಚಿಗಳನ್ನು ಪಾಲಿಸದ ಕಾರಣ ಅವರ ವಿರುದ್ಧ ಈ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

ಕ್ರಿಕೆಟ್ ಆಸ್ಟ್ರೇಲಿಯಾದ ಪ್ರಕಾರ, ಮೇಗನ್ ಶಟ್ ಅವರು ಮಂಡಳಿಯ ‘ಕ್ರೀಡಾ ವಿಜ್ಞಾನ ಮತ್ತು ಕ್ರೀಡಾ ವೈದ್ಯಕೀಯ’ (SSSM) ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ. ಆದರೆ, ಇದು ಯಾವುದೇ ರೀತಿಯ ಉದ್ದೀಪನ ಮದ್ದು ಅಥವಾ ಕ್ರೀಡಾ ಪ್ರದರ್ಶನ ಹೆಚ್ಚಿಸುವ ನಿಷೇಧಿತ ಔಷಧ ಬಳಕೆಯ ಪ್ರಕರಣವಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಶಟ್ ತಪ್ಪಿಸಿಕೊಳ್ಳಲಿರುವ ಪ್ರಮುಖ ಪಂದ್ಯಗಳು:

33 ವರ್ಷದ ಅನುಭವಿ ವೇಗಿ ಮೇಗನ್ ಶಟ್ ಈ ನಿಷೇಧದಿಂದಾಗಿ ಮುಂಬರುವ ಎರಡು ಪ್ರಮುಖ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20ಐ (ಅಕ್ಟೋಬರ್ 22, 2026): ನಾರ್ತ್ ಸಿಡ್ನಿ ಓವಲ್‌ನಲ್ಲಿ ಇಂದು ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧದ ಸರಣಿಯ ಅಂತಿಮ ಪಂದ್ಯದಿಂದ ಅವರು ಹೊರಗುಳಿಯಲಿದ್ದಾರೆ. ಈ ಸರಣಿಯಲ್ಲಿ ಆಸ್ಟ್ರೇಲಿಯಾ ಈಗಾಗಲೇ 2-0 ಮುನ್ನಡೆ ಸಾಧಿಸಿದ್ದು, ಹೀಗಾಗಿ ಶಟ್ ಅವರ ಅಲಭ್ಯತೆಯು ಆಸ್ಟ್ರೇಲಿಯಾ ತಂಡದ ಮೇಲೆ ನೇರ ಪರಿಣಾಮ ಬೀರಲ್ಲ ಎನ್ನಬಹುದು.

WBBL ಆರಂಭಿಕ ಪಂದ್ಯ (ಅಕ್ಟೋಬರ್ 31, 2026): ವುಮೆನ್ಸ್ ಬಿಗ್ ಬ್ಯಾಶ್ ಲೀಗ್‌ನಲ್ಲಿ ಅಡಿಲೇಡ್ ಸ್ಟ್ರೈಕರ್ಸ್ ಪರವಾಗಿ ಕಣಕ್ಕಿಳಿಯುತ್ತಿರುವ ಮೇಗನ್ ಶಟ್ ಮೆಲ್ಬೋರ್ನ್ ಸ್ಟಾರ್ಸ್ ವಿರುದ್ಧದ ಮೊದಲ ಪಂದ್ಯದಿಂದಲೂ ಹೊರಗುಳಿಯಬೇಕಾಗುತ್ತದೆ.

ಕ್ಷಮೆಯಾಚಿಸಿದ ಶಟ್:

ಕ್ರಿಕೆಟ್ ಆಸ್ಟ್ರೇಲಿಯಾದ ತೀರ್ಪನ್ನು ತಕ್ಷಣವೇ ಒಪ್ಪಿಕೊಂಡಿರುವ ಮೇಗನ್ ಶಟ್, “ನನ್ನ ಮೇಲಿನ ಶಿಸ್ತು ಕ್ರಮವನ್ನು ನಾನು ಸಂಪೂರ್ಣವಾಗಿ ಸ್ವೀಕರಿಸುತ್ತೇನೆ. ನಿಗದಿಪಡಿಸಿದ ಉನ್ನತ ಮಾನದಂಡಗಳನ್ನು ಪಾಲಿಸಲು ನನ್ನಿಂದ ಸಾಧ್ಯವಾಗದ್ದಕ್ಕೆ ನಾನು ಕ್ಷಮೆಯಾಚಿಸುತ್ತೇನೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಮಗೆ ನಿಯಮಗಳ ಬಗ್ಗೆ ನಿಯಮಿತವಾಗಿ ಮಾಹಿತಿ ನೀಡಲಾಗುತ್ತಿದ್ದರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ್!

ಇತ್ತೀಚೆಗಷ್ಟೇ ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯಲ್ಲಿ 10 ವಿಕೆಟ್ ಪಡೆದು ‘ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಮೇಗನ್ ಶಟ್ ಅವರಿಗೆ ಈ ನಿಷೇಧ ದೊಡ್ಡ ಹಿನ್ನಡೆಯಾಗಿದೆ. ಇದಾಗ್ಯೂ ಕ್ರಿಕೆಟ್ ಆಸ್ಟ್ರೇಲಿಯಾವು ಮೇಗನ್ ಶಟ್ ಅವರಿಗೆ ಅಗತ್ಯ ಬೆಂಬಲವನ್ನು ನೀಡುವುದಾಗಿ ತಿಳಿಸಿದೆ.

Published On - 1:58 pm, Thu, 22 October 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್
ಅ. 26ಕ್ಕೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಸಿಎಂ
ಅ. 26ಕ್ಕೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಸಿಎಂ
ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ಕೊಳಚೆ ನೀರು, ಗುಂಡಿಗಳ ಸಮಸ್ಯೆ
ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ಕೊಳಚೆ ನೀರು, ಗುಂಡಿಗಳ ಸಮಸ್ಯೆ
ಆಯುಧ ಪೂಜೆ ದಿನ ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಮುಖಂಡ
ಆಯುಧ ಪೂಜೆ ದಿನ ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಮುಖಂಡ
ಆನೆ ಸೋಮಣ್ಣನ ರಂಪಾಟಕ್ಕೆ ಮುರಿದು ಬಿದ್ದ ದೇವಿಯ ಕೈ
ಆನೆ ಸೋಮಣ್ಣನ ರಂಪಾಟಕ್ಕೆ ಮುರಿದು ಬಿದ್ದ ದೇವಿಯ ಕೈ
ಬೆಂಗಳೂರಿನಲ್ಲಿ ನಿಯಮ ಪಾಲಿಸದ ಪಿಜಿಗಳಿಗೆ ಜಿಬಿಎ ಬಿಗ್ ಶಾಕ್
ಬೆಂಗಳೂರಿನಲ್ಲಿ ನಿಯಮ ಪಾಲಿಸದ ಪಿಜಿಗಳಿಗೆ ಜಿಬಿಎ ಬಿಗ್ ಶಾಕ್
ಬಿಗ್ ಬಾಸ್ ಮನೆಯಲ್ಲಿ ಕಳ್ಳರ ಕೈಚಳಕ; ಸೆಕ್ಯುರಿಟಿ ಕಣ್ಣು ತಪ್ಪಿಸಿ ಕಳ್ಳತನ
ಬಿಗ್ ಬಾಸ್ ಮನೆಯಲ್ಲಿ ಕಳ್ಳರ ಕೈಚಳಕ; ಸೆಕ್ಯುರಿಟಿ ಕಣ್ಣು ತಪ್ಪಿಸಿ ಕಳ್ಳತನ
ಆಂಧ್ರದಲ್ಲಿ ಕಟ್ಟಿಗೆ ಬಡಿದಾಟದ ವೇಳೆ ಕಾಲ್ತುಳಿತ, ಓರ್ವ ಸಾವು
ಆಂಧ್ರದಲ್ಲಿ ಕಟ್ಟಿಗೆ ಬಡಿದಾಟದ ವೇಳೆ ಕಾಲ್ತುಳಿತ, ಓರ್ವ ಸಾವು
ಪೂಜೆಗೆ ತೆರಳುತ್ತಿದ್ದ ಸಚಿವರು, ಶಾಸಕರನ್ನು ಅಡ್ಡಗಟ್ಟಿದ ಎಸ್‌ಪಿ ರಿಷ್ಯಂತ್
ಪೂಜೆಗೆ ತೆರಳುತ್ತಿದ್ದ ಸಚಿವರು, ಶಾಸಕರನ್ನು ಅಡ್ಡಗಟ್ಟಿದ ಎಸ್‌ಪಿ ರಿಷ್ಯಂತ್