ಗುರುವಾರದಿಂದ (ಡಿ.26) ಶುರುವಾಗಲಿರುವ ಭಾರತದ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್ ಪ್ರಕಟಿಸಿದೆ. ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆಸೀಸ್ ಪಡೆ ಆಡುವ ಬಳಗದಲ್ಲಿ ಎರಡು ಬದಲಾವಣೆ ಮಾಡಿಕೊಂಡಿದೆ. ಅದರಂತೆ ನಾಥನ್ ಮೆಕ್ಸ್ವೀನಿ ಸ್ಥಾನದಲ್ಲಿ ಆರಂಭಿಕನಾಗಿ ಯುವ ದಾಂಡಿಗ ಸ್ಯಾಮ್ ಕೊನ್ಸ್ಟಾಸ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ಗಾಯದ ಕಾರಣ ಹೊರಗುಳಿದಿರುವ ಜೋಶ್ ಹ್ಯಾಝಲ್ವುಡ್ ಸ್ಥಾನದಲ್ಲಿ ಸ್ಕಾಟ್ ಬೋಲ್ಯಾಂಡ್ ಕಣಕ್ಕಿಳಿಯಲಿದ್ದಾರೆ.
ಈ ಪಂದ್ಯದಲ್ಲಿ ಆಸೀಸ್ ಪರ ಉಸ್ಮಾನ್ ಖ್ವಾಜಾ ಹಾಗೂ ಸ್ಯಾಮ್ ಕೊನ್ಸ್ಟಾಸ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದು, ಮೂರನೇ ಕ್ರಮಾಂಕದಲ್ಲಿ ಮಾರ್ನಸ್ ಲಾಬುಶೆನ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸ್ಟೀವ್ ಸ್ಮಿತ್ ಕಣಕ್ಕಿಳಿದರೆ, ಐದನೇ ಕ್ರಮಾಂಕದಲ್ಲಿ ಟ್ರಾವಿಸ್ ಹೆಡ್ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಮಿಚೆಲ್ ಮಾರ್ಷ್ ಏಳನೇ ಕ್ರಮಾಂಕದಲ್ಲಿ ಆಡಲಿದ್ದು, ವಿಕೆಟ್ ಕೀಪರ್ ಬ್ಯಾಟರ್ ಆಗಿ ಅಲೆಕ್ಸ್ ಕ್ಯಾರಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ವೇಗಿಗಳಾಗಿ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಹಾಗೂ ಸ್ಕಾಟ್ ಬೋಲ್ಯಾಂಡ್ ತಂಡದಲ್ಲಿದ್ದಾರೆ. ಇವರೊಂದಿಗೆ ಏಕೈಕ ಸ್ಪಿನ್ನರ್ ಆಗಿ ನಾಥನ್ ಲಿಯಾನ್ ಕಾಣಿಸಿಕೊಂಡಿದ್ದಾರೆ. ಅದರಂತೆ ಮೆಲ್ಬೋರ್ನ್ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಇದನ್ನೂ ಓದಿ: 22ನೇ ವಯಸ್ಸಿನಲ್ಲೇ ಸೈಮ್ ಅಯ್ಯೂಬ್ ಅಬ್ಬರ: ಸಚಿನ್, ವಿರಾಟ್ ಕೊಹ್ಲಿ ದಾಖಲೆ ಶೇಕಿಂಗ್
ಆಸ್ಟ್ರೇಲಿಯಾ ಟೆಸ್ಟ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಶಾನ್ ಅಬಾಟ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಸ್ಯಾಮ್ ಕೊನ್ಸ್ಟಾಸ್, ಮಾರ್ನಸ್ ಲಾನುಶೇನ್, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಜ್ಯೆ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್ , ಬ್ಯೂ ವೆಬ್‌ಸ್ಟರ್.
ಮೆಲ್ಬೋರ್ನ್ ಟೆಸ್ಟ್ ಪಂದ್ಯವು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿಯನ್ನು ಸುಗಮಗೊಳಿಸಲಿದೆ. ಅದರಲ್ಲೂ ಈ ಪಂದ್ಯದಲ್ಲಿ ಜಯಿಸುವ ತಂಡವು ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಹೊಂದಲಿದೆ. ಇದರಿಂದ ಐದನೇ ಟೆಸ್ಟ್ ಪಂದ್ಯದಲ್ಲಿ ಸೋತರೂ ಸರಣಿಯನ್ನು ಡ್ತಾ ಮಾಡಿಕೊಳ್ಳುವ ಅವಕಾಶ ಹೊಂದಲಿದೆ. ಹೀಗಾಗಿಯೇ ಮೆಲ್ಬೋರ್ನ್ ಮೈದಾನದಲ್ಲಿ ಉಭಯ ತಂಡಗಳಿಂದ ಭರ್ಜಿರ ಪೈಪೋಟಿ ನಿರೀಕ್ಷಿಸಬಹುದು.