AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಟೀಮ್ ಇಂಡಿಯಾದಿಂದ ಪ್ರಮುಖ ಬೌಲರ್ ಔಟ್..!

Avesh Khan: ಟೀಮ್ ಇಂಡಿಯಾ ಈಗಾಗಲೇ ಸೂಪರ್-4 ಹಂತದ 2 ಪಂದ್ಯಗಳನ್ನು ಆಡಿದ್ದು, ಇನ್ನು ಏಕೈಕ ಪಂದ್ಯ ಮಾತ್ರ ಉಳಿದಿದೆ. ಹಾಗೆಯೇ ಫೈನಲ್ ಪ್ರವೇಶಿಸಿದರೆ ಮತ್ತೊಂದು ಪಂದ್ಯವಾಡಬಹುದು.

Asia Cup 2022: ಟೀಮ್ ಇಂಡಿಯಾದಿಂದ ಪ್ರಮುಖ ಬೌಲರ್ ಔಟ್..!
team India
TV9 Web
| Updated By: ಝಾಹಿರ್ ಯೂಸುಫ್|

Updated on:Sep 06, 2022 | 9:14 PM

Share

Asia Cup 2022: ಏಷ್ಯಾಕಪ್ ಟೂರ್ನಿಯಿಂದ ಟೀಮ್ ಇಂಡಿಯಾದ (Team India) ಮತ್ತೋರ್ವ ಆಟಗಾರ ಹೊರಬಿದ್ದಿದ್ದಾರೆ. ಕಳೆದೆರೆಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೇಗಿ ಅವೇಶ್ ಖಾನ್ (Avesh Khan) ಇದೀಗ ಏಷ್ಯಾಕಪ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಅವರ ಬದಲಿಗೆ ಮೀಸಲು ಆಟಗಾರನಾಗಿ ದೀಪಕ್ ಚಹರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಕ್ಕೂ ಮುನ್ನ ರವೀಂದ್ರ ಜಡೇಜಾ ಕೂಡ ಗಾಯಗೊಂಡು ಹೊರಬಿದ್ದಿದ್ದರು. ಅವರ ಸ್ಥಾನದಲ್ಲಿ ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದರು. ಇದೀಗ ಅವೇಶ್ ಖಾನ್ ಕೂಡ ಅರ್ಧದಲ್ಲೇ ಏಷ್ಯಾಕಪ್​ನಿಂದ ಹೊರ ನಡೆದಿದ್ದು, ಹೀಗಾಗಿ ಮೀಸಲು ಆಟಗಾರರ ಪಟ್ಟಿಯಲ್ಲಿದ್ದ ಮತ್ತೋರ್ವ ವೇಗಿ ದೀಪಕ್ ಚಹರ್ ಅವರನ್ನು ತಂಡಕ್ಕೆ ಸೇರಿಕೊಳ್ಳಲಾಗಿದೆ.

ಇದಕ್ಕೂ ಮುನ್ನ ಅನಾರೋಗ್ಯದ ಕಾರಣ ಅವೇಶ್ ಖಾನ್ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಟೀಮ್ ಇಂಡಿಯಾ ಈಗಾಗಲೇ ಸೂಪರ್-4 ಹಂತದ 2 ಪಂದ್ಯಗಳನ್ನು ಆಡಿದ್ದು, ಇನ್ನು ಏಕೈಕ ಪಂದ್ಯ ಮಾತ್ರ ಉಳಿದಿದೆ. ಹಾಗೆಯೇ ಫೈನಲ್ ಪ್ರವೇಶಿಸಿದರೆ ಮತ್ತೊಂದು ಪಂದ್ಯವಾಡಬಹುದು. ಅದರಂತೆ ಅಫ್ಘಾನಿಸ್ತಾನ್ ವಿರುದ್ದ ನಡೆಯಲಿರುವ ಮೂರನೇ ಪಂದ್ಯದ ವೇಳೆ ಟೀಮ್ ಇಂಡಿಯಾದಲ್ಲಿ ದೀಪಕ್ ಚಹರ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಏಷ್ಯಾಕಪ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಗಾಯಗೊಂಡಿದ್ದರು. ಹಾಗೆಯೇ ಹರ್ಷಲ್ ಪಟೇಲ್ ಕೂಡ ಗಾಯದ ಕಾರಣ ಹೊರಗುಳಿದಿದ್ದರು. ಹೀಗಾಗಿ ತಂಡದಲ್ಲಿ ಅವೇಶ್ ಖಾನ್ ಹಾಗೂ ಅರ್ಷದೀಪ್ ಸಿಂಗ್ ಸ್ಥಾನ ಪಡೆದಿದ್ದರು. ಆದರೆ ಇಬ್ಬರು ಯುವ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ

ಇದೀಗ ಅವೇಶ್ ಖಾನ್ ಹೊರಗುಳಿದಿರುವ ಕಾರಣ ದೀಪಕ್ ಚಹರ್ ಆಯ್ಕೆಯಾಗಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಮೂವರು ಪ್ರಮುಖ ವೇಗಿಗಳೊಂದಿಗೆ ಕಣಕ್ಕಿಳಿಯು ಸಾಧ್ಯತೆಯಿದೆ. ಅದರಂತೆ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಹಾಗೂ ದೀಪಕ್ ಚಹರ್ ಕಾಣಿಸಿಕೊಳ್ಳಬಹುದು.

ಟೀಮ್ ಇಂಡಿಯಾ ಹೀಗಿದೆ:

ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌, ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ದೀಪಕ್ ಚಹರ್, ಯುಜ್ವೇಂದ್ರ ಚಹಲ್‌, ಆರ್‌ ಅಶ್ವಿನ್‌, ರವಿ ಬಿಷ್ಣೋಯ್‌.

ಮೀಸಲು ಆಟಗಾರ:  ಶ್ರೇಯಸ್‌ ಅಯ್ಯರ್‌.

Published On - 9:12 pm, Tue, 6 September 22