AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಅಕ್ಷರ್ ಪಟೇಲ್​ಗೆ 12 ಲಕ್ಷ ರೂ. ದಂಡ!

IPL 2026: ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಅಲ್ಲದೆ ತಂಡದ ನಾಯಕನಿಗೆ ದಂಡ ವಿಧಿಸಲಾಗುತ್ತದೆ.

IPL 2026: ಅಕ್ಷರ್ ಪಟೇಲ್​ಗೆ 12 ಲಕ್ಷ ರೂ. ದಂಡ!
Axar Patel
ಝಾಹಿರ್ ಯೂಸುಫ್
|

Updated on: May 12, 2026 | 5:03 PM

Share

IPL 2026: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಭರ್ಜರಿ ಜಯ ಸಾಧಿಸಿದೆ. ಆದರೆ, ತಂಡದ ಗೆಲುವಿನ ಸಂತೋಷದ ನಡುವೆಯೇ ನಾಯಕ ಅಕ್ಷರ್ ಪಟೇಲ್‌ಗೆ (Axar Patel) ಐಪಿಎಲ್ ಆಡಳಿತ ಮಂಡಳಿಯು ಭಾರಿ ಮೊತ್ತದ ದಂಡ ವಿಧಿಸಿ ಶಾಕ್ ನೀಡಿದೆ.

12 ಲಕ್ಷ ರೂಪಾಯಿ ದಂಡ:

ಪಂದ್ಯದ ವೇಳೆ ನಿಗದಿತ ಸಮಯಕ್ಕೆ ಓವರ್‌ಗಳನ್ನು ಪೂರ್ಣಗೊಳಿಸದ ಕಾರಣ (Slow Over-rate) ಅಕ್ಷರ್ ಪಟೇಲ್‌ಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಇದು ಈ ಸೀಸನ್‌ನಲ್ಲಿ ಡೆಲ್ಲಿ ತಂಡದ ಮೊದಲ ತಪ್ಪಾಗಿದೆ, ಆದ್ದರಿಂದ ಕೇವಲ ನಾಯಕನಿಗೆ ಮಾತ್ರ ದಂಡ ವಿಧಿಸಲಾಗಿದೆ.

ಇದನ್ನೂ ಓದಿ: ಪಾಕ್ ಆಟಗಾರನ ಕಳ್ಳಾಟ ಬಯಲು..!

ಐಪಿಎಲ್ ಸ್ಲೋಓವರ್​ ರೇಟ್ ನಿಯಮ:

  • ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ.
  • ಈ ತಪ್ಪು ಮಾಡಿದ ಅಂದರೆ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ತಂಡದ ನಾಯಕನಿಗೆ ಪಂದ್ಯದ ಬಳಿಕ 12 ಲಕ್ಷ ರೂ., ದಂಡ ವಿಧಿಸಲಾಗುತ್ತದೆ.
  • ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ ಎಲ್ಲಾ ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ
  • ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕನಿಗೆ ಡಿಮೆರಿಟ್ ಪಾಯಿಂಟ್ ನೀಡಲಾಗುತ್ತದೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.

ಇನ್ನು ನಾಯಕ ನಾಯಕನ ಖಾತೆಯಲ್ಲಿ ಡಿಮೆರಿಟ್ ಪಾಯಿಂಟ್‌ಗಳು ಒಂದು ನಿರ್ದಿಷ್ಟ ಮಿತಿಯನ್ನು (ಉದಾಹರಣೆಗೆ 3 ವರ್ಷಗಳಲ್ಲಿ 4 ಪಾಯಿಂಟ್ಸ್) ಮೀರಿದಾಗ ಮಾತ್ರ ಪಂದ್ಯದ ನಿಷೇಧ ಹೇರಬಹುದು. ಅಂದರೆ ಅತ್ಯಂತ ಗಂಭೀರ ಅಥವಾ ಅತಿ ಹೆಚ್ಚು ಬಾರಿ ತಪ್ಪು ಮಾಡಿದಾಗ ಮಾತ್ರ ನಾಯಕನನ್ನು ಒಂದು ಪಂದ್ಯದಿಂದ ನಿಷೇಧಿಸಲಾಗುತ್ತದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More