AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Axar Patel Covid Positive: ಅಕ್ಷರ್ ಪಟೇಲ್​ಗೆ ಕೊರೊನಾ ದೃಢ: ಟೀಮ್ ಇಂಡಿಯಾದಲ್ಲಿ ಹೆಚ್ಚಿದ ಆತಂಕ

Axar Patel Tested Positive: ಈಗಾಗಲೇ ಟೀಮ್ ಇಂಡಿಯಾ ಆಟಗಾರರಾದ ಶಿಖರ್ ಧವನ್, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್ ಮತ್ತು ನವ್​ದೀಪ್ ಸೈನಿಗೆ ಆರ್​ಟಿ-ಪಿಸಿಆರ್ ಟೆಸ್ಟ್​ನಲ್ಲಿ ಕೋವಿಡ್ ಇರುವುದು ಕಂಡುಬಂದಿದೆ. ಇದೀಗ ಮತ್ತೊಬ್ಬ ಸ್ಟಾರ್ ಆಟಗಾರ ಕೊರೊನಾಕ್ಕೆ ತುತ್ತಾಗಿದ್ದಾರೆ.

Axar Patel Covid Positive: ಅಕ್ಷರ್ ಪಟೇಲ್​ಗೆ ಕೊರೊನಾ ದೃಢ: ಟೀಮ್ ಇಂಡಿಯಾದಲ್ಲಿ ಹೆಚ್ಚಿದ ಆತಂಕ
Axar Patel, Team India
TV9 Web
| Edited By: |

Updated on:Feb 03, 2022 | 12:38 PM

Share

ಭಾರತೀಯ ಕ್ರಿಕೆಟ್​ನಲ್ಲಿ (Indian Cricket Team) ಕೊರೊನಾ ಆತಂಕ ಮನೆಮಾಡಿದೆ. ಒಬ್ಬರ ಹಿಂದೆ ಒಬ್ಬರಂತೆ ಪ್ರಮುಖ ಆಟಗಾರರಿಗೆ ಕೊರೊನಾ (Corona) ಪಾಸಿಟಿವ್ ಕಂಡುಬರುತ್ತಿದೆ. ಈಗಾಗಲೇ ಟೀಮ್ ಇಂಡಿಯಾ ಆಟಗಾರರಾದ ಶಿಖರ್ ಧವನ್, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್ ಮತ್ತು ನವ್​ದೀಪ್ ಸೈನಿಗೆ ಆರ್​ಟಿ-ಪಿಸಿಆರ್ ಟೆಸ್ಟ್​ನಲ್ಲಿ ಕೋವಿಡ್ ಇರುವುದು ಕಂಡುಬಂದಿದೆ. ಇದೀಗ ಮತ್ತೊಬ್ಬ ಸ್ಟಾರ್ ಆಟಗಾರ ಕೊರೊನಾಕ್ಕೆ ತುತ್ತಾಗಿದ್ದಾರೆ. ಹೌದು, ಆಲ್ರೌಂಡರ್ ಅಕ್ಷರ್ ಪಟೇಲ್ (Axar Patel) ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ವರದಿಯಾಗಿದೆ. ಆದರೆ, ಇವರು ಸದ್ಯ ಟೀಮ್ ಇಂಡಿಯಾ ಕ್ಯಾಂಪ್ ಜೊತೆಗೆ ಅಹ್ಮದಾಬಾದ್​ನಲ್ಲಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗದ ಅಕ್ಷರ್ ಟಿ20 ಸರಣಿಯಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಇವರು ಮನೆಯಲ್ಲೇ ಇದ್ದಾರೆ. ಇಲ್ಲಿಯೇ ಇವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ ಎಂದು ವರದಿಯಾಗಿದೆ.

ಅಕ್ಷರ್ ಪಟೇಲ್ ಈ ಹಿಂದೆ ಅನೇಕ ಪಂದ್ಯಗಳಿಂದ ಹೊರಗುಳಿದಿದ್ದರು. ಇಂಜುರಿಯಿಂದಾಗಿ ಕಳೆದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಇವರು ಅಲಭ್ಯರಾಗಿದ್ದರು. ಸದ್ಯ ಫೆಬ್ರವರಿ 16 ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ವೇಳೆ ಇವರು ಗುಣಮುಖರಾಗದಿದ್ದಲ್ಲಿ ಈ ಸರಣಿಗೂ ಅಲಭ್ಯರಾಗುವುದು ಖಚಿತ.

ಮಯಾಂಕ್ ಇನ್ – ಟ್ರೈನಿಂಗ್ ಸೆಷನ್ ಕ್ಯಾನ್ಸಲ್:

ಭಾರತದ ಕೆಲ ಆಟಗಾರರು ಮತ್ತು ತರಬೇತಿ ಸಿಬ್ಬಂದಿ ಒಳಗೊಂಡಂತೆ ಒಟ್ಟು 8 ಸದಸ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಭಾರತದ ಟ್ರೈನಿಂಗ್ ಸೆಷನ್​ ಅನ್ನು ಸ್ಥಗಿತಗೊಳಿಸಲಾಗಿದೆ. ಇಂದು ಮತ್ತೆ ಎಲ್ಲಾ ಆಟಗಾರರನ್ನು ಕೋವಿಡ್‌ ಟೆಸ್ಟ್‌ಗೆ ಒಳಪಡಿಸಲು ಬಿಸಿಸಿಐ ನಿರ್ಧರಿಸಿದೆ. ಈ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಇದೀಗ ಭಾರತ- ವೆಸ್ಟ್ ಇಂಡೀಸ್ ಏಕದಿನ ಸರಣಿ ನಿಗದಿತ ದಿನಾಂಕಕ್ಕೆ ಆರಂಭವಾಗುವುದು ಅನುಮಾನ ಎನ್ನಲಾಗುತ್ತಿದೆ. ಫೆಬ್ರವರಿ 6ಕ್ಕೆ ಆರಂಭವಾಗಬೇಕಿದ್ದ ಇಂಡೋ- ವಿಂಡೀಸ್ ಮೊದಲ ಏಕದಿನ ಸರಣಿ ಮುಂದಕ್ಕೋಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದೆ.

ಬಿಸಿಸಿಐ ಗುರುವಾರ ಮತ್ತೊಂದು ಸುತ್ತಿನ ಆರ್​ಟಿ- ಪಿಸಿಆರ್ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಪಾಸಿಟಿವ್ ಆದವರು ಕೊಠಡಿಗಳಲ್ಲಿ ಪ್ರತ್ಯೇಕವಾಗುಳಿದು, ಸರಕಾರದ ಮಾರ್ಗಸೂಚಿಯನ್ನು ಪಾಲಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇನ್​ಸೈಡ್ ಸ್ಫೋರ್ಟ್ಸ್​ಗೆ ಬಿಸಿಸಿಐ ಮೂಲಗಳು ಮಾಹಿತಿ ತಿಳಿಸಿದ್ದು, “ಸದ್ಯಕ್ಕೆ ನಿಗದಿತ ದಿನಾಂಕದಂದೇ ಸರಣಿ ಆರಂಭವಾಗಲಿದೆ. ಆದರೆ, ಎಲ್ಲಾದರು ಇಂದು ಅಥವಾ ನಾಳೆ ತಂಡದಲ್ಲಿ ಪಾಸಿಟಿವ್ ಕೇಸ್​ಗಳ ಸಂಖ್ಯೆ ಅಧಿಕವಾದರೆ ಪಂದ್ಯದ ಆರಂಭವನ್ನು ಮುಂದೂಡಬೇಕಾದ ಅನಿವಾರ್ಯತೆ ಎದುರಾಗಬಹುದು,” ಎಂದು ಹೇಳಿದ್ದಾರೆ.

ಈ ಬೆಳವಣಿಗೆ ಮಧ್ಯೆ ಮತ್ತೊಬ್ಬ ಹೊಸ ಆಟಗಾರ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ. ಬಿಸಿಸಿಐ ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು, “ಆರ್​ಟಿ-ಪಿಸಿಆರ್ ಟೆಸ್ಟ್​ನಲ್ಲಿ ಭಾರತದ 7 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದ ನಂತರ ಭಾರತ ಏಕದಿನ ತಂಡಕ್ಕೆ ಹಿರಿಯ ಆಯ್ಕೆ ಸಮಿತಿ ಮಯಾಂಕ್ ಅಗರ್ವಾಲ್ ಅವರನ್ನು ಆಯ್ಕೆ ಮಾಡಿದೆ,” ಎಂದು ಬಿಸಿಸಿಐ ತಿಳಿಸಿದೆ.

VVS Laxman: ಯಶ್ ಧುಲ್ ಶತಕ ಸಿಡಿಸುತ್ತಿದ್ದಂತೆ ಡಗೌಟ್​ನಲ್ಲಿದ್ದ ವಿವಿಎಸ್ ಲಕ್ಷ್ಮಣ್ ಮಾಡಿದ್ದೇನು ನೋಡಿ

Ind vs WI: ರೋಹಿತ್ ಪಡೆಯ ಟ್ರೈನಿಂಗ್ ಸೆಷನ್ ಕ್ಯಾನ್ಸಲ್: ಭಾರತ-ವೆಸ್ಟ್ ಇಂಡೀಸ್ ಏಕದಿನ ಅನುಮಾನ

Published On - 12:37 pm, Thu, 3 February 22

ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ