Axar Patel: ಅಬ್ಬರದೊಂದಿಗೆ ಹಲವು ದಾಖಲೆ ನಿರ್ಮಿಸಿದ ಅಕ್ಷರ್ ಪಟೇಲ್

India vs West Indies: ತಂಡದ ಮೊತ್ತ 5 ವಿಕೆಟ್ ನಷ್ಟಕ್ಕೆ 205 ಆಗಿದ್ದ ವೇಳೆ ಕಣಕ್ಕಿಳಿದ ಅಕ್ಷರ್ ಪಟೇಲ್ ವೆಸ್ಟ್ ಇಂಡೀಸ್ ಬೌಲರ್​ಗಳ ವಿರುದ್ದ ಅಕ್ಷರಶಃ ಅಬ್ಬರಿಸಿದ್ದರು.

Axar Patel: ಅಬ್ಬರದೊಂದಿಗೆ ಹಲವು ದಾಖಲೆ ನಿರ್ಮಿಸಿದ ಅಕ್ಷರ್ ಪಟೇಲ್
Kapil Dev - Axar Patel
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 25, 2022 | 10:56 AM

ಭಾರತ-ವೆಸ್ಟ್ ಇಂಡೀಸ್ (India vs West Indies) ನಡುವಣ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 2 ವಿಕೆಟ್​ಗಳ ರೋಚಕ ಗೆಲುವು ಸಾಧಿಸಿದೆ. ಈ ಗೆಲುವಿನ ರೂವಾರಿ ಯುವ ಆಲ್​ರೌಂಡರ್ ಅಕ್ಷರ್ ಪಟೇಲ್ (Axar Patel). ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಶಾಯ್ ಹೋಪ್ (115) ಅವರ ಶತಕದ ನೆರವಿನಿಂದ ನಿಗದಿತ 50 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 311 ರನ್​​ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಟೀಮ್ ಇಂಡಿಯಾ (Team India) ಪರ ಶುಭ್​ಮನ್​ ಗಿಲ್ 43 ರನ್​ಗಳಿಸಿದರೆ, ಶ್ರೇಯಸ್ ಅಯ್ಯರ್ 63 ರನ್​ಗಳನ್ನು ಬಾರಿಸಿದ್ದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ 54 ರನ್​ಗಳನ್ನು ಬಾರಿಸುವ ಮೂಲಕ ಸಂಜು ಸ್ಯಾಮ್ಸನ್ ಉಪಯುಕ್ತ ಕಾಣಿಕೆ ನೀಡಿದ್ದರು. ಇದಾಗ್ಯೂ ಟೀಮ್ ಇಂಡಿಯಾ ಗೆಲುವು ಖಚಿತವಾಗಿರಲಿಲ್ಲ. ಆದರೆ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಕ್ಷರ್ ಪಟೇಲ್ ಇಡೀ ಪಂದ್ಯದ ಚಿತ್ರಣವನ್ನೇ ಬದಲಿಸಿ ಬಿಟ್ಟರು.

ತಂಡದ ಮೊತ್ತ 5 ವಿಕೆಟ್ ನಷ್ಟಕ್ಕೆ 205 ಆಗಿದ್ದ ವೇಳೆ ಕಣಕ್ಕಿಳಿದ ಅಕ್ಷರ್ ಪಟೇಲ್ ವೆಸ್ಟ್ ಇಂಡೀಸ್ ಬೌಲರ್​ಗಳ ವಿರುದ್ದ ಅಕ್ಷರಶಃ ಅಬ್ಬರಿಸಿದ್ದರು. ಪರಿಣಾಮ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಈ ಮೂಲಕ ವೆಸ್ಟ್ ಇಂಡೀಸ್ ವಿರುದ್ದ ಅತೀ ವೇಗವಾಗಿ ಅರ್ಧಶತಕ ಬಾರಿಸಿದ ಟೀಮ್ ಇಂಡಿಯಾದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಅಕ್ಷರ್ ತಮ್ಮದಾಗಿಸಿಕೊಂಡರು.

ಇದಾಗ್ಯೂ ದಶಕಗಳ ಹಿಂದೆ ಕಪಿಲ್ ದೇವ್ ಬರೆದಿದ್ದ ದಾಖಲೆಯನ್ನು ಮುರಿಯಲು ಸಾಧ್ಯವಾಗಲಿಲ್ಲ. 1983 ರಲ್ಲಿ ಕಪಿಲ್ ದೇವ್ ವೆಸ್ಟ್ ಇಂಡೀಸ್ ವಿರುದ್ದ ಕೇವಲ 22 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ಅಬ್ಬರಿಸಿದ್ದರು. ಇದೀಗ ಅಕ್ಷರ್ ಪಟೇಲ್ 27 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಈ ದಾಖಲೆಯ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ಈ ಪಂದ್ಯದಲ್ಲಿ 35 ಎಸೆತಗಳನ್ನು ಎದುರಿಸಿದ ಅಕ್ಷರ್ ಪಟೇಲ್ 5 ಸಿಕ್ಸ್ ಹಾಗೂ 3 ಫೋರ್​ನೊಂದಿಗೆ ಅಜೇಯ 64 ರನ್ ಬಾರಿಸಿದ್ದರು. ಅದರಲ್ಲೂ 50ನೇ ಓವರ್​ನ 4ನೇ ಎಸೆತದಲ್ಲಿ ಸಿಕ್ಸ್​ ಸಿಡಿಸುವ ಮೂಲಕ ಟೀಮ್ ಇಂಡಿಯಾಗೆ 2 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟಿದ್ದರು. ವಿಶೇಷ ಎಂದರೆ ಈ ಸಿಕ್ಸ್​ನೊಂದಿಗೆ ಅಕ್ಷರ್ ಪಟೇಲ್ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯನ್ನೂ ಕೂಡ ಮುರಿದಿದ್ದಾರೆ.

ಟೀಮ್ ಇಂಡಿಯಾ ಪರ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅತೀ ಹೆಚ್ಚು ಸಿಕ್ಸ್ ಬಾರಿಸಿದ ದಾಖಲೆ ಧೋನಿ ಹಾಗೂ ಯೂಸುಫ್ ಪಠಾಣ್ ಹೆಸರಿನಲ್ಲಿತ್ತು. 2005 ರಲ್ಲಿ ಧೋನಿ ಜಿಂಬಾಬ್ವೆ ವಿರುದ್ದದ ಪಂದ್ಯದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದು 3 ಸಿಕ್ಸ್​ ಬಾರಿಸಿದ್ದರು. ಇದೀಗ ವೆಸ್ಟ್ ಇಂಡೀಸ್ ವಿರುದ್ದ 7ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಅಕ್ಷರ್ ಪಟೇಲ್ 5 ಸಿಕ್ಸ್ ಬಾರಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಒಟ್ಟಿನಲ್ಲಿ ಅಮೋಘ ಇನಿಂಗ್ಸ್ ಆಡುವ ಮೂಲಕ ಅಕ್ಷರ್ ಪಟೇಲ್ ಹಲವು ದಾಖಲೆಗಳನ್ನು ಬರೆದಿರುವುದು ವಿಶೇಷ.

Published On - 10:54 am, Mon, 25 July 22

ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ